ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್ ಶಸ್ತ್ರ ಚಿಕಿತ್ಸೆ; ಲಕ್ಷಾಂತರ ಮಂದಿ ವೀಕ್ಷಣೆ

| Updated By: ಪೃಥ್ವಿಶಂಕರ

Updated on: Mar 21, 2021 | 6:04 PM

ರಾಜ್ಯ ಮತ್ತು ರಾಷ್ಟ್ರದಾದ್ಯಂತ ಸುಮಾರು 150ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಾಗಿನ್ ಆಗಿ ಈ ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದ್ದಾರೆ. ಇನ್ನು ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ಲಕ್ಷಾಂತರ ಮಂದಿ ಈ ಲೈವ್ ವೀಕ್ಷಿಸಿದ್ದಾರೆ.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್ ಶಸ್ತ್ರ ಚಿಕಿತ್ಸೆ; ಲಕ್ಷಾಂತರ ಮಂದಿ ವೀಕ್ಷಣೆ
ಸಂತೇಮರಹಳ್ಳಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ
Follow us on

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್​ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಬೆಂಗಳೂರಿನ ಹೆಸರಾಂತ ಸ್ತ್ರೀ ತಜ್ಞ ಡಾ. ಚಂದ್ರಶೇಖರ್ ನೇತೃತ್ವದಲ್ಲಿ ಮಹಿಳೆಗೆ ಲೈವ್​ ಶಸ್ತ್ರ ಚಿಕಿತ್ಸೆ ಮಾಡಿದ್ದು, 10ಕ್ಕೂ ಹೆಚ್ಚು ಜನರ ವೈದ್ಯರ ತಂಡ ಶಸ್ತ್ರ ಚಿಕಿತ್ಸೆಯಲ್ಲಿ ಭಾಗಿ ಆಗಿದ್ದರು.

ರಾಜ್ಯ ಮತ್ತು ರಾಷ್ಟ್ರದಾದ್ಯಂತ ಸುಮಾರು 150ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಾಗಿನ್ ಆಗಿ ಈ ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದ್ದಾರೆ. ಇನ್ನು ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ಲಕ್ಷಾಂತರ ಮಂದಿ ಈ ಲೈವ್ ವೀಕ್ಷಿಸಿದ್ದು, ಲೈವ್ ವೇಳೆ ಆಸಕ್ತರಿಗೆ ಪ್ರಶ್ನೆ ಕೇಳಲು ಕೂಡ ಅವಕಾಶ ಕಲ್ಪಿಸಲಾಗಿತ್ತು.

ಹೆಸರಾಂತ ವೈದ್ಯಕೀಯ ಸಂಸ್ಥೆಗಳಿಗೆ ಮೀಸಲಾಗಿದ್ದ ಆಧುನಿಕ ಮಾದರಿಯ ಶಸ್ತ್ರ ಚಿಕಿತ್ಸೆಯನ್ನ ತಾಲೂಕಿನ ಸಂತೇಮರಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಆದರಲ್ಲೂ ಹೋಬಳಿ ಮಟ್ಟದ ಆಸ್ಪತ್ರೆಯಲ್ಲಿ ಮಾಡುವ ಮೂಲಕ ರಾಜ್ಯದ ಜನತೆ ಹುಬ್ಬೆರಿಸುವ ಕಾರ್ಯ ಮಾಡಿದ್ದಾರೆ.

ಮಹಿಳೆಗೆ ಲೈವ್​ ಶಸ್ತ್ರ ಚಿಕಿತ್ಸೆ ಮಾಡುತ್ತಿರುವ ದೃಶ್ಯ

ಇದನ್ನೂ ಓದಿ:

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​

ಏಳೂವರೆ ತಿಂಗಳ ಮಗುವಿನ ಎರಡೂ ಕಿಡ್ನಿಗಳಲ್ಲಿದ್ದ ಕಲ್ಲುಗಳನ್ನು ತೆಗೆದ ವೈದ್ಯರು; ಜಗತ್ತಿನಲ್ಲೇ ಅಪರೂಪದ ಶಸ್ತ್ರಚಿಕಿತ್ಸೆ ಇದು

Published On - 3:41 pm, Sun, 21 March 21