ಗ್ರಾಮಕ್ಕೆ ನುಗ್ಗಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಕೊನೆಗೂ ಸೆರೆ

|

Updated on: Dec 18, 2019 | 12:04 PM

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಸರಗೂರು ಗ್ರಾಮದ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮಕ್ಕೆ ನುಗ್ಗಿ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ಮಾಡುತ್ತಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು. ಚಿರತೆ ಸೆರೆಗಾಗಿ ಅರವಿಂದ್ ಎಂಬುವರ ತೆಂಗಿನ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಅಳವಡಿಸಿದ್ದರು. ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರಲ್ಲಿದ್ದ ಆತಂಕ ದೂರವಾಗಿದ್ದು, ಸೆರೆ ಸಿಕ್ಕ ಚಿರತೆಯನ್ನು […]

ಗ್ರಾಮಕ್ಕೆ ನುಗ್ಗಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಕೊನೆಗೂ ಸೆರೆ
Follow us on

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಸರಗೂರು ಗ್ರಾಮದ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮಕ್ಕೆ ನುಗ್ಗಿ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ಮಾಡುತ್ತಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು.

ಚಿರತೆ ಸೆರೆಗಾಗಿ ಅರವಿಂದ್ ಎಂಬುವರ ತೆಂಗಿನ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಅಳವಡಿಸಿದ್ದರು. ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರಲ್ಲಿದ್ದ ಆತಂಕ ದೂರವಾಗಿದ್ದು, ಸೆರೆ ಸಿಕ್ಕ ಚಿರತೆಯನ್ನು ನೋಡಲು ಸ್ಥಳೀಯರು ಮುಗಿಬಿದ್ದಿದ್ದಾರೆ.

Published On - 12:03 pm, Wed, 18 December 19