ಕಾಂಗ್ರೆಸ್‌ನ ‘ರಾಜಕೀಯ ನರಮೇಧ’ಕ್ಕೆ ಕಾರಣ ಯಾರು? ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್

HD Kumaraswamy tweet: ಸಿದ್ದಹಸ್ತ ಸೂತ್ರಧಾರಿಯಿಂದ ಒಳ ರಾಜಕೀಯ ನಡೆದಿದೆ. ಅದಕ್ಕೆ ಅಲ್ಪಸಂಖ್ಯಾತ ನಾಯಕರು ಬಲಿಯಾಗಿದ್ದಾರೆ. ಒಳ ರಾಜಕೀಯಕ್ಕೆ ಬಲಿಯಾದವರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್‌ನ ‘ರಾಜಕೀಯ ನರಮೇಧ’ಕ್ಕೆ ಕಾರಣ ಯಾರು? ಇದರ ಬಗ್ಗೆ ಜನರಿಗೆ ಗೊತ್ತಾಗಲಿ ಎಂದು ಹೆಚ್‌ಡಿಕೆ ಟ್ವೀಟ್ ಮಾಡಿ ಹೇಳಿದ್ದಾರೆ.

ಕಾಂಗ್ರೆಸ್‌ನ ‘ರಾಜಕೀಯ ನರಮೇಧ’ಕ್ಕೆ ಕಾರಣ ಯಾರು? ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್
ಕಾಂಗ್ರೆಸ್‌ನ ‘ರಾಜಕೀಯ ನರಮೇಧ’ಕ್ಕೆ ಕಾರಣ ಯಾರು? ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 16, 2021 | 4:14 PM

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಸರಣಿ ಟ್ವೀಟ್​ಗಳನ್ನು ಮಾಡಿದ್ದಾರೆ. ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗ್ತಿದೆ ಎಂದು ಹೆಸರು ಉಲ್ಲೇಖಿಸದೆ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲಾ ಪೋಣಿಸಿ ‘ಅಹಿಂದ’ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ. ‘ಸಿದ್ದಹಸ್ತ ಶೂರ’ರಿಂದ ತಮ್ಮ ಪಕ್ಷದ ಒಬ್ಬೊಬ್ಬ ನಾಯಕನನ್ನೇ ಟಾರ್ಗೆಟ್ ಮಾಡಿ ಮುಗಿಸ್ತಿದ್ದಾರೆ. ‘ಅಲ್ಪಸಂಖ್ಯಾತರ ಅಂತ್ಯ ರಾಜಕಾರಣ’ದ ಟರ್ಮಿನೇಟರ್‌ ಆಗಿ ಹೊರಹೊಮ್ಮಿದ್ದಾರೆ ಎಂದು ಹೆಸರು ಉಲ್ಲೇಖಿಸದೆ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಸರಣಿ ಟ್ವೀಟ್ ಮಾಡಿದ್ದಾರೆ.

ಸಿದ್ದಹಸ್ತ ಸೂತ್ರಧಾರಿಯಿಂದ ಒಳ ರಾಜಕೀಯ ನಡೆದಿದೆ. ಅದಕ್ಕೆ ಅಲ್ಪಸಂಖ್ಯಾತ ನಾಯಕರು ಬಲಿಯಾಗಿದ್ದಾರೆ. ಒಳ ರಾಜಕೀಯಕ್ಕೆ ಬಲಿಯಾದವರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್‌ನ ‘ರಾಜಕೀಯ ನರಮೇಧ’ಕ್ಕೆ ಕಾರಣ ಯಾರು? ಇದರ ಬಗ್ಗೆ ಜನರಿಗೆ ಗೊತ್ತಾಗಲಿ ಎಂದು ಹೆಚ್‌ಡಿಕೆ ಟ್ವೀಟ್ ಮಾಡಿ ಹೇಳಿದ್ದಾರೆ.

ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ:

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಸಾರಾಂಶ ಹೀಗಿದೆ: 2012ರಲ್ಲಿ ವಿಧಾನಪರಿಷತ್‌ನ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹ್ಮದ್ ಸರಡಗಿ ಸೋಲುತ್ತಾರೆ. ಆದರೆ ಪಕ್ಷೇತರ ಅಭ್ಯರ್ಥಿ ಭೈರತಿ ಸುರೇಶ್ ಗೆಲ್ಲುತ್ತಾರೆ. ಇಲ್ಲಿ ಭೈರತಿ ಸುರೇಶ್ ಗೆಲುವಿಗೆ ಕಾರಣ ಯಾರು? ಸಿದ್ದಸೂತ್ರ ಹೆಣೆದಿದ್ದು ಯಾರು?

ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್‌ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ.

ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ.

ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ?

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ. ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್‌ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ.

ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ..

Siddaramaiah ವಿರುದ್ಧ ಮತ್ತೆ ಮುಗಿಬಿದ್ದ HD Kumaraswamy! ಸಿದ್ದರಾಮಯ್ಯ ಹೆಸರು ಉಲ್ಲೇಖಿಸದೆ HDK ಹೊಸ ಬಾಂಬ್

ಜೆಡಿಎಸ್ ನಾಯಕ  ಹೆಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್​

(former chief minister hd kumaraswamy tweet against opposition leader siddaramaiah)

Published On - 10:29 am, Sat, 16 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ