veerappa moily: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ನಿಧನ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 30, 2024 | 6:03 PM

Hamsa Moily: ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿ (46) ಅವರು ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಹಂಸಾ ಮೊಯ್ಲಿ ಅವರಿಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

veerappa moily: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ನಿಧನ
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ನಿಧನ
Follow us on

ಬೆಂಗಳೂರು, ಜೂನ್ 30: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (veerappa moily) ಪುತ್ರಿ ಹಂಸ ಮೊಯ್ಲಿ (46) (Hamsa Moily) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ರಾಜಕೀಯದ ಕಾರ್ಯ ಹಿನ್ನೆಲ್ಲೆ  ಛತ್ತೀಸ್​ಗಢ್​ ಪ್ರವಾಸದಲ್ಲಿದ್ದ ವೀರಪ್ಪ ಮೊಯ್ಲಿ ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಬೆಂಗಳೂರಿಗೆ ವೀರಪ್ಪ ಆಗಮಿಸಿದ್ದರು. ನಾಳೆ ಬೆಳಗ್ಗೆ ಪುತ್ರಿಯ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.

ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಆಗಿದ್ದು, ಹಲವು ಕಾರ್ಯಕ್ರಮಗಳಲ್ಲಿ ತಮ್ಮ ಕಲೆ ಪ್ರದರ್ಶನ ನೀಡಿದ್ದರು. ಜೊತೆಗೆ ನೃತ್ಯ ಸಂಯೋಜಕಿಯೂ ಆಗಿದ್ದರು. ಕೇವಲ ಭರತನಾಟ್ಯ ಕಲಾವಿದೆ ಅಲ್ಲದೆ ಸಿನಿಮಾನಿ ರಂಗದಲ್ಲೂ ಅವರು ಗುರುತಿಸಿಕೊಂಡಿದ್ದರು. ದೇವದಾಸಿಯರ ಜೀವನಾಧಾರಿತ ತಮಿಳು ಚಿತ್ರ ‘ಶೃಂಗಾರಂ’ನಲ್ಲಿ ಅವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!

ಹಂಸ ಮೊಯ್ಲಿ ಅವರು ಅನಾರೋಗ್ಯ ಹಿನ್ನೆಲೆ ಮನೆಯಲ್ಲಿ ವಿಶಾಂತ್ರಿ ಪಡೆಯುತ್ತಿದ್ದರು. ಆದರೆ ಬದಲಾದ ಹವಾಮಾನದಿಂದ ಏಕಾಏಕಿ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ಬಿಎಸ್​ ಯಡಿಯೂರಪ್ಪ ಸಂತಾಪ

ವೀರಪ್ಪ ಮೊಯ್ಲಿ ಪುತ್ರಿ ನಿಧನಕ್ಕೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿ ಅವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ಅತೀವ ದುಃಖವನ್ನು ಉಂಟುಮಾಡಿದೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಆಕೆಯ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ದೇವರು ಅಗಲಿದ ಚೇತನಕ್ಕೆ ಸದ್ಗತಿ ನೀಡಲಿ, ಕುಟುಂಬ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:39 pm, Sun, 30 June 24