AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Jun 05, 2023 | 3:36 PM

ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದೆ. ಮಂಗಳವಾರದಿಂದಲೇ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ಕಳೆದ 3 ತಿಂಗಳಿಂದ ಆಹಾರ ಇಲಾಖೆ ವೆಬ್​ಸೈಟ್​ ಕ್ಲೋಸ್ ಮಾಡಲಾಗಿತ್ತು. ರಾಷ್ಟ್ರೀಯ ಆಹಾರ ಹಕ್ಕು ಕಾಯ್ದೆಯ ಪ್ರಕಾರ ಮಿತಿ ಮೀರಿದ್ದರಿಂದ ವೆಬ್​ಸೈಟ್ ಮುಚ್ಚಲಾಗಿತ್ತು.

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ. ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಮಾನದಂಡ ನಿಗದಿಪಡಿಸಲಿದೆ.

ಈ ಮಧ್ಯೆ, ಜುಲೈ ತಿಂಗಳಿಂದ ‘ಅನ್ನಭಾಗ್ಯ’ ಯೋಜನೆಯಡಿ ಪಡಿತರ ಧಾನ್ಯ ವಿತರಣೆ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಸ್ತುತ 1.26 ಕೋಟಿ ಬಿಪಿಎಲ್​ ಕಾರ್ಡ್​ದಾರರಿದ್ದು, 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Yadgir News: ಶಹಾಪುರ ನಗರದಲ್ಲಿ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯೇ ಕಳವು!

‘ಅನ್ನಭಾಗ್ಯ’ ಯೋಜನೆ ಜಾರಿಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೆಲ್ಲದರ ನಡುವೆ ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಇನ್ನಷ್ಟೇ ಬಿಪಿಎಲ್ ಕಾರ್ಡ್ ನೀಡಬೇಕಿದೆ.

ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಕೂಡ ಒಂದಾಗಿದ್ದು, ಇದರ ಅನುಷ್ಠಾನಕ್ಕೆ ಬಿಪಿಎಲ್​ ಕಾರ್ಡ್ ಬಹುಮುಖ್ಯವಾಗಿದೆ. ಬಿಪಿಎಲ್ ಕಾರ್ಡ್​​ದಾರರು ಯೋಜನೆಯ ಫಲಾನುಭವಿಗಳಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Mon, 5 June 23

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್