ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಮಾಜಿ ಸಿಎಂ ಕುಮಾರಸ್ವಾಮಿ
ಏಪ್ರಿಲ್ 17ರಂದು ಕೊವಿಡ್ ಬಂದಿರುವುದನ್ನು ದೃಢಪಡಿಸಿದ್ದ ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ತಮ್ಮ ಸಂಪರ್ಕದಲ್ಲಿರುವವರು ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಎಚ್ಚರಿಸಿದ್ದರು.

ಬೆಂಗಳೂರು: ಕಳೆದ ಒಂದು ವಾರದಿಂದ ಕೊವಿಡ್ ಸೋಂಕಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಕೊವಿಡ್ ವರದಿ ನೆಗೆಟಿವ್ ಬಂದ ಕಾರಣ ಡಿಸ್ಚಾರ್ಜ್ ಆಗಿದ್ದಾರೆ. ಏಪ್ರಿಲ್ 17ರಂದು ಕೊವಿಡ್ ಬಂದಿರುವುದನ್ನು ದೃಢಪಡಿಸಿದ್ದ ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ತಮ್ಮ ಸಂಪರ್ಕದಲ್ಲಿರುವವರು ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಎಚ್ಚರಿಸಿದ್ದರು.
ಇತ್ತೀಚೆಗೆ ಹೆಚ್. ಡಿ. ಕುಮಾರಸ್ವಾಮಿ ಅವರ ತಂದೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ. ದೇವೇಗೌಡ ಮತ್ತು ತಾಯಿ ಚನ್ನಮ್ಮ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಹೆಚ್. ಡಿ. ದೇವೇಗೌಡ ದಂಪತಿಯಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಇತ್ತೀಚೆಗೆ ಮನೆಗೆ ಬಂದಿದ್ದರು. ಆ ವೇಳೆ ಹೆಚ್ ಡಿ ಕುಮಾರಸ್ವಾಮಿ ಅವರು ಸ್ವಯಂ ಕ್ವಾರೆಂಟೈನ್ನಲ್ಲಿದ್ದರು.
61 ವರ್ಷ ವಯಸ್ಸಿನ ಹೆಚ್.ಡಿ.ಕುಮಾರಸ್ವಾಮಿ 10 ದಿನಗಳ ಕಾಲ ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹೆಚ್ಡಿಕೆ, ಬಸವಕಲ್ಯಾಣ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದರು. ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊವಿಡ್-19 ಟೆಸ್ಟ್ ಮಾಡಿಸಿದ್ದರು. ನಂತರ ಕುಮಾರಸ್ವಾಮಿ ಅವರು ಬೆಂಗಳೂರಿನ ಜೆ.ಪಿ.ನಗರದ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು.
ಇದೇ ಸಂದರ್ಭದಲ್ಲಿ ಕೊರೊನಾ ಲಸಿಕೆ ವಿತರಣೆಯ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು, ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ಬರೆದುಕೊಂಡಿದ್ದಾರೆ.
ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ. 6/6
— H D Kumaraswamy (@hd_kumaraswamy) April 24, 2021
ಮಗ ನಿಖಿಲ್ಗೂ ಕಾಡಿತ್ತು ಕೊರೊನಾ ಅವರ ಮಗ ನಿಖಿಲ್ ಕುಮಾರಸ್ವಾಮಿ ರೈಡರ್ ಸಿನಿಮಾದ ಶೂಟಿಂಗ್ಗಾಗಿ ಇತ್ತೀಚೆಗೆ ಲೇಹ್-ಲಡಾಕ್ಗೆ ತೆರಳಿದ್ದಾಗ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಆಗ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ನಿಖಿಲ್ ಕುಮಾರಸ್ವಾಮಿ, ನಾನು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ಬರೆದುಕೊಂಡಿದ್ದರು.
ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲು ಆಗದು; ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್
(Former CM H D Kumaraswamy discharged from hospital after testing covid negative)
Published On - 5:41 pm, Sat, 24 April 21



