ಅನುಶ್ರೀ ವಿಚಾರದಲ್ಲಿ ಒತ್ತಡ ಹಾಕಿದ ಆ ಮಾಜಿ CM ಯಾರು? ಹೆಸರು ಹೇಳಿ -HDK ಒತ್ತಾಯ

ಬೆಂಗಳೂರು: ಌಂಕರ್​ ಅನುಶ್ರೀ ಪ್ರಕರಣದ ವಿಚಾರವಾಗಿ ಕೇಳಿಬರುತ್ತಿರುವ ಪ್ರಭಾವಿ ನಾಯಕರ ಹೆಸರಲ್ಲಿ ಯಾವ ಮಾಜಿ ಸಿಎಂ ಇದ್ದಾರೆ ಅಂತಾ ಜನರು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ನಾನು ಸರ್ಕಾರಕ್ಕೆ, ಸಿಎಂಗೆ ಮತ್ತು ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಏನು ಅನ್ನೋದು ಗೊತ್ತಾಗಬೇಕಿದೆ. ಯಾರು ಮಾಹಿತಿ ಕೊಟ್ಟಿದ್ದಾರೆ? ಯಾರು ಇದ್ದಾರೆ? ಯಾವ ಮಾಜಿ ಸಿಎಂ ಇದ್ದಾರೆ ಅನ್ನೋ ಸತ್ಯ ಗೊತ್ತಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. CCB ನೋಟಿಸ್ ಬಂದ […]

ಅನುಶ್ರೀ ವಿಚಾರದಲ್ಲಿ ಒತ್ತಡ ಹಾಕಿದ ಆ ಮಾಜಿ CM ಯಾರು? ಹೆಸರು ಹೇಳಿ -HDK ಒತ್ತಾಯ
ಮಾಜಿ ಸಿಎಂ H.D.ಕುಮಾರಸ್ವಾಮಿ
Follow us
KUSHAL V
|

Updated on:Oct 03, 2020 | 3:25 PM

ಬೆಂಗಳೂರು: ಌಂಕರ್​ ಅನುಶ್ರೀ ಪ್ರಕರಣದ ವಿಚಾರವಾಗಿ ಕೇಳಿಬರುತ್ತಿರುವ ಪ್ರಭಾವಿ ನಾಯಕರ ಹೆಸರಲ್ಲಿ ಯಾವ ಮಾಜಿ ಸಿಎಂ ಇದ್ದಾರೆ ಅಂತಾ ಜನರು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಸರ್ಕಾರಕ್ಕೆ, ಸಿಎಂಗೆ ಮತ್ತು ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಏನು ಅನ್ನೋದು ಗೊತ್ತಾಗಬೇಕಿದೆ. ಯಾರು ಮಾಹಿತಿ ಕೊಟ್ಟಿದ್ದಾರೆ? ಯಾರು ಇದ್ದಾರೆ? ಯಾವ ಮಾಜಿ ಸಿಎಂ ಇದ್ದಾರೆ ಅನ್ನೋ ಸತ್ಯ ಗೊತ್ತಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. CCB ನೋಟಿಸ್ ಬಂದ ದಿನವೇ ಮೂವರಿಗೆ ಅನುಶ್ರೀಯಿಂದ ಕಾಲ್‌: ಯಾರು ಗೊತ್ತಾ ಆ ಪ್ರಭಾವಿಗಳು?

‘ಡ್ರಗ್ಸ್ ವಿಚಾರದಲ್ಲಿ ನಾನು ಮೊದಲೇ ಹೇಳಿದ್ದೆ’ ಡ್ರಗ್ಸ್ ವಿಚಾರದಲ್ಲಿ ನಾನು ಮೊದಲೇ ಹೇಳಿದ್ದೆ. ಇದು ಹಳ್ಳ ಹಿಡಿಯುತ್ತೆ ಎಂದು ಹೇಳಿದ್ದೆ. ದಿನಕ್ಕೊಂದು ಕಪೋಲಕಲ್ಪಿತ ವರದಿಗಳು ಬರುತ್ತಿವೆ. ಕೆಲವು ಮಾಧ್ಯಮಗಳು ಅದರದ್ದೇ ಆದ ರೀತಿಯ ವರದಿಗಳನ್ನು ಮಾಡುತ್ತಿವೆ.

ಌಂಕರ್ ​ಅನುಶ್ರೀ ವಿಚಾರದಲ್ಲಿ ಕೂಡಾ ಇಂಥದ್ದೇ ವರದಿಗಳು ಬರ್ತಿವೆ. ಕೆಲವು ಪ್ರಭಾವಿ ರಾಜಕಾರಣಿಗಳ ಕೈವಾಡವಿದೆ. ಆಕೆಯ ಕಾಲ್ ಲಿಸ್ಟ್​ನಲ್ಲಿ ಎರಡು ಬಾರಿ ಸಿಎಂ ಆಗಿದ್ದವರು ಎಂದೆಲ್ಲಾ ವರದಿಗಳು ಬರ್ತಿವೆ ಎಂಬುದನ್ನೂ ಕುಮಾರಸ್ವಾಮಿ ಪ್ರಸ್ತಾಪಿಸಿದರು.

ನಾನು SM ಕೃಷ್ಣ, ಜಗದೀಶ್ ಶೆಟ್ಟರ್ ಮತ್ತು ಸಿದ್ದರಾಮಯ್ಯ ಸೇರಿ ಆರು ಜನ ಇದ್ದೇವೆ. ಯಾರು ಆ ಮಾಜಿ ಮುಖ್ಯಮಂತ್ರಿ ಎಂಬ ಹೆಸರನ್ನಾದರೂ ಹೇಳಬೇಕಲ್ಲ? ಯಾರು ಈ ವರದಿ ಕೊಟ್ಟಿದ್ದಾರೋ, ಆ ವರದಿಗಾರರ ಬಳಿ ನಾನು.. ಬೇರೆ ಮೂಲದಿಂದ ತಿಳಿದುಕೊಂಡೆ. ಆತನ ಬಳಿ ಯಾರೋ ಶಿವಪ್ರಕಾಶ್ ಎಂಬ ಅಧಿಕಾರಿ ಮಾತನಾಡಿರುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆ ಮಾಜಿ ಮುಖ್ಯಮಂತ್ರಿ ಯಾರು ಎಂಬುದನ್ನು ಸರ್ಕಾರ ಹೊರ ತರಬೇಕು. ಆ ಮಾಜಿ ಮುಖ್ಯಮಂತ್ರಿ ಯಾರು ಎಂಬುದನ್ನು ಮಾಧ್ಯಮಗಳಿಗೆ ಮಾಹಿತಿ ಕೊಟ್ಟವರು ಯಾರು? ಜೊತೆಗೆ, ಮಾಜಿ ಸಿಎಂ ಮಗ ಎಂದೂ ವರದಿಗಳು ಬರ್ತಿವೆ. ಈ ರೀತಿಯ ಕಪೋಲಕಲ್ಪಿತ ವರದಿಗಳನ್ನು ಸುಮ್ಮನೆ ಬಿಡಬಾರದು. ನಾನಂತೂ ಇದನ್ನು ತನಿಖೆಗೆ ಒತ್ತಾಯ ಮಾಡುತ್ತೇನೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Published On - 2:45 pm, Sat, 3 October 20

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ