ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್ ಶಸ್ತ್ರ ಚಿಕಿತ್ಸೆ; ಲಕ್ಷಾಂತರ ಮಂದಿ ವೀಕ್ಷಣೆ
ರಾಜ್ಯ ಮತ್ತು ರಾಷ್ಟ್ರದಾದ್ಯಂತ ಸುಮಾರು 150ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಾಗಿನ್ ಆಗಿ ಈ ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದ್ದಾರೆ. ಇನ್ನು ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ಲಕ್ಷಾಂತರ ಮಂದಿ ಈ ಲೈವ್ ವೀಕ್ಷಿಸಿದ್ದಾರೆ.
ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಬೆಂಗಳೂರಿನ ಹೆಸರಾಂತ ಸ್ತ್ರೀ ತಜ್ಞ ಡಾ. ಚಂದ್ರಶೇಖರ್ ನೇತೃತ್ವದಲ್ಲಿ ಮಹಿಳೆಗೆ ಲೈವ್ ಶಸ್ತ್ರ ಚಿಕಿತ್ಸೆ ಮಾಡಿದ್ದು, 10ಕ್ಕೂ ಹೆಚ್ಚು ಜನರ ವೈದ್ಯರ ತಂಡ ಶಸ್ತ್ರ ಚಿಕಿತ್ಸೆಯಲ್ಲಿ ಭಾಗಿ ಆಗಿದ್ದರು.
ರಾಜ್ಯ ಮತ್ತು ರಾಷ್ಟ್ರದಾದ್ಯಂತ ಸುಮಾರು 150ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಾಗಿನ್ ಆಗಿ ಈ ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದ್ದಾರೆ. ಇನ್ನು ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ಲಕ್ಷಾಂತರ ಮಂದಿ ಈ ಲೈವ್ ವೀಕ್ಷಿಸಿದ್ದು, ಲೈವ್ ವೇಳೆ ಆಸಕ್ತರಿಗೆ ಪ್ರಶ್ನೆ ಕೇಳಲು ಕೂಡ ಅವಕಾಶ ಕಲ್ಪಿಸಲಾಗಿತ್ತು.
ಹೆಸರಾಂತ ವೈದ್ಯಕೀಯ ಸಂಸ್ಥೆಗಳಿಗೆ ಮೀಸಲಾಗಿದ್ದ ಆಧುನಿಕ ಮಾದರಿಯ ಶಸ್ತ್ರ ಚಿಕಿತ್ಸೆಯನ್ನ ತಾಲೂಕಿನ ಸಂತೇಮರಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಆದರಲ್ಲೂ ಹೋಬಳಿ ಮಟ್ಟದ ಆಸ್ಪತ್ರೆಯಲ್ಲಿ ಮಾಡುವ ಮೂಲಕ ರಾಜ್ಯದ ಜನತೆ ಹುಬ್ಬೆರಿಸುವ ಕಾರ್ಯ ಮಾಡಿದ್ದಾರೆ.
ಇದನ್ನೂ ಓದಿ:
Published On - 3:41 pm, Sun, 21 March 21