AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿದ್ದೇವೆ ಯಕಃಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ: HDK

ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ಆರಂಭಿಸಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿದ್ದೇವೆ ಯಕಃಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ: HDK
ಹೆಚ್​.ಡಿ. ಕುಮಾರಸ್ವಾಮಿ
ಪೃಥ್ವಿಶಂಕರ
|

Updated on:Jan 03, 2021 | 4:38 PM

Share

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ಪಕ್ಷದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌, ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದು ಹೇಳಿದ್ದಾರೆ.

ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ. ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ @ArunSinghbjp ಎದುರು ಮೈತ್ರಿ ಪ್ರಸ್ತಾಪ ಇಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ. 1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಃಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ತಮ್ಮ ನಿಲುವು ಹೇಳಿಕೊಂಡಿದ್ದಾರೆ.

Published On - 4:33 pm, Sun, 3 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!