ಬೆಂಗಳೂರು: ಬಿಪಿಎಲ್ ಕಾರ್ಡ್ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದೆ. ಮಂಗಳವಾರದಿಂದಲೇ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ಕಳೆದ 3 ತಿಂಗಳಿಂದ ಆಹಾರ ಇಲಾಖೆ ವೆಬ್ಸೈಟ್ ಕ್ಲೋಸ್ ಮಾಡಲಾಗಿತ್ತು. ರಾಷ್ಟ್ರೀಯ ಆಹಾರ ಹಕ್ಕು ಕಾಯ್ದೆಯ ಪ್ರಕಾರ ಮಿತಿ ಮೀರಿದ್ದರಿಂದ ವೆಬ್ಸೈಟ್ ಮುಚ್ಚಲಾಗಿತ್ತು.
ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ. ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಮಾನದಂಡ ನಿಗದಿಪಡಿಸಲಿದೆ.
ಈ ಮಧ್ಯೆ, ಜುಲೈ ತಿಂಗಳಿಂದ ‘ಅನ್ನಭಾಗ್ಯ’ ಯೋಜನೆಯಡಿ ಪಡಿತರ ಧಾನ್ಯ ವಿತರಣೆ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಸ್ತುತ 1.26 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದು, 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: Yadgir News: ಶಹಾಪುರ ನಗರದಲ್ಲಿ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯೇ ಕಳವು!
‘ಅನ್ನಭಾಗ್ಯ’ ಯೋಜನೆ ಜಾರಿಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೆಲ್ಲದರ ನಡುವೆ ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಇನ್ನಷ್ಟೇ ಬಿಪಿಎಲ್ ಕಾರ್ಡ್ ನೀಡಬೇಕಿದೆ.
ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಕೂಡ ಒಂದಾಗಿದ್ದು, ಇದರ ಅನುಷ್ಠಾನಕ್ಕೆ ಬಿಪಿಎಲ್ ಕಾರ್ಡ್ ಬಹುಮುಖ್ಯವಾಗಿದೆ. ಬಿಪಿಎಲ್ ಕಾರ್ಡ್ದಾರರು ಯೋಜನೆಯ ಫಲಾನುಭವಿಗಳಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:33 pm, Mon, 5 June 23