AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ರಾಜ್ಯ ಪ್ರವಾಸಕ್ಕೆ 1 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ಮಾಜಿ ಸಿಎಂ ಯಡಿಯೂರಪ್ಪ

BS Yediyurappa New Car: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪಣ ತೊಟ್ಟಿರುವ ಬಿ.ಎಸ್. ಯಡಿಯೂರಪ್ಪ ತಮ್ಮ ಪ್ರವಾಸಕ್ಕೆಂದು 1 ಕೋಟಿ ರೂ. ಮೌಲ್ಯದ ಹೊಸ ಟೊಯೊಟಾ ವೆಲ್​ಫೈರ್ ಕಾರನ್ನು ಖರೀದಿಸಿದ್ದಾರೆ.

BS Yediyurappa: ರಾಜ್ಯ ಪ್ರವಾಸಕ್ಕೆ 1 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ಮಾಜಿ ಸಿಎಂ ಯಡಿಯೂರಪ್ಪ
ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್
TV9 Web
| Updated By: ಸುಷ್ಮಾ ಚಕ್ರೆ|

Updated on:Aug 26, 2021 | 3:33 PM

Share

ಬೆಂಗಳೂರು: ಇತ್ತೀಚೆಗಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಎಸ್. ಯಡಿಯೂರಪ್ಪ (BS Yediyurappa) ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಘೋಷಿಸಿದ್ದರು. 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿರುವ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯದ ತುಂಬ ಪ್ರವಾಸ ಮಾಡಲೆಂದು ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Polls 2023) ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪಣ ತೊಟ್ಟಿರುವ ಬಿ.ಎಸ್. ಯಡಿಯೂರಪ್ಪ ತಮ್ಮ ಪ್ರವಾಸಕ್ಕೆಂದು 1 ಕೋಟಿ ರೂ. ಮೌಲ್ಯದ ಹೊಸ ಟೊಯೊಟಾ ವೆಲ್​ಫೈರ್ (Toyota Vellfire)  ಕಾರನ್ನು ಖರೀದಿಸಿದ್ದಾರೆ.

78 ವರ್ಷದ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ತಮ್ಮ ಕುಟುಂಬಸ್ಥರೊಂದಿಗೆ ಮಾಲ್ಡೀವ್ಸ್​ಗೆ ಪ್ರವಾಸಕ್ಕೆ ತೆರೆಳಿದ್ದರು. ಕುಟುಂಬದೊಂದಿಗೆ ಮಾಲ್ಡೀವ್ಸ್​ನಲ್ಲಿ ಎಂಜಾಯ್ ಮಾಡಿದ ಯಡಿಯೂರಪ್ಪ ಸೋಮವಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಾಪಾಸಾಗಿದ್ದಾರೆ. ಈ ವೇಳೆ ಅವರನ್ನು ಬರಮಾಡಿಕೊಳ್ಳಲು ಹೊಸ ಟೊಯೊಟಾ ವೆಲ್​ಫೈರ್ ಕಾರನ್ನು ತರಲಾಗಿತ್ತು. ಅಂದಾಜು 1 ಕೋಟಿ ರೂ. ಬೆಲೆಯ ಬಿಳಿ ಬಣ್ಣದ KA -05- ND – 4545 ನೋಂದಣಿ ಸಂಖ್ಯೆಯ ಟೊಯೊಟಾ ವೆಲ್‌ಫೈರ್ ಕಾರನ್ನು ಯಡಿಯೂರಪ್ಪ ತಮ್ಮ ರಾಜ್ಯ ಪ್ರವಾಸಕ್ಕಾಗಿ ಖರೀದಿ ಮಾಡಿದ್ದಾರೆ.

toyota Vellfire

ಯಡಿಯೂರಪ್ಪ ಖರೀದಿಸಿದ ಟೊಯೊಟಾ ವೆಲ್​ಫೈರ್ ಕಾರು

ಈಗಿನಿಂದಲೇ 2023ರ ಚುನಾವಣಾ ತಯಾರಿಯನ್ನು ಶುರು ಮಾಡಿರುವ ಬಿಎಸ್ ಯಡಿಯೂರಪ್ಪ ತಮ್ಮ ಹೊಸ ಕಾರಿನಲ್ಲೇ ರಾಜ್ಯ ಪ್ರವಾಸ ಮಾಡಿ, ಅಲ್ಲಿನ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರನ್ನು ಬಳಕೆ ಮಾಡುತ್ತಿದ್ದ ಯಡಿಯೂರಪ್ಪ ಅದಕ್ಕೂ ಮೊದಲು ತಮ್ಮ ಮಗನ ಕಾರನ್ನು ಬಳಸುತ್ತಿದ್ದರು. ಇದೀಗ ತಾವೇ ಹೊಸ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. 2018ರ ವಿಧಾನಸಭಾ ಚುನಾವಣೆ ವೇಳೆ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅಫಿಡವಿಟ್​ನಲ್ಲೂ ತಮ್ಮ ಬಳಿ ಯಾವುದೇ ಸ್ವಂತ ಕಾರುಗಳಿಲ್ಲ ಎಂದು ಉಲ್ಲೇಖಿಸಿದ್ದರು.

ಅಂದಹಾಗೆ, ಯಡಿಯೂರಪ್ಪ ಹೊಸದಾಗಿ ಖರೀದಿಸಿರುವ ಟೊಯೊಟಾ ವೆಲ್​ಫೈರ್ ಕಾರಿನ ಬೆಲೆ 87 ಲಕ್ಷ ರೂ. ಆದರೆ ತೆರಿಗೆ ಸೇರಿ ಒಟ್ಟಾರೆ ಕಾರಿನ ಬೆಲೆ 1 ಕೋಟಿ ರೂ. ಆಗಿದೆ. ಯಡಿಯೂರಪ್ಪ ತಮಗೆಂದು ಖರೀದಿ ಮಾಡಿರುವ ಮೊದಲ ಕಾರು ಇದಾಗಿದೆ.

ಇದನ್ನೂ ಓದಿ: ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಬಿಎಸ್ ಯಡಿಯೂರಪ್ಪ; 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ

ನನಗೆ ಸಂಪುಟ ದರ್ಜೆಯ ಸ್ಥಾನಮಾನ ಬೇಡ, ದಯವಿಟ್ಟು ಹಿಂಪಡೆಯಿರಿ: ಬಿ ಎಸ್ ಯಡಿಯೂರಪ್ಪ

(Former CM BS Yediyurappa gets New Toyota Vellfire Luxury Car to Travel in Preparation to 2023 Karnataka Assembly Election)

Published On - 3:27 pm, Thu, 26 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ