AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ವಿದೇಶದಿಂದ ಹಣ: ಇಡಿ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ

ಧರ್ಮಸ್ಥಳ ದೇವಸ್ಥಾನದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಯೂಟ್ಯೂಬರ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯದಿಂದ ತನಿಖೆ ಆಗಬೇಕು ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ. ವಿದೇಶಗಳಿಂದ ಈ ಯೂಟ್ಯೂಬರ್‌ಗಳಿಗೆ ಹಣಕಾಸು ನೆರವು ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಇಡಿ ತನಿಖೆ ಅಗತ್ಯ ಎಂದು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ವಿದೇಶದಿಂದ ಹಣ: ಇಡಿ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ
ಕೋಟ ಶ್ರೀನಿವಾಸ ಪೂಜಾರಿ, ಅನಾಮಿಕ ದೂರುದಾರ ಹಾಗೂ ಅಮಿತ್ ಶಾ
ಮಹೇಶ್ ಇ, ಭೂಮನಹಳ್ಳಿ
| Updated By: Ganapathi Sharma|

Updated on:Aug 20, 2025 | 2:19 PM

Share

ನವದೆಹಲಿ, ಆಗಸ್ಟ್ 20: ಧರ್ಮಸ್ಥಳದ (Dharmasthalaವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್​ಗಳಿಗೆ ವಿದೇಶಗಳಿಂದ ಹಣ ಸಂದಾಯವಾಗುತ್ತಿದೆ ಎಂಬ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ಮಾಡಿಸಬೇಕು ಎಂದು ಕೋರಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit Shah) ಪತ್ರ ಬರೆದಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ದೇಶ ವಿದೇಶಗಳಿಂದದ ಭಕ್ತರು ಬರುತ್ತಾರೆ. ಹೀಗಾಗಿ ದೇಗುಲದ ಪಾವಿತ್ರ್ಯತೆ ಉಳಿಸಬೇಕಿದೆ. ದೇವಾಲಯದ ಗೌರವಕ್ಕೆ ಧಕ್ಕೆ ಆಗಬಾರದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಗೃಹ ಸಚಿವರಿಗೆ ಪತ್ರ ಬರೆದ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ​ಕೆಲ ಯೂಟ್ಯೂಬರ್​ಗಳು ದೇಗುಲದ ಪಾವಿತ್ರ್ಯತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ವಿದೇಶದಿಂದ ಹಣ ಬಂದ ಬಗ್ಗೆ ದೂರುಗಳು ಕೇಳಿಬಂದಿವೆ. ಹೀಗಾಗಿ ಇ.ಡಿ ಮೂಲಕ ತನಿಖೆ ನಡೆಸಲು ನಾನು ಒತ್ತಾಯ ಮಾಡಿದ್ದೇನೆ. ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ನಾನು ವ್ಯಕ್ತಿಗತವಾಗಿ ಪತ್ರ ಬರೆದಿಲ್ಲ. ಕರ್ನಾಟಕ ಸರ್ಕಾರ ಎಸ್​ಐಟಿ ಮೂಲಕ ತನಿಖೆಗೆ ಸೂಚಿಸಿದ್ದಕ್ಕೆ ಸ್ವಾಗತವಿದೆ. ಆದರೆ, ಅನಾಮಧೇಯ ಭೀಮನಿಂದ ದಾರಿ ತಪ್ಪಿಸುವ ಕೆಲಸ ಆಗಿದೆ ಎಂದು ಹೇಳಿದರು.

ಆಧಾರದ ಇಲ್ಲದೆ ಸೆಂಥಿಲ್ ವಿರುದ್ಧ ಹೇಳಿಕೆ ನೀಡಿಲ್ಲ: ಜನಾರ್ದನ ರೆಡ್ಡಿ

ಧರ್ಮಸ್ಥಳ ಪ್ರಕರಣದ ಷಡ್ಯಂತ್ರದ ಹಿಂದೆ ತಿರುವಳ್ಳೂರ್ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂದು ಸುಮ್ಮನೆ ಆರೋಪ ಮಾಡಿಲ್ಲ ಎಂದು ಶಾಸಕ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಆರೋಪಕ್ಕೆ ಸಂಬಂಧಿಸಿ ನಮ್ಮ ಬಳಿ ಸೂಕ್ತ ಮಾಹಿತಿ ಇದೆ. ಧರ್ಮಸ್ಥಳ ಕೇಸ್​ನಲ್ಲಿ ಸೆಂಥಿಲ್ ಕೈವಾಡ ಖಂಡಿತಾ ಇದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಸಿಕಾಂತ್ ಸೆಂಥಿಲ್ ವಿರುದ್ಧ ಯಾವುದೇ ವೈಯಕ್ತಿಕ ದ್ವೇಷವಾಗಲಿ, ಸಂಬಂಧವಾಗಲಿ ಇಲ್ಲ. ನಾನು ಸಚಿವನಾಗಿದ್ದಾಗ ಸೆಂಥಿಲ್ ಬಳ್ಳಾರಿಯಲ್ಲಿ ಇರಲೇ ಇಲ್ಲ. ಷಡ್ಯಂತ್ರದ ವಿರುದ್ಧ ತನಿಖೆ ಮಾಡಬೇಕು. ಒಂದು ವೇಳೆ ಕ್ರಮ‌ ಕೈಗೊಳ್ಳದಿದ್ದರೆ ಕಾನೂನು ಹೋರಾಟ ಮಾಡುತ್ತೇನೆ. ಹೈಕೋರ್ಟ್ ಅಥವಾ ಸುಪ್ರಿಂಕೋರ್ಟ್​​ಗೆ ಹೋಗಲೂ ಸಿದ್ಧ ಎಂದು ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ
Image
ಧರ್ಮಸ್ಥಳ ಕೇಸ್​: ‘ಸುಜಾತಾ ಭಟ್ ತೋರಿಸಿದ್ದು ಅನನ್ಯಾ ಫೋಟೊ ಅಲ್ಲ’!
Image
ಧರ್ಮಸ್ಥಳ ಪ್ರಕರಣ: ರೆಡ್ಡಿ ಆರೋಪಕ್ಕೆ ಸೆಂಥಿಲ್ ಮೊದಲ ಪ್ರತಿಕ್ರಿಯೆ
Image
ಧರ್ಮಸ್ಥಳ ಕೇಸ್​: ಅನಾಮಿಕ ಮಾಸ್ಕ್ ಮ್ಯಾನ್ ತಮಿಳುನಾಡಿನವ ಎಂದ ರೆಡ್ಡಿ
Image
ಧರ್ಮಸ್ಥಳ ಪ್ರಕರಣ​: ಮಾಜಿ DC ಸಸಿಕಾಂತ್​ ಸೆಂಥಿಲ್​ ಷಡ್ಯಂತ್ರ ಎಂದ ರೆಡ್ಡಿ

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಮೊದಲ ಪ್ರತಿಕ್ರಿಯೆ, ಕಾಂಗ್ರೆಸ್ ಸಂಸದ ಹೇಳಿದ್ದಿಷ್ಟು

ರೆಡ್ಡಿ ಮಾಡಿದ್ದ ಆರೋಪದ ಕುರಿತು ಪ್ರತಿಕ್ರಿಯಿಸಿದ್ದ ಸಸಿಕಾಂತ್ ಸೆಂಥಿಲ್, ಆ ಹೇಳಿಕೆ ಕೇಳಿ ನಗು ಬರುತ್ತಿದೆ. ನನಗೆ ಇದರ ಹಿಂದೆ ಏನಿದೆ ಎಂಬುದು ಗೊತ್ತಿಲ್ಲ. ನಾನು ಐಎಎಸ್​ ಹುದ್ದೆಗೆ ರಾಜೀನಾಮೆ ನೀಡಿ 6 ವರ್ಷ ಆಗಿದೆ. ಈಗ ನಾನು ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಬಳ್ಳಾರಿಯಲ್ಲಿ ಕರ್ತವ್ಯದಲ್ಲಿ ಇದ್ದಾಗ ಅವರ (ರೆಡ್ಡಿ) ಬಂಧನ ಆಗಿತ್ತು. ಆಗ ಮಾತ್ರ ರೆಡ್ಡಿಯನ್ನು ನೋಡಿದ್ದೆ ಎಂದಿದ್ದರು. ಅದಕ್ಕೀಗ ರೆಡ್ಡಿ ಪ್ರತಿಕ್ರಿಯಿಸಿ, ಮಾಹಿತಿ ಇದ್ದೇ ಆರೋಪ ಮಾಡಿದ್ದೇನೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Wed, 20 August 25

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ