‘ಆತ್ಮನಿರ್ಭರ’ ಜಾರಿಗೆ ಬರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು: ಎಚ್​ಡಿ ಕುಮಾರಸ್ವಾಮಿ

ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕು ಎಂಬ ಉದ್ದೇಶದಿಂದ ನಾನು ಮುಖ್ಯಮಂತ್ರಿಯಾಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.

‘ಆತ್ಮನಿರ್ಭರ' ಜಾರಿಗೆ ಬರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು: ಎಚ್​ಡಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
Follow us
Lakshmi Hegde
| Updated By: ರಾಜೇಶ್ ದುಗ್ಗುಮನೆ

Updated on: Jan 09, 2021 | 7:20 PM

ಬೆಂಗಳೂರು: ಇಂದು ಕೊಪ್ಪಳದಲ್ಲಿ ದೇಶದ ಮೊದಲ ಆಟಿಕೆ ಕ್ಲಸ್ಟರ್​ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಿದ್ದಾರೆ. ಈ ಬೆನ್ನಲ್ಲೇ ಸರಣಿ ಟ್ವೀಟ್​ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಆಟಿಕೆ ಕ್ಲಸ್ಟರ್​ಗೆ ನನ್ನ ಸರ್ಕಾರದ ಅವಧಿಯಲ್ಲಿ 500 ಕೋಟಿ ರೂ. ನೀಡಲಾಗಿತ್ತು ಎಂದು ತಿಳಿಸಿದ್ದಾರೆ.

ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕು ಎಂಬ ಉದ್ದೇಶದಿಂದ ನಾನು ಮುಖ್ಯಮಂತ್ರಿಯಾಗಿದ್ದಾಗ ‘Compete With China’ ರೂಪಿಸಿದ್ದೆ. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ!. ನನ್ನ ಸರ್ಕಾರದ ಅವಧಿಯಲ್ಲಿ ಇಂಥ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ. ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳೇ ಪ್ರಧಾನವಾಗಿವೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರ್ಕಾರ ‘ಆತ್ಮನಿರ್ಭರ’ ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು. 7 ಲಕ್ಷ ಕೋಟಿ ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪ ಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು. ಆದಾಯ ಕೊಡಿಸಬಹುದು ಎಂಬುದು ನನ್ನ ಸರ್ಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರು ಚಾಲನೆ ನೀಡುತ್ತಿರುವ, ನನ್ನ ಯೋಜನೆಯನ್ನು ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು ಎಂದಿದ್ದಾರೆ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?