AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಕ್​ ನ್ಯೂಸ್​ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ, ಸಮನ್ವಯ ಸಮಿತಿ ರಚನೆ

ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಿಡಿಸುವವರ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ಇಂದು ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ಮಾಡಿದೆ. ಯಾವ ವ್ಯಕ್ತಿ ಫೇಕ್​ ನ್ಯೂಸ್​​​ ಮಾಡ್ತಾರೆ, ಅವರಿಗೆ ಯಾವ ಶಿಕ್ಷೆ ನೀಡಬೇಕು ಎಂಬಿತ್ಯಾದಿಗಳ ಕುರಿತು ಚರ್ಚೆ ನಡೆಸಲಾಗಿದ್ದು, ವಿವಿಧ ಇಲಾಖೆಗಳ ಸಮನ್ವಯ ಸಂಪಾದಿಸಲು ಸಮಿತಿ ರಚನೆ ಮಾಡಲಾಗಿದೆ.

ಫೇಕ್​ ನ್ಯೂಸ್​ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ, ಸಮನ್ವಯ ಸಮಿತಿ ರಚನೆ
ಫೇಕ್​ ನ್ಯೂಸ್​ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ, ಸಮನ್ವಯ ಸಮಿತಿ ರಚನೆ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ಪರಮೇಶ್ವರ
ಕಿರಣ್​ ಹನಿಯಡ್ಕ
| Edited By: |

Updated on: Mar 11, 2024 | 8:19 PM

Share

ಬೆಂಗಳೂರು, ಮಾ.11: ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ (Fake News) ಹರಿಡಿಸುವವರ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ಇಂದು ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ಮಾಡಿದೆ. ಯಾವ ವ್ಯಕ್ತಿ ಫೇಕ್​ ನ್ಯೂಸ್​​​ ಮಾಡ್ತಾರೆ, ಅವರಿಗೆ ಯಾವ ಶಿಕ್ಷೆ ನೀಡಬೇಕು ಎಂಬಿತ್ಯಾದಿಗಳ ಕುರಿತು ಚರ್ಚೆ ನಡೆಸಲಾಗಿದ್ದು, ವಿವಿಧ ಇಲಾಖೆಗಳ ಸಮನ್ವಯ ಸಂಪಾದಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ (Dr.G. Parameshwara) ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸೈಬರ್​ ಕ್ರೈಂ ಸಭೆ ಬಳಿಕ ಮಾತನಾಡಿದ ಅವರು, ಫೇಕ್ ನ್ಯೂಸ್​ ವಿರುದ್ಧ ಸಭೆಯಲ್ಲಿ ಕೆಲ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಫೇಕ್ ನ್ಯೂಸ್​ ನಿಯಂತ್ರಿಸಲು ಹಾಗೂ ಪತ್ತೆಹಚ್ಚಿ ಯಾವ ಕ್ರಮ ಕೈಗೊಳ್ಳಬೇಕು, ಯಾವ ವ್ಯಕ್ತಿ ಫೇಕ್​ ನ್ಯೂಸ್​​​ ಮಾಡುತ್ತಾರೆ, ಅಂತವರಿಗೆ ಯಾವ ಶಿಕ್ಷೆ ನೀಡಬೇಕು, ಯಾರು ತನಿಖೆ ಮಾಡಬೇಕೆಂದು ಕೆಲ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.

ಮಂಗಳವಾರ ಅಥವಾ ಬುಧವಾರ ಈ ಸಂಬಂಧ ಆದೇಶ ಹೊರಡಿಸುತ್ತೇವೆ ಎಂದು ಹೇಳಿದ ಪರಮೇಶ್ವರ, ಇದಕ್ಕಾಗಿ ವಿವಿಧ ಇಲಾಖೆಗಳ ಸಮನ್ವಯ ಸಂಪಾದಿಸಲು ಸಮಿತಿ ರಚನೆ ಮಾಡಿದ್ದೇವೆ. ಹಿರಿಯ ಪೊಲೀಸ್ ಅಧಿಕಾರಿ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ. ಬೇರೆ ಇಲಾಖೆಗಳ ಕಾರ್ಯದರ್ಶಿಗಳು ಈ ಸಮಿತಿಯಲ್ಲಿ ಇರುತ್ತಾರೆ‌. ಪೊಲೀಸ್ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸುತ್ತೇವೆ. ನೋಡಲ್ ಅಧಿಕಾರಿಯೇ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ‌. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮೂಲಕ ಸರ್ಕಾರಕ್ಕೆ ಇದರ ಮಾಹಿತಿ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಾಂಬರ್ ಯಾರೆಂಬುದು ಗೊತ್ತಾಗಿದೆ: ಗೃಹಸಚಿವ ಪರಮೇಶ್ವರ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರಿದ ನಂತರ ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಿ ಬಿಡುತ್ತಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಸುಖಾ ಸುಮ್ಮನೆ ಬೇಕಾ ಬಿಟ್ಟಿಯಾಗಿ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಸುಳ್ಳು ಸುದ್ದಿಗಳನ್ನು ಷೇರ್ ಮಾಡುವವರ ಮೇಲೆ ಹದ್ದಿನ ಕಣ್ಣಿಡಲು ಸದ್ದಿಲ್ಲದೇ ಖಾಕಿ ಪಡೆ ಆ್ಯಕ್ಟೀವ್ ಆಗಿದೆ.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮಕೈಗೊಳ್ಳುವುದಕ್ಕೆ ಬೆಂಗಳೂರಿನ ಎಲ್ಲಾ ಠಾಣೆಯ ಸಿಬ್ಬಂದಿಗೆ ಸೂಚಿಸಲಾಗಿದೆ. ಬೆಂಗಳೂರು ನಗರದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಇಬ್ಬರು ಎಕ್ಸ್ ಪರ್ಟ್​ಗಳ ನೇಮಕ ಮಾಡಲಾಗಿದೆ. ಇವರು ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣಿಡಲಿದ್ದಾರೆ ಎಂದು ಈ ಹಿಂದೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ