ಅರಣ್ಯಾಧಿಕಾರಿ ಖಡಕ್ ಮಾತು: ಹುಲಿ ಉಗುರು ಲಾಕೆಟ್​ ಧರಿಸಿದವರಿಗೆ ಶುರುವಾಯ್ತು ಸಂಕಷ್ಟ!

ವರ್ತೂರ್ ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಲಾಕೆಟ್​ ಪ್ರಕರಣಗಳು ಒಂದೇ ಒಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ, ಅದರಲ್ಲೂ ಗಣ್ಯ ವ್ಯಕ್ತಿಗಳು ಹಾಕಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇವರ ಬಂಧನ ಯಾವಾಗ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಅರಣಾಧಿಕಾರಿ ಖಡಕ್ ಮಾತುಗಳನ್ನಾಡಿದ್ದು, ಹುಲಿ ಉಗುರಿನ ಲಾಕೆಟ್ ಧರಿಸಿದವರಿಗೆ ಢವ ಢವ ಶುರುವಾಗಿದೆ.

ಅರಣ್ಯಾಧಿಕಾರಿ ಖಡಕ್ ಮಾತು: ಹುಲಿ ಉಗುರು ಲಾಕೆಟ್​ ಧರಿಸಿದವರಿಗೆ ಶುರುವಾಯ್ತು ಸಂಕಷ್ಟ!
ಅರಣ್ಯಾಧಿಕಾರಿ ರವೀಂದ್ರ
Follow us
TV9 Web
| Updated By: Digi Tech Desk

Updated on:Oct 26, 2023 | 12:40 PM

ಬೆಂಗಳೂರು, (ಅಕ್ಟೋಬರ್ 25): ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10ರ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ(tiger claw pendant) ಪ್ರಕರಣದಲ್ಲಿ ಬಂಧನ ಬಳಿಕ ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇನ್ನು ಈ ಹುಲಿ ಉಗುರಿನ ಲಾಕೆಟ್​ ಧರಿಸಿ ಫೋಟೋಗಳು ವೈರಲ್ ಆಗುತ್ತಿರುವ ಬಗ್ಗೆ ಡಿಸಿಎಫ್​ಓ ರವೀಂದ್ರ ಅವರು ಪ್ರತಿಕ್ರಿಯಿಸಿ, ಸದ್ಯಕ್ಕೆ ನಮಗೆ ಯಾವ ದೂರು ಬಂದಿಲ್ಲ. ಬೇರೆಯವರು ಹಾಕಿದ್ದರೂ ಕಾನೂನು ಅಡಿಯಲ್ಲಿ ಅಪರಾಧ ಆಗುತ್ತೆ. ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಆಗಿಯೇ ಹೇಳಿದ್ದಾರೆ. ಇದರಿಂದ ಯಾರೆಲ್ಲ ಹುಲಿ ಉಗುರಿನ ಪೆಂಡೆಟ್ ಧರಿಸಿದವರಿಗೆ ಢವ ಢವ ಶುರುವಾಗಿದೆ.

ಅಂತಹ ಪ್ರಕರಣ ನಮ್ಮಲ್ಲಿ ರಿಜಿಸ್ಟರ್ ಅದ್ರೆ ಅದಕ್ಕೆ ಎನು ಬೇಕೋ ಅದನ್ನ ಕ್ರಮ ತೆಗೆದುಕೊಳ್ಳಲು ಅಧಿಕಾರ ಇದೆ. ಅವರಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಬರುವಂತೆ ಹೇಳಲಾಗುತ್ತೆ. ಬಳಿಕ ಹುಲಿ ಉಗುರಿನ ನೈಜತೆ ಬಗ್ಗೆ ಕನ್ಫರ್ಮ್ ಮಾಡಿಕೊಳ್ಳಬೇಕಿದೆ. ಹಸುವಿನ ಕೊಂಬನ್ನ ಹುಲಿ ಉಗುರು ಎಂದು ಮಾರಾಟ ಮಾಡಲಾಗುತ್ತೆ. ಅದಕ್ಕೆ ಅದರ ನೈಜತೆ ಬಗ್ಗೆ ಪರೀಶಿಲನೆ ಮಾಡಲಾಗುತ್ತೆ ಎಂದು ಸ್ಪಷ್ಟಪಡಿಸಿದರು.

ಇನ್ನೂ ಬಿಗ್​ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ಬಂಧಿಸಿರುವ ಬಗ್ಗೆ ಮಾತನಾಡಿರುವ ಅವರು, ಸಂತೋಷ್ ಅವರನ್ನು ಏಕಾಎಕಿ ದಸ್ತಗಿರಿ ಮಾಡಲಿಲ್ಲ. ಲಾಕೆಟ್​ನ ತಪಾಸಣೆ ಮಾಡಿ ಅರ್ಧ ಮುಕ್ಕಾಲು ಗಂಟೆ ಅದರ ನೈಜತೆ ಗೊತ್ತಾದಮೇಲೆಯೇ ಅವರನ್ನ ಬಂಧಿಸಲಾಗಿದೆ ಎಂದು ತಿಳಿಸಿದರು.

ಇನ್ನು ನಟ ದರ್ಶನ ಹಾಗೂ ಜಗ್ಗೇಶ್​ ಅವರ ಹುಲಿ ಉಗುರಿನ ಲಾಕೆಟ್ ವೈರಲ್ ಆಗುತ್ತುರುವ ಬಗ್ಗೆ ಪ್ರತಿಕ್ರಿಯಿಸಿ,  ನೋಟಿಸ್ ನೀಡಲು ನನಗೆ ಅವಕಾಶ ಇದೆ. ದೂರು ಬಂದ್ರೆ ನೋಟಿಸ್ ಜಾರಿ ಮಾಡಿ ಅವರನ್ನ ವಿಚಾರಣೆಗೊಳಪಡಿಸಲಾಗುತ್ತೆ ಎಂದು ಸ್ಪಷ್ಟಪಡಿಸಿದರು.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಏನು ಹೇಳುತ್ತೆ?

ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ತಪ್ಪಾಗುತ್ತದೆ. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.

ವರ್ತೂರ್ ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಲಾಕೆಟ್​ ಪ್ರಕರಣಗಳು ಒಂದೇ ಒಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ, ಅದರಲ್ಲೂ ಗಣ್ಯ ವ್ಯಕ್ತಿಗಳು ಹಾಕಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇವರ ಬಂಧನ ಯಾವಾಗ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Wed, 25 October 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್