PUC Exam 2021: ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ನಡೆಸುತ್ತಿರುವುದು ಮೌಲ್ಯಮಾಪನ ಮಾತ್ರ, ಪರೀಕ್ಷೆ ಅಲ್ಲ: ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

| Updated By: guruganesh bhat

Updated on: Jun 11, 2021 | 6:24 PM

1st PUC Exams: ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಅಸೈನ್​ಮೆಂಟ್​ ಸಲ್ಲಿಸಬೇಕಿಲ್ಲ. ಮಕ್ಕಳ‌ ಹಿತದೃಷ್ಟಿಯಿಂದ‌ ಈ ನಿರ್ಧಾರ ಕೈಗೊಂಡಿದ್ದೇವೆ. ಈ ನಿರ್ಧಾರದ ಕುರಿತು ಅನವಶ್ಯಕ‌‌ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. 

PUC Exam 2021: ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ನಡೆಸುತ್ತಿರುವುದು ಮೌಲ್ಯಮಾಪನ ಮಾತ್ರ, ಪರೀಕ್ಷೆ ಅಲ್ಲ: ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ - ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ
Follow us on

ಬೆಂಗಳೂರು: ಪ್ರಥಮ‌ ಪಿಯು ವಿದ್ಯಾರ್ಥಿಗಳಿಗೆ ಮೌಲ್ಯಮಾಪನ ನಡೆಸುತ್ತಿದ್ದೇವೆ. ಬದಲಿಗೆ ಅದನ್ನು ಪರೀಕ್ಷೆ ಎಂದು ತಪ್ಪಾಗಿ ಭಾವಿಸಬಾರದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದರು. ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಅಸೈನ್​ಮೆಂಟ್​ ಸಲ್ಲಿಸಬೇಕಿಲ್ಲ. ಮಕ್ಕಳ‌ ಹಿತದೃಷ್ಟಿಯಿಂದ‌ ಈ ನಿರ್ಧಾರ ಕೈಗೊಂಡಿದ್ದೇವೆ. ಈ ನಿರ್ಧಾರದ ಕುರಿತು ಅನವಶ್ಯಕ‌‌ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. 

ಇದೇ ವೇಳೆ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಮೌಲ್ಯಮಾಪನ ಮಾಡುವಂತೆ ಎಲ್ಲಾ ಕಾಲೇಜುಗಳಿಗೆ ಪಿಯು ಬೋರ್ಡ್‌ ಸುತ್ತೋಲೆ ನೀಡಿದೆ. ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ 2 ವಿಷಯಗಳಿಗೆ ಮೌಲ್ಯಮಾಪನ ನಡೆಸಲು ಬೋರ್ಡ್‌ ಸೂಚನೆ ನೀಡಿದೆ. ಈ ಮೊದಲು ಪ್ರಥಮ ಪಿಯುಸಿ ಪಾಸ್ ಎಂದು ಶಿಕ್ಷಣ ಸಚಿವರು ತಿಳಿಸಿದ್ದರೂ ಸಹ, ಆನ್ ಲೈನ್ ಮೌಲ್ಯಮಾಪನ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಪಿಯು ಬೋರ್ಡ್ 2 ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್​ಸೈಟ್​ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ.

ಪ್ರಥಮ ಪಿಯುಸಿಗೆ ಆನ್ ಲೈನ್ ಮೌಲ್ಯಮಾಪನ ಹೇಗೆ?

* ಇಲಾಖೆ ವೆಬ್​ಸೈಟ್​ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳೇ ಡೌನ್ ಲೋಡ್ ಮಾಡಿಕೊಳ್ಳಬೇಕು

* ಪ್ರಶ್ನೆಗಳಿಗೆ ಉತ್ತರ ಬರೆದು ವಾಟ್ಸ್ ಅಪ್, ಮೇಲ್, ಅಂಚೆ ಮೂಲಕ ರವಾನಿಸಬೇಕು

* ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಉತ್ತರ ಪತ್ರಿಕೆಯನ್ನು ಕಳುಹಿಸಬೇಕು.

* ಉಪನ್ಯಾಸಕರು ಮೌಲ್ಯಮಾಪನ ಮಾಡಬೇಕು.

* ಮೌಲ್ಯಮಾಪನದ ಬಳಿಕ ಉಪನ್ಯಾಸಕರು SATs (ಸ್ಟೂಡೆಂಟ್ಸ್ ಅಚಿವ್ ಮೆಂಟ್ ಟ್ರಾಕಿಂಗ್ ಸಿಸ್ಟಂ) ಮೂಲಕ ಫಲಿತಾಂಶ ಅಪ್ಲೋಡ್ ಮಾಡಬೇಕು.

* ಅಸೆಸ್​ಮೆಂಟ್ ಲೆಕ್ಕಾಚಾರದಲ್ಲಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ನಿರ್ಧಾರ ಕೈಗೊಂಡಿದೆ.

ಮೊದಲ ಅಸೆಸ್​ಮೆಂಟ್ ಜೂ.20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂ.25ರೊಳಗೆ ಮೌಲ್ಯಮಾಪನ ಮಾಡಿರಬೇಕು. ಅದೇ ರೀತಿ ಎರಡನೇ ಅಸೆಸ್​ಮೆಂಟ್ ಜೂನ್ 26 ರಿಂದ ಜುಲೈ 5ರ ಒಳಗೆ ನಡೆಸಬೇಕು.

ಉಪನ್ಯಾಸಕರು ಜುಲೈ 10ರೊಳಗೆ ಮೌಲ್ಯಮಾಪನ ಮಾಡಿರಬೇಕು. 2 ಪತ್ರಿಕೆಗಳ ಅಂಕವನ್ನು ಸಮೀಕರಣ ಮಾಡಿ ಜುಲೈ 15 ರೊಳಗೆ ಮುಗಿಸಿ, ಜುಲೈ 20ರೊಳಗೆ ಸ್ಯಾಟ್ಸ್ ನಲ್ಲಿ ಅಪ್ಲೋಡ್ ಮಾಡಿರಬೇಕು. ಎರಡೂ ಪರೀಕ್ಷೆಗಳ ಅಂಕವನ್ನು ಜುಲೈ 20ರೊಳಗೆ ಅಪ್ಲೋಡ್ ಮಾಡಲು ಡೆಡ್ ಲೈನ್ ವಿಧಿಸಲಾಗಿದೆ.

ಮೌಲ್ಯಮಾಪನ ಪ್ರಕ್ರಿಯೆ ಹೇಗೆ ಮಾಡ್ಬೇಕು?
ವಿದ್ಯಾರ್ಥಿಗಳಿಗೆ ಪ್ರತೀ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯವಾಗಿ ನೀಡಬೇಕು. ಪ್ರತಿ ಪತ್ರಿಕೆಗೆ 30 ರಂತೆ 2 ಪತ್ರಿಕೆಗೆ 60 ಅಂಕ ನೀಡಬೇಕು. 5 ಅಂಕವನ್ನ ಉಪನ್ಯಾಸಕರು ಆಂತರಿಕ ಅಂಕವೆಂದು ನೀಡಬೇಕು. ಪ್ರಯೋಗ ಸಹಿತಿ ವಿಷಯಗಳಿಗೆ ಪ್ರತ್ಯೇಕ ಅಂಕ ನೀಡಬೇಕಿದೆ. ಈ ಹಿಂದೆ ನಡೆಸಿದ ಪ್ರಾಯೋಗಿಕ ತರಗತಿಗಳ ಆಧಾರದ ಮೇಲೆ ನಿಷ್ಪಕ್ಷಪಾತವಾಗಿ ಅಂಕ ನೀಡಬೇಕು ಎಂದು ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಪಿಯು ಬೋರ್ಡ್ ನಿಂದ ಸುತ್ತೋಲೆ ನೀಡಲಾಗಿದೆ.

ಇದನ್ನೂ ಓದಿ: ದಲಿತ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ಕೊರೊನಾದಿಂದ ನಿಧನ

ಹಣಕಾಸಿನ ಇತಿಮಿತಿ ನೋಡಿಕೊಂಡು ಕೊವಿಡ್​ಗೆ ಬಲಿಯಾದವರ ಕುಟುಂಬಕ್ಕೆ ಪರಿಹಾರದ ಕುರಿತು ನಿರ್ಧರಿಸುವೆ: ಸಿಎಂ ಯಡಿಯೂರಪ್ಪ
(For 1st PUC Its not exam but its valuation only says Karnataka education minister Suresh Kumar)

Published On - 6:17 pm, Fri, 11 June 21