AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ..

ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಎಲ್ಲವೂ ಇತ್ಯರ್ಥವಾದ ಮೇಲೆ ಮತ್ತೆ ಕೆಣಕಿ ರಾಜಕೀಯ ಮಾಡಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎಂಬುದನ್ನು ಮರೆಯಬೇಡಿ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ..
ವಿಪಕ್ಷ ನಾಯಕ ಸಿದ್ದರಾಮಯ್ಯ
Lakshmi Hegde
|

Updated on:Jan 18, 2021 | 12:46 PM

Share

ಬೆಂಗಳೂರು: ಮರಾಠಿ ಭಾಷೆ ಮಾತನಾಡುವ ಜನರು ಹೆಚ್ಚಾಗಿರುವ ಕರ್ನಾಟಕದ ಭಾಗವನ್ನು ಮಹಾರಾಷ್ಟ್ರಕ್ಕೆ ಸೇರಿಸಲು ನಾವು ಬದ್ಧ ಎಂದಿರುವ ಅಲ್ಲಿನ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ, ಕನ್ನಡಿಗರು ಶಾಂತಿಪ್ರಿಯರು, ಸಹನಾಶೀಲರು ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮ ಸರಣಿ ಟ್ವೀಟ್​ಗಳಿಗೆ ಬೆಳಗಾವಿ ನಮ್ಮದು ಎಂದು ಹ್ಯಾಷ್​ಟ್ಯಾಗ್​ ನೀಡಿರುವ ಸಿದ್ದರಾಮಯ್ಯನವರು, ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೀಡಿರುವ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ ಎಂದು ಹೇಳಿದ್ದಾರೆ.

ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಎಲ್ಲವೂ ಇತ್ಯರ್ಥವಾದ ಮೇಲೆ ಮತ್ತೆ ಕೆಣಕಿ ರಾಜಕೀಯ ಮಾಡಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎಂಬುದನ್ನು ಮರೆಯಬೇಡಿ ಎಂದೂ ಹೇಳಿದ್ದಾರೆ. ಹಾಗೇ, ಕರ್ನಾಟಕ ನೆಲ, ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಯವರ ಉದ್ಧಟತನದ ಹೇಳಿಕೆಗೆ ನಮ್ಮ ಮುಖ್ಯಮಂತ್ರಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದೂ ಆಗ್ರಹಿಸಿದ್ದಾರೆ.

ಕರ್ನಾಟಕದ ಬಗ್ಗೆ ಉದ್ಧವ್ ಠಾಕ್ರೆ ಯೋಚಿಸುವುದು ಬೇಡ ಮಹಾರಾಷ್ಟ್ರ ಮುಖ್ಯಮಂತ್ರಿಯ ಹೇಳಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕೂಡ ಅಸಮಾಧಾನ ಹೊರಹಾಕಿದ್ದಾರೆ. ನೆಲ, ಜಲ ವಿಚಾರದಲ್ಲಿ ಈಗಾಗಲೇ ನಿರ್ಧಾರವಾಗಿದೆ. ಆದರೂ ಉದ್ಧವ್ ಠಾಕ್ರೆ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅವರು ಕರ್ನಾಟಕ ರಾಜ್ಯದ ಬಗ್ಗೆ ಚಿಂತೆ ಮಾಡುವುದು ಬೇಡ. ರಾಜಕೀಯ ಹೇಳಿಕೆಗೆ ಮಹತ್ವ ನೀಡೋದು ಬೇಡ. ನಾವು ರಾಜ್ಯದ ಹಿತ ಕಾಯುವ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧಟತನ ತೋರುತ್ತಿದ್ದಾರೆ.. ಗಡಿ ಸೌಹಾರ್ದತೆ ಕದಡುತ್ತಿದ್ದಾರೆ: ಸಿಎಂ ಯಡಿಯೂರಪ್ಪ ಆಕ್ರೋಶ

Published On - 12:08 pm, Mon, 18 January 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ