ಕಾನೂನು ಪ್ರಕಾರ ಇದ್ದರೆ ಭಯವೇಕೆ?: ಸಿಎಂ “ತೆರಿಗೆ ಭಯೋತ್ಪಾದನೆ” ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು

1,823 ಕೋಟಿ ರೂಪಾಯಿ ತೆರಿಗೆ ಕಟ್ಟುವಂತೆ ಕಾಂಗ್ರೆಸ್​ಗೆ ಆದಾಯ ತೆರಿಗೆ (IT) ಇಲಾಖೆ ನೋಟಿಸ್ ಜಾರಿ ಮಾಡಿದ್ದ ಬಗ್ಗೆ ಆಕ್ರೋಶ ಹೊರಗಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತೆರಿಗೆ ಭಯೋತ್ಪಾದನೆ ಎಂಬ ಪದ ಬಳಕೆ ಮಾಡಿದ್ದರು. ಈ ವಿಚಾರವಾಗಿ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಕಾಂಗ್ರೆಸ್​ ಅಕ್ರಮವಾಗಿ 600 ಕೋಟಿ ರೂಪಾಯಿ ಸಂಗ್ರಹಿಸಿದೆ. ಇದನ್ನು ಪ್ರಶ್ನೆ ಮಾಡಬಾರದು ಅಂದರೆ ಹೇಗೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೇಳಿದ್ದಾರೆ.

ಕಾನೂನು ಪ್ರಕಾರ ಇದ್ದರೆ ಭಯವೇಕೆ?: ಸಿಎಂ ತೆರಿಗೆ ಭಯೋತ್ಪಾದನೆ ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು
ಸಿದ್ದರಾಮಯ್ಯ "ತೆರಿಗೆ ಭಯೋತ್ಪಾದನೆ" ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Rakesh Nayak Manchi

Updated on:Mar 31, 2024 | 2:39 PM

ಗದಗ, ಮಾ.31: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ “ತೆರಿಗೆ ಭಯೋತ್ಪಾದನೆ” ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ (Basavaraj Bommai), ಕಾಂಗ್ರೆಸ್​ ಅಕ್ರಮವಾಗಿ 600 ಕೋಟಿ ರೂಪಾಯಿ ಸಂಗ್ರಹಿಸಿದೆ. ಇದನ್ನು ಪ್ರಶ್ನೆ ಮಾಡಬಾರದು ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ಗೆ ಐಟಿ ನೋಟಿಸ್​ ಆರ್ಥಿಕ ಭಯೋತ್ಪಾದನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಗದಗದಲ್ಲಿ ಮಾತನಾಡಿದ ಅವರು, ಯಾವಾಗಲೂ ಕಾಂಗ್ರೆಸ್ ಪಕ್ಷ ಬ್ಲ್ಯಾಕ್ ಮನಿಗೆ ಉತ್ತೇಜನ ನೀಡಿದೆ ಎಂದರು. ಅಲ್ಲದೆ, ಕಾನೂನು ಪ್ರಕಾರ ಇದ್ದರೆ ಕಾಂಗ್ರೆಸ್​ ನಾಯಕರಿಗೆ ಭಯ ಯಾಕೆ? ಕಾನೂನು ವಿರುದ್ಧ ಮಾಡಿದಾಗ ಮಾತ್ರ ಭಯ ಇರುತ್ತದೆ ಎಂದರು. ಅಲ್ಲದೆ, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡುತ್ತಿದೆ. ಹಲವಾರು ವರ್ಷಗಳಿಂದ ನೋಟಿಸ್ ಕೊಟ್ಟರೂ ಇವರು ಉತ್ತರ ಕೊಟ್ಟಿಲ್ಲ ಎಂದರು.

ಸಿದ್ದರಾಮಯ್ಯ ಹೇಳಿದ್ದೆನು?

ಐಟಿ ನೋಟಿಸ್ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದ ಸಿದ್ದರಾಮಯ್ಯ ಅವರು, ತೆರಿಗೆ ಭಯೋತ್ಪಾದನೆ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದಿದ್ದರು.

ಇದನ್ನೂ ಓದಿ: ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ದೇವೇಗೌಡ ‘ಗರ್ವಭಂಗ’ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರ ಗರ್ವಭಂಗ ಮಾಡಬೇಕು ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ಜೆಡಿಎಸ್ ಎಲ್ಲಿದೆ ಅಂತ ಸಿದ್ದರಾಮಯ್ಯ ಲೇವಡಿ ಮಾಡಿದ್ದಕ್ಕೆ ದೇವೇಗೌಡರು ಈ ರೀತಿ ಹೇಳಿದ್ದಾರೆ ಎಂದರು.

ಹೆಚ್​ಡಿ ದೇವೇಗೌಡ ಹೇಳಿದ್ದೇನು?

ಶುಕ್ರವಾರ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ್ದ ಹೆಚ್​ಡಿ ದೇವೇಗೌಡ, ದುರ್ಬಲ ಪ್ರಧಾನಿ, ಪ್ರಬಲ ಮುಖ್ಯಮಂತ್ರಿ ಎಂದು ಹೇಳುವ ಸಿದ್ದರಾಮಯ್ಯ ಅವರ ಗರ್ವ ಇದೇ ಲೋಕಸಭಾ ಚುನಾವಣೆಯಲ್ಲಿ ಭಂಗವಾಗಬೇಕು ಎಂದು ಹೇಳಿದ್ದರು. ಜಗತ್ತು ಮೆಚ್ಚಿದ ಪ್ರಧಾನಿ ಮೋದಿ ಅವರ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಮೈತ್ರ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಮಾಡಬೇಕು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Sun, 31 March 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್