ಬುದ್ದಿಮಾಂದ್ಯ ಮಕ್ಕಳೊಂದಿಗೆ ನಾಳೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

|

Updated on: Jan 28, 2024 | 9:11 PM

ನಾಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 64ನೇ ಹುಟ್ಟು ಹಬ್ಬ ಆಚರಿಸುಕೊಳ್ಳಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಗೊಂಡು ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಲಿದ್ದಾರೆ. ಬುದ್ದಿ ಮಾಮದ್ಯ ಮಕ್ಕಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಳ್ಳಲಿದ್ದಾರೆ. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ನೀಡಲಾಗುತ್ತದೆ.

ಬುದ್ದಿಮಾಂದ್ಯ ಮಕ್ಕಳೊಂದಿಗೆ ನಾಳೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ನಾಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜನ್ಮದಿನ: ಬೊಮ್ಮಾಯಿ ಟ್ರಸ್ಟ್ ವತಿಯಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
Image Credit source: Bandeep Singh/indiatoday
Follow us on

ಬೆಂಗಳೂರು, ಜ.27: ನಾಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು 64ನೇ ಹುಟ್ಟು ಹಬ್ಬ ಆಚರಿಸುಕೊಳ್ಳಲಿದ್ದಾರೆ. ಅಲ್ಲದೆ, ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಶಿಗ್ಗಾವಿ, ಸವಣೂರು, ಹಾವೇರಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಹುಟ್ಟು ಹಬ್ಬದ ಅಂಗವಾಗಿ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಲಿದ್ದಾರೆ.

ಜನ್ಮದಿನದ ಪ್ರಯುಕ್ತ ಶಿಗ್ಗಾವಿ ಹಾಗೂ ಸವಣೂರಿನಲ್ಲಿ ಈಗಾಗಲೇ ಐ ಕ್ಯಾಂಪ್, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಕಾರ್ಯಕ್ರಮ ನೆರವೇರಿಸಲಾಗಿದೆ. ಅಲ್ಲದೇ ತಮ್ಮ ಟ್ರಸ್ಟ್ ವತಿಯಿಂದ 250 ವಿದ್ಯಾರ್ಥಿಗಳಿಗೆ ತಲಾ 5000 ಶಿಷ್ಯವೇತನ ನೀಡಿದ್ದಾರೆ.

ಇದನ್ನೂ ಓದಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ: ಬೊಮ್ಮಾಯಿ ಭವಿಷ್ಯ

ಬುದ್ದಿಮಾಂದ್ಯ ಮಕ್ಕಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಳ್ಳಲಿದ್ದು, ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಸಂಜೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ನೀಡಲಾಗುತ್ತದೆ. ನಂತರ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Sat, 27 January 24