ಕಾಡು ಪ್ರಾಣಿಗಳ ಬೇಟೆಯಾಡುದ್ರೆ ತಕ್ಕ ಶಿಕ್ಷೆಯಾಗುತ್ತೆ.. ಕಾಡಂಚಿನ ಜನರಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಎಚ್ಚರಿಕೆ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕೊಂಡುಕುರಿ ಅರಣ್ಯ ಪ್ರದೇಶದ ಕಾಡಿನಂಚಿನ ಜನಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟೆಯಾಡದಂತೆ ಎಚ್ಚರಿಕೆ ನೀಡಿದ್ದಾರೆ.

ಕಾಡು ಪ್ರಾಣಿಗಳ ಬೇಟೆಯಾಡುದ್ರೆ ತಕ್ಕ ಶಿಕ್ಷೆಯಾಗುತ್ತೆ.. ಕಾಡಂಚಿನ ಜನರಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಎಚ್ಚರಿಕೆ
ಕಾಡು ಪ್ರಾಣಿಗಳ ಬೇಟೆಯಾಡದಂತೆ ಎಚ್ಚರಿಕೆ ನೀಡಿದ ಅಧಿಕಾರಿಗಳು
Follow us
ಆಯೇಷಾ ಬಾನು
|

Updated on: Apr 13, 2021 | 10:23 AM

ದಾವಣಗೆರೆ: ಇಂದು ಯುಗಾದಿ ಹಬ್ಬ. ಯುಗದ ಆರಂಭ. ಹೊಸ ವರ್ಷಾಚರಣೆಯ ಸಂತಸದಲ್ಲಿರುವ ದಾವಣಗೆರೆ ಭಾಗದ ಕೆಲ ಮಂದಿ ಇಂದು ಹಬ್ಬದ ಪ್ರಯುಕ್ತ ಕಾಡು ಪ್ರಾಣಿಗಳ ಬೇಟೆಯಾಡುವ ಸಂಪ್ರದಾಯವಿದೆಯಂತೆ. ಆದ್ರೆ ಈ ಸಾಂಪ್ರದಾಯಿಕ ಕಾಡು ಪ್ರಾಣಿಗಳ ಬೇಟೆಗೆ ಅರಣ್ಯ ಇಲಾಖೆ ತಡೆ ನೀಡಿದೆ. ಕಾಡು ಪ್ರಾಣಿ ಬೇಟೆಯಾಡಿದರೇ ತಕ್ಕ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕೊಂಡುಕುರಿ ಅರಣ್ಯ ಪ್ರದೇಶದ ಕಾಡಿನಂಚಿನ ಜನಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟೆಯಾಡದಂತೆ ಎಚ್ಚರಿಕೆ ನೀಡಿದ್ದಾರೆ. ಕಾಡಿನಂಚಿನ ಜನರನ್ನ ಕರೆದು ಅವರೊಂದಿಗೆ ಮಾತನಾಡಿದ ಅರಣ್ಯ ಇಲಾಖೆ ಸಿಬ್ಬಂದಿ ಇಂತಹ ತಪ್ಪನ್ನು ಮಾಡಬೇಡಿ ಎಂದು ಹೇಳಿ ಕಳಿಸಿದ್ದಾರೆ. No hunting

ಇನ್ನು ಇಂದು ಯುಗಾದಿ ಹಬ್ಬ. ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” ಹೊಸ ಯುಗದ ಆರಂಭ ಎಂದು.

ಸಾಂಪ್ರದಾಯಿಕ ಆಚರಣೆಗಳು ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.

ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.

ಭೂಮಿಯಿಂದ ನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ 13:20 ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.

ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದು ಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.

ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 12 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಇದನ್ನೂ ಓದಿ: ಗಣಿ ನಾಡಿನ ದಿಟ್ಟ ಮಹಿಳಾ ಅರಣ್ಯಾಧಿಕಾರಿ ಇವರು! ಸಾವಿರಾರು ಹೆಕ್ಟೇರ್ ಅರಣ್ಯ ಸಂರಕ್ಷಕಿ

(Forest Department Staff Warns People not to Hunt Animals in Davangere)