AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಹಿಳೆಯರ ಕ್ಷಮೆ ಯಾಚಿಸುವಂತೆ ಮಂಡ್ಯದಲ್ಲಿ ಪ್ರತಿಭಟನೆ

ಮೊಂಬತ್ತಿ ಹಿಡಿದು ಧಿಕ್ಕಾರ ಕೂಗುತ್ತಿರುವ ಪ್ರತಿಭಟನಾಕಾರರು ಮಹಿಳೆಯರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅಪಮಾನ ಮಾಡಿದ್ದಾರೆ. ಹೀಗಾಗಿ ತಕ್ಷಣವೇ ಕ್ಷಮೆ ಕೋರಬೇಕು ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ. 

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಹಿಳೆಯರ ಕ್ಷಮೆ ಯಾಚಿಸುವಂತೆ ಮಂಡ್ಯದಲ್ಲಿ ಪ್ರತಿಭಟನೆ
ಪ್ರತಿಭಟನೆಯ ದೃಶ್ಯ
TV9 Web
| Updated By: guruganesh bhat|

Updated on: Jul 05, 2021 | 9:00 PM

Share

ಮಂಡ್ಯ: ಕೆಆರ್​ಎಸ್ ಡ್ಯಾಂ​ ಬಾಗಿಲಿಗೆ ಸುಮಲತಾರನ್ನು ಮಲಗಿಸಬೇಕು ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರದಲ್ಲಿ 2 ನಾಲಗೆ ಇರುವಂತೆ ಚಿತ್ರಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೊಂಬತ್ತಿ ಹಿಡಿದು ಧಿಕ್ಕಾರ ಕೂಗುತ್ತಿರುವ ಪ್ರತಿಭಟನಾಕಾರರು ಮಹಿಳೆಯರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅಪಮಾನ ಮಾಡಿದ್ದಾರೆ. ಹೀಗಾಗಿ ತಕ್ಷಣವೇ ಕ್ಷಮೆ ಕೋರಬೇಕು ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ. 

ಏನಿದು ಹೇಳಿಕೆ? ಏಕೀ ಪ್ರತಿಭಟನೆ? ಕೆಆರ್​ಎಸ್​ ಡ್ಯಾಂ ಸೋರುತ್ತಿದ್ದರೆ ನೀರು ಸೋರದಂತೆ ಸುಮಲತಾ ಅವರನ್ನ ಮಲಗಿಸಬೇಕು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಂಸದೆ ಸುಮಲತಾ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಮಂಡ್ಯದಲ್ಲಿ ಇಂತಹ ಸಂಸದರು ಬಂದಿಲ್ಲ, ಬರೋದಿಲ್ಲ. ಕೆಆರ್​ಎಸ್  ಆಣೆಕಟ್ಟನ್ನು ಇವರೇ ರಕ್ಷಿಸುತ್ತಿದ್ದಾರೆ ಅನ್ನೋ ರೀತಿ ಹೇಳಿದ್ದಾರೆ. ಕೆಆರ್​ಎಸ್  ಸೋರುತ್ತಿದ್ದರೆ ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು. ಕೆಆರ್​ಎಸ್ ಡ್ಯಾಂ ಬಿರುಕುಬಿಟ್ಟಿದೆ ಎಂದು ಸುಮಲತಾ ಹೇಳಿದ್ದರು ಎಂದು ಸುಮಲತಾ ಹೇಳಿಕೆ ಖಂಡಿಸಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದರು. ಯಾವುದೋ ಅನುಕಂಪದಲ್ಲಿ ಆಯ್ಕೆಯಾಗಿದ್ದಾರೆ. ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಲಿ. ಸಂಸದರಾಗಿ ಮಂಡ್ಯ ಕ್ಷೇತ್ರದ ಜನರ ಸೇವೆ ಮಾಡಲಿ ಎಂದರು.

ಮಂಡ್ಯ ಮೈ ಶುಗರ್ ಖಾಸಗೀಕರಣಕ್ಕೆ ಸಂಸದರ ಒತ್ತಡ ಇದೆಯಾ ಅಂತ ಅವರನ್ನೇ ಕೇಳಬೇಕು. ಅಂಥಹ ಸಂಸದೆ ಮಂಡ್ಯಕ್ಕೆ ಸಿಕ್ಕಿಲ್ಲ, ಸಿಗಲ್ಲ. ಮೊನ್ನೆ ಯಾವುದೋ ಸಭೆಯಲ್ಲಿ KRS ಇವರೇ ರಕ್ಷಣೆ ಮಾಡ್ತಿರುವ ಹಾಗೆ ಹೇಳಿಕೆ ಕೊಟ್ಟಿದ್ದಾರೆ. ಕೆಆರ್​ಎಸ್  ಬಾಗಿಲಿಗೆ ನೀರು ಹೋಗದಂತೆ ಅವರನ್ನೇ ಮಲಗಿಸಿಬಿಟ್ರೆ ಬಿಗಿಯಾಗುತ್ತದೆ. ಸಂಸದರು ಕೆಲಸ ಯಾವ ರೀತಿ ಮಾಡಬೇಕು ಅಂತ ಮಾಹಿತಿ ಪಡೆಯಲ್ಲ. ಕಾಟಾಚಾರಕ್ಕೆ ಯಾರ ಮೇಲಿನ ದ್ವೇಷಕ್ಕೋ ಹೇಳಿಕೆ ಕೊಡೋದು ಸರಿಯಲ್ಲ. ಇದು ಬಹಳ ದಿನ ನಡೆಯಲ್ಲ. ಅನುಕಂಪದ ಮೇಲೆ ಗೆದ್ದ ಮೇಲೆ ಜನರ ಕೆಲಸ ಮಾಡಬೇಕು. ಅನುಕಂಪದ ಅವಕಾಶ ಸದ್ಬಳಕೆ ಮಾಡಿಕೊಳ್ಳದಿದ್ರೆ ಮುಂದೆ ಜನರೇ ಪಾಠ ಕಲಿಸ್ತಾರೆ ಎಂದರು.

ನಾನು ಮಂಡ್ಯ ಕ್ಷೇತ್ರದ ಜನರಿಗೆ ಉತ್ತರದಾಯಿ, ಕುಮಾರಸ್ವಾಮಿಗಲ್ಲ: ಇನ್ನು, ಕೆಆರ್​ಎಸ್​​ ಬಗ್ಗೆ ಮಾತನಾಡಿದಾಗಲೆಲ್ಲ ಟಾರ್ಗೆಟ್ ಮಾಡುತ್ತಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಮಾತಾಡುವುದೇ ಹೆಚ್​ಡಿ ಕುಮಾರಸ್ವಾಮಿ ಅವರ ಹವ್ಯಾಸ. ಇಂತಹ ಹೇಳಿಕೆಯಿಂದ ಯಾರಿಗೆ ತೊಂದ್ರೆ ಎಂದು ಅರಿಯಲಿ. ಸಂಸದೆಯಾಗಿ ಪ್ರಾಮಾಣಿಕವಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ನಾನು ಯಾರೊಬ್ಬರನ್ನೂ ಮೆಚ್ಚಿಸಲು ಕೆಲಸ ಮಾಡುವುದಿಲ್ಲ. ಮಂಡ್ಯ ಕ್ಷೇತ್ರದ ಜನರು ನನ್ನ ಕೆಲಸ ಮೆಚ್ಚಿದರೆ ಸಾಕು. ಮಂಡ್ಯ ಕ್ಷೇತ್ರದ ಜನರಿಗೆ ನಾನು ಉತ್ತರದಾಯಿ, ಇವರಿಗಲ್ಲ. ಯಾರೋ ಹೇಳಿದ್ದಕ್ಕೆಲ್ಲ ನಾನು ಉತ್ತರ ನೀಡಲು ಹೋಗಲ್ಲ ಎಂದು ಟಿವಿ9 ಜೊತೆ ಮಾತನಾಡಿ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನಂತಹ ಸಂಸದೆಯನ್ನು ನೋಡಿಲ್ಲ, ನೋಡೋದು ಇಲ್ಲ ಎಂದ ಕುಮಾರಸ್ವಾಮಿ ಹೇಳಿಕೆ ಸತ್ಯವಾಗಿದೆ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಯೂ ಸತ್ಯವಾಗಿದೆ. ನನ್ನಂತಹ ಸಂಸದೆಯನ್ನು ನೋಡಿಲ್ಲ, ನೋಡೋದು ಇಲ್ಲ. ನಾನು ಯಾವಾಗಲೂ ನೇರವಾಗಿಯೇ ಮಾತನಾಡುತ್ತೇನೆ. ನನ್ನ ನೇರ ನಡೆ, ನುಡಿ ಅವರಿಗೆ ಇಷ್ಟವಾಗದಿದ್ದರೆ ಏನ್ಮಾಡಲಿ? ಕೆಆರ್​ಎಸ್​ ಜಲಾಶಯ ಉಳಿಸುವುದೇ ನನ್ನ ಉದ್ದೇಶ. ಹೆಚ್​ಡಿಕೆ ಲೆವೆಲ್​ಗೆ ಇಳಿದು ನಾನು ಮಾತನಾಡುವುದಿಲ್ಲ. ಚುನಾವಣೆ ಸಂದರ್ಭದಲ್ಲೂ ನನ್ನ ಬಗ್ಗೆ ಮಾತನಾಡಿದ್ದರು. ಅವರ ಧಾಟಿಯಲ್ಲಿ ನಾನು ಮಾತನಾಡಲು ಹೋಗುವುದಿಲ್ಲ. ಅವರ ವ್ಯಕ್ತಿತ್ವ, ಸಂಸ್ಕಾರ ಏನು ಎಂದು ತೋರಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಮಂಡ್ಯದ ಜನ ಬುದ್ಧಿ ಕಲಿಸಿದ್ದಾರೆ. ಮಂಡ್ಯಕ್ಕೆ ಯಾರು ಸೂಕ್ತವೆಂದು ಜನರೇ ತೀರ್ಪು ನೀಡಿದ್ದರು ಎಂದು ಸುಮಲತಾ ಹೇಳಿದ್ದಾರೆ.

ಇದನ್ನೂ ಓದಿ:

ಸುಮಲತಾ ಅಂಬರೀಶ್ ನನ್ನ ಸ್ನೇಹಿತನ ಅಗಲುವಿಕೆಯನ್ನು ದುರ್ಬಳಕೆ ಮಾಡಿಕೊಂಡು ಗೆದ್ದಿದ್ದಾರೆ: ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ

ಬಿ ಎಸ್ ಯಡಿಯೂರಪ್ಪ ಭೇಟಿಯಾದ ಸಂಸದೆ ಸುಮಲತಾ; ಮೈಶುಗರ್ ಕಾರ್ಖಾನೆ, ಅಕ್ರಮ ಗಣಿಗಾರಿಕೆ ವಿಚಾರ ಚರ್ಚೆ

(Former CM H D Kumaraswamy must apologize to women protests in Mandya by MP Sumalatha Ambarish Supporters)

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ