AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ಖರ್ಗೆಗೆ ಯಡಿಯೂರಪ್ಪ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕ ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯಿಂದ ತೀರಾ ಕೆಳಮಟ್ಟದ ಹಾಗೂ ದುರಹಂಕಾರದ ಪರಮಾವಧಿ ಮಾತ್ರವಲ್ಲ ಕೊಳಕು ಹಾಗೂ ವಿಷಕಾರಿ ಮನಸ್ಥಿತಿ ಅನಾವರಣವಾಗಿದೆ ಎಂದಿದ್ದಾರೆ.

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ಖರ್ಗೆಗೆ ಯಡಿಯೂರಪ್ಪ ತಿರುಗೇಟು
Bs YediyurappaImage Credit source: PTI
ಸುಷ್ಮಾ ಚಕ್ರೆ
|

Updated on:Apr 21, 2026 | 5:57 PM

Share

ಬೆಂಗಳೂರು, ಏಪ್ರಿಲ್ 21: ತಮಿಳುನಾಡಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ, ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ನೀವು ನೀಡಿರುವ ಅತ್ಯಂತ ಹೇಯ ಹೇಳಿಕೆಯು ನಿಮ್ಮ ದುರಹಂಕಾರದ ಪರಮಾವಧಿಯಷ್ಟೇ ಅಲ್ಲ, ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಸಹ ಬಹಿರಂಗಪಡಿಸಿದೆ. ಭಾರತದ ಜನರು, ನಮ್ಮ ಗೌರವಾನ್ವಿತ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಅಚಲ ನಂಬಿಕೆಯೊಂದಿಗೆ, ಅವರನ್ನು ಸತತ ಮೂರನೇ ಬಾರಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರಿಸಿದ್ದಾರೆ. ಅವರನ್ನು ಟೀಕಿಸುತ್ತಾ ಅವರನ್ನು ಈ ರೀತಿ ಅವಮಾನಿಸುವುದು ಮೋದಿ ಅವರನ್ನು ಬೆಂಬಲಿಸುವ ಕೋಟ್ಯಂತರ ಭಾರತೀಯರನ್ನು ಅವಮಾನಿಸಿದಂತೆ!” ಎಂದಿದ್ದಾರೆ.

“ಮೂರನೇ ಬಾರಿಗೆ ಜನ ಪ್ರಧಾನಿಯಾಗಿ ಮೋದಿ ಅವರನ್ನು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಇಂತಹ ದುರ್ವರ್ತನೆ ಅಭ್ಯಾಸವಾಗಿದೆ. ನಿಮ್ಮ ರಾಜಕೀಯ ವೈಷಮ್ಯಕ್ಕೆ ಪ್ರಧಾನಿಯವರನ್ನು ಕೀಳಾಗಿ ನೋಡಬೇಡಿ. ಕೂಡಲೇ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೇಳಬೇಕು” ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

“ಇಂತಹ ನೀಚ ನಡವಳಿಕೆಯು ಕಾಂಗ್ರೆಸ್ ನಾಯಕರಿಗೆ ಅಭ್ಯಾಸವಾಗಿ ಹೋಗಿದೆ. ಪ್ರತಿ ಬಾರಿ ಚುನಾವಣೆಗಳು ಬಂದಾಗ, ಅವರು ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಾರೆ. ಜನರು ಅವರಿಗೆ ಪ್ರತಿಕ್ರಿಯೆಯಾಗಿ ಪಾಠ ಕಲಿಸುತ್ತಿದ್ದಾರೆ. ಆದರೂ, ಸರಿಪಡಿಸಲು ನಿರಾಕರಿಸುವ ಅವರ ನಡವಳಿಕೆಯು ಅವರ ದುರಹಂಕಾರಕ್ಕೆ ಕನ್ನಡಿಯಾಗಿದೆ” ಎಂದು ಯಡಿಯೂರಪ್ಪ ಕಿಡಿಕಾರಿದ್ದಾರೆ.

ಇದನ್ನೂ ಓದಿ: RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

“ಖರ್ಗೆಯವರೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದಾದ್ಯಂತ ಅನೇಕ ದೇಶಗಳ ನಾಯಕರು ಅಪ್ರತಿಮ ಜಾಗತಿಕ ನಾಯಕ ಎಂದು ಹೊಗಳುತ್ತಿದ್ದಾರೆ. ವಿಶ್ವದ 26ಕ್ಕೂ ಹೆಚ್ಚು ರಾಷ್ಟ್ರಗಳು ಮೋದಿ ಅವರ ನಾಯಕತ್ವವನ್ನು ಗೌರವಿಸಿ ಅವರಿಗೆ ತಮ್ಮ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಇಡೀ ಜಗತ್ತು ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ, ನಿಮ್ಮ ರಾಜಕೀಯ ದುರುದ್ದೇಶಕ್ಕಾಗಿ ದೇಶದ ಪ್ರಧಾನಿಯ ವಿರುದ್ಧ ಇಂತಹ ಕೀಳು ಮಟ್ಟದ ಪದಗಳನ್ನು ಬಳಸುತ್ತಿರುವುದು ನಿಮ್ಮ ಕೀಳು ಮನಸ್ಥಿತಿ ಮತ್ತು ನಿಮ್ಮ ರಾಜಕೀಯ ಹತಾಶೆಯನ್ನು ಸಾಬೀತುಪಡಿಸುತ್ತದೆ. ಅಧಿಕಾರಕ್ಕಾಗಿ ನಡೆಯುತ್ತಿರುವ ಹುಚ್ಚು ಹೋರಾಟದಲ್ಲಿ ಒಂದು ಕುಟುಂಬವನ್ನು ಸಂತೋಷಪಡಿಸುವ ಸಲುವಾಗಿ ನೀವು ನಿಮ್ಮ ಘನತೆಯನ್ನು ಕಳೆದುಕೊಂಡಿದ್ದೀರಿ. ನಿಮ್ಮಂತಹ ಹಿರಿಯ ವ್ಯಕ್ತಿಯ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ರಾಷ್ಟ್ರದ ಜನರು ಎಂದಿಗೂ ಕ್ಷಮಿಸುವುದಿಲ್ಲ. ಇಂತಹ ಕೀಳು ಮಟ್ಟದ ಹೇಳಿಕೆಗಾಗಿ ನೀವು ತಕ್ಷಣ ಕ್ಷಮೆಯಾಚಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಮಾಜಿ ಸಿಎಂ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Tue, 21 April 26

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ