ಬೆಳಗಾವಿ: 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್ ಹೊಂದಿದ್ದರೆ ಕೂಡಲೇ ಕಾರ್ಡ್ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಇದಲ್ಲದೆ, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಹಾಗೂ 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರು BPL ಕಾರ್ಡ್ ಹೊಂದಲು ಸಾಧ್ಯವಿಲ್ಲ ಎಂದು ಸಹ ಹೇಳಿದರು. ಇಂಥ BPL ಕಾರ್ಡ್ಗಳನ್ನ ಮಾ.31ರೊಳಗೆ ಹಿಂದಿರುಗಿಸಬೇಕು. ಇಲ್ಲದಿದ್ರೆ ನಾವೇ ಸರ್ವೆ ಮಾಡಿ ವಾಪಸ್ ಪಡೆಯುತ್ತೇವೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದರು.
ಇದನ್ನೂ ಓದಿ: LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ
Published On - 11:28 pm, Sun, 14 February 21