1 ತಿಂಗಳು ಲಾಕ್‌ಡೌನ್ ವಿಸ್ತರಿಸಿ, ಇಲ್ಲದಿದ್ದರೆ ದೊಡ್ಡ ಅನಾಹುತವೇ ಆಗಲಿದೆ; ಎಚ್ ಡಿ ಕುಮಾರಸ್ವಾಮಿ
ಸರ್ಕಾರ ಹಲವು ಕಡೆ ಕೊವಿಡ್ ಟೆಸ್ಟ್ ಸ್ಥಗಿತಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಮತ್ತಷ್ಟು ಸಾವು ನೋವು ಆಗುತ್ತದೆ. ಕೊವಿಟ್ ಟೆಸ್ಟ್ ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ಜನರ ದಿಕ್ಕು ತಪ್ಪಿಸಿ ದೊಡ್ಡ ಎಡವಟ್ಟು ಮಾಡುತ್ತಿದ್ದೀರಿ. ಮತ್ತೆ ಮತ್ತೆ ತಪ್ಪು ಮಾಡಬೇಡಿ ಎಂದು ಅವರು ಆಗ್ರಹಿಸಿದರು.
ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಒಂದು ತಿಂಗಳು ಲಾಕ್ ಡೌನ್ ವಿಸ್ತರಣೆ ಮಾಡಬೇಕು. ಲಾಕ್‌ಡೌನ್ ವಿಸ್ತರಿಸದಿದ್ದರೆ ದೊಡ್ಡ ಅನಾಹುತವಾಗಲಿದೆ. ದಯವಿಟ್ಟು, ರಾಜ್ಯದ ಜನರ ಜೀವದ ಜೊತೆ ಆಟವಾಡಬೇಡಿ. ಲಾಕ್‌ಡೌನ್ ಜತೆಗೆ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನುದ್ದೇಶಿಸಿ ಆಗ್ರಹಿಸಿದರು.
ಕೊರೊನಾ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಸಣ್ಣತನದ ರಾಜಕೀಯ ನಡೆಸುತ್ತಿದೆ. ಸರ್ಕಾರ ಹಲವು ಕಡೆ ಕೊವಿಡ್ ಟೆಸ್ಟ್ ಸ್ಥಗಿತಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಮತ್ತಷ್ಟು ಸಾವು ನೋವು ಆಗುತ್ತದೆ. ಕೊವಿಟ್ ಟೆಸ್ಟ್ ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ಜನರ ದಿಕ್ಕು ತಪ್ಪಿಸಿ ದೊಡ್ಡ ಎಡವಟ್ಟು ಮಾಡುತ್ತಿದ್ದೀರಿ. ಇದರಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಹೆಚ್ಚಾಗುತ್ತವೆ. ಈಗಾಗಲೇ ಕೊವಿಡ್ ವಿಚಾರದಲ್ಲಿ ತಪ್ಪು ಮಾಡಿದ್ದೀರಿ. ಮತ್ತೆ ತಪ್ಪು ಮಾಡಬೇಡಿ ಎಂದು ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ಕೋವಿಡ್ 19 ಈಗ ಹಳ್ಳಿ ಹಳ್ಳಿಗಳನ್ನು ವೇಗವಾಗಿ ವ್ಯಾಪಿಸುತ್ತಿದೆ. ಸೋಂಕಿತರು ಹಾಲನ್ನು ಡೈರಿಗಳಿಗೆ ತಂದು ಹಾಕುತ್ತಿರುವುದರಿಂದ ರೋಗ ಇನ್ನಷ್ಟು ಹಬ್ಬುತ್ತಿದೆ. ಗ್ರಾಮೀಣ ಭಾಗದ ಈ ಹೊಸ ಸಮಸ್ಯೆಯನ್ನು ಸರಕಾರ, ಕೆಎಂಎಫ್ ಮತ್ತು ಹಾಲು ಒಕ್ಕೂಟಗಳು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. 1/4
— H D Kumaraswamy (@hd_kumaraswamy) May 16, 2021
ಲಾಕ್‌ಡೌನ್ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ. 4/4
— H D Kumaraswamy (@hd_kumaraswamy) May 17, 2021
ಕೇವಲ ಲಾಕ್ ಲೌನ್ ಮಾಡಿದರೆ ಸಾಕಾಗುವುದಿಲ್ಲ. ಕೂಲಿ ಕಾರ್ಮಿಕರಿಕೆ ,ಶ್ರಮಿಕರು,ಬಡವರಿಗೆ ವಿಶೇಷ ಪ್ಯಾಕೇಜ್ ಘೋಷನೆ ಮಾಡಬೇಕು. ಕೊವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಮೊದಲು ವ್ಯಾಕ್ಸಿನ್ ಬಂದಾಗ ತೆಗೆದುಕೊಳ್ಳಬೇಡಿ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿದೆ. ಈಗ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಸಣ್ಣ ತನದ ರಾಜಕೀಯ ಮಾಡುತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಇದನ್ನೂ ಓದಿ: Karnataka Lockdown: ಕರ್ನಾಟಕ ಲಾಕ್‌ಡೌನ್ ವಿಸ್ತರಣೆ; ನಾಳೆ ನಡೆಯಲಿರುವ ಸಭೆಯಲ್ಲೇ ಅಂತಿಮ ತೀರ್ಮಾನ ಖಚಿತ
Karnataka Covid Update: ಕರ್ನಾಟಕದಲ್ಲಿ ಇಂದು ಕೊವಿಡ್ನಿಂದ 58,395 ಜನ ಗುಣಮುಖ, 30,309 ಹೊಸ ಪ್ರಕರಣ; ಸಚಿವ ಡಾ.ಸುಧಾಕರ್(Former CM HD KUmaraswamy demands extend Karnataka Lockdown again 1 month)