ದೇವನಹಳ್ಳಿ: ಮಧ್ಯಾಹ್ನ ಊಟವಿಲ್ಲದೆ ಕೊರೊನಾ ಸೋಂಕಿತರು ಪರದಾಟ ಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಸರ್ಕಾರಿ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಸಂಬಂಧಪಟ್ಟವರು ಬಿಲ್ ಪೇ ಮಾಡಿಲ್ಲವೆಂದು ಗುತ್ತಿಗೆದಾರರು ಊಟ ಪೂರೈಸಿಲ್ಲ. ಕಳೆದ 5 ತಿಂಗಳಿನಿಂದ 7 ಲಕ್ಷ ರೂಪಾಯಿ ಬಿಲ್ ಪೆಂಡಿಂಗ್ ಇದೆ ಎಂದು ತಿಳಿದುಬಂದಿದೆ. ಇದರಿಂದ ಮಧ್ಯಾಹ್ನ ಊಟ ಇಲ್ಲದೆ 91 ಸೋಂಕಿತರು ಕಷ್ಟ ಅನುಭವಿಸಿದ್ದಾರೆ. ಸ್ಥಳೀಯ ಸೋಂಕಿತರಿಗೆ ಹೇಗೋ ಸಂಬಂಧಿಕರಿಂದ ಊಟ ರವಾನೆಯಾಗಿದೆ.
ಯಾದಗಿರಿ: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ
ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ ಮಾಡುತ್ತಿದ್ದ ಯಾದಗಿರಿಯ ಮೂವರನ್ನು ಬಂಧಿಸಲಾಗಿದೆ. ಯಾದಗಿರಿಯಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ಬಂಧಿತರಿಂದ 2 ರೆಮ್‌ಡಿಸಿವಿರ್ ವಯಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ರೆಮ್‌ಡಿಸಿವಿರ್ ಸಿಕ್ಕಿದ್ದು ಹೇಗೆ? ಅದನ್ನು ಯಾರಿಗೆ ಮಾರಾಟ ಮಾಡುತ್ತಿದ್ದರು ಎಂಬ ಬಗ್ಗೆ ತನಿಖೆ ಇನ್ನಷ್ಟೇ ನಡೆಯಬೇಕಿದೆ.
ಇಬ್ಬರು ಆರೋಪಿಗಳು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ದಾಳಿದ ಮಾಡಿದ ಪೊಲೀಸರು ರೆಮ್‌ಡಿಸಿವಿರ್ ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚೆಗೆ ರೆಮ್ಡಿಸಿವರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಜಿಲ್ಲಾ ಅಪರಾಧ ವಿಭಾಗದ ಸಿಪಿಐ ಸುನೀಲ್ ಮೂಲಿಮನಿ ನೇತೃತ್ವದಲ್ಲಿ, ಎಸ್ಪಿ ಕಿಶೋರ್ ಬಾಬು ವಿಶೇಷ ತಂಡ ರಚನೆ ಮಾಡಿದ್ದರು.
ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ಊಟ
ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ ವಿತರಣೆಗೆ ಸಂಬಂಧಿಸಿ ರಾಜ್ಯ ಸರ್ಕಾರ ತಕ್ಷಣ 25 ಕೋಟಿ ರೂ. ಬಿಡುಗಡೆ ಮಾಡಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆಗೆ ಸರ್ಕಾರ ಆದೇಶ ಮಾಡಿತ್ತು. ಬೆಳಗ್ಗೆ ಉಪಾಹಾರ, ಮಧ್ಯಾಹ್ನ, ರಾತ್ರಿ ಉಚಿತ ಊಟ ವಿತರಣೆ ಮಾಡುವಂತೆ ಸೂಚಿಸಿತ್ತು.
ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆಗೆ ಸೂಚನೆ ನೀಡಲಾಗಿದೆ. ಲಾಕ್ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಂದರೆ, ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ ನೀಡುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಪತ್ರದ ಮೂಲಕ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಈ ಬಗ್ಗೆ ಆದೇಶಿಸಿದ್ದಾರೆ. ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟ ಒದಗಿಸಲು ನಿರ್ದೇಶನ ನೀಡಿದ್ದಾರೆ.
ಲಾಕ್‌ಡೌನ್‌ನಿಂದ ಬಡವರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ, ಆಹಾರ ಭದ್ರತೆ ಒದಗಿಸಲು ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು. ದಿನಗೂಲಿ ಕಳೆದುಕೊಂಡವರಿಗೆ ಆಹಾರ ಭದ್ರತೆ ಒದಗಿಸಿ. ಗ್ರಾಮಾಂತರ ಪ್ರದೇಶಗಳಿಗೂ ಆಹಾರ ತಲುಪಿಸಿ. ದಾಸೋಹ ಹೆಲ್ಪ್‌ಲೈನ್ ಮರು ಆರಂಭಿಸಲು ಕೋರ್ಟ್ ಸೂಚನೆ ನೀಡಿತ್ತು.
ಇದನ್ನೂ ಓದಿ: ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ನ ರೂಪಾಂತರಿ ವಿರುದ್ಧ ಲಸಿಕೆ ಪರಿಣಾಮಕಾರಿ : ವಿಶ್ವ ಆರೋಗ್ಯ ಸಂಸ್ಥೆ
‘ಸರಿಗಮಪ’ ಸುಬ್ರಮಣಿ ಪತ್ನಿ ಸಾವಿನ ಕೇಸ್ಗೆ ಟ್ವಿಸ್ಟ್; ಕೊರೊನಾ ಅಲ್ಲ, ಆತ್ಮಹತ್ಯೆಯಿಂದ ನಿಧನ?
Published On - 8:12 pm, Tue, 11 May 21