AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ಗೆ ಬಹುಮತ ಕೊಡಿ, 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ; ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪರ್ಯಾಯವಲ್ಲ. ಅದು ಶೋಗಾಗಿ ನಡೆಸಿದ ಯಾತ್ರೆ. ಅವರು ನೇರವಾಗಿ ರಾಜಕೀಯ ಯಾತ್ರೆ ಅಂತಾ ಹೇಳಲಿಲ್ಲ. ನಮ್ಮದು ಜನರ ಮುಂದೆ ಸಮಸ್ಯೆ ಬಿಚ್ಚಿಡಲು ಯಾತ್ರೆ.

ಜೆಡಿಎಸ್​ಗೆ ಬಹುಮತ ಕೊಡಿ, 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ; ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
TV9 Web
| Updated By: sandhya thejappa|

Updated on:Apr 12, 2022 | 9:04 AM

Share

ಮೈಸೂರು: ಮೇ 16ರಂದು ಜೆಡಿಎಸ್​ನ ಜನತಾ ಜಲಧಾರೆ ಕಾರ್ಯಕ್ರಮ ಹಿನ್ನೆಲೆ ಇಂದು (ಏಪ್ರಿಲ್ 12) ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಚಾಮುಂಡಿ ಬಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ಗೆ (JDS) ಬಹುಮತ ಕೊಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜಿಸುತ್ತೇನೆ ಅಂತ ಚಾಮುಂಡೇಶ್ವರದಲ್ಲಿ ಪ್ರಮಾಣ ಮಾಡಿದ್ದಾರೆ. ಈ ಬಾರಿ ಕನ್ನಡಿಗರ ಬಹುಮತದ ಸರ್ಕಾರ ಬೇಕು. ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಇಲ್ಲ. 30 ಅಥವಾ 40 ಸ್ಥಾನಕ್ಕಾಗಿ ಹೋರಾಟ ಅಲ್ಲ. ಪೂರ್ಣ ಪ್ರಮಾಣದ ಸರ್ಕಾರಕ್ಕೆ ಹೋರಾಟ. ನಮ್ಮದು ವಿಚಾರಾಧಾರಿತವಾದ ಹೋರಾಟ. ಧರ್ಮ ಧರ್ಮಗಳ ನಡುವೆ ಬೆಂಕಿ ಇಟ್ಟು ಮತ ಕೇಳುತ್ತಿಲ್ಲ. ರಾಜ್ಯದ ಅಭಿವೃದ್ದಿಗಾಗಿ ನಮ್ಮ ಹೋರಾಟ ಎಂದರು.

ಅಧಿಕೃತ ಚುನಾವಣಾ ಪ್ರಚಾರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪರ್ಯಾಯವಲ್ಲ. ಅದು ಶೋಗಾಗಿ ನಡೆಸಿದ ಯಾತ್ರೆ. ಅವರು ನೇರವಾಗಿ ರಾಜಕೀಯ ಯಾತ್ರೆ ಅಂತಾ ಹೇಳಲಿಲ್ಲ. ನಮ್ಮದು ಜನರ ಮುಂದೆ ಸಮಸ್ಯೆ ಬಿಚ್ಚಿಡಲು ಯಾತ್ರೆ. ಈ ಮೂಲಕ ಮುಂದಿನ ಚುನಾವಣೆಗಾಗಿ ಯಾತ್ರೆ ಮಾಡಲಾಗುತ್ತದೆ. ಯಾತ್ರೆ ಮೂಲಕ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ಇದನ್ನು ನಾನು ನೇರವಾಗಿ ಹೇಳುತ್ತಿದ್ದಾನೆ ಅಂತ ಮೈಸೂರಿನಲ್ಲಿ ಹೆಚ್​ಡಿಕೆ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಿಮ್ಮ ಮಾತಿನ ಅರ್ಥ ಏನು? ರಾಜ್ಯದಲ್ಲಿ ತಲೆ ಒಡೆಯುತ್ತಾ ಇರುತ್ತೇವೆ ಅಂತಾನಾ? ನೀವು ತಲೆ ಒಡೆಯುತ್ತಿರಿ, ನಾವು ಸಾಂತ್ವನ ಹೇಳಬೇಕಾ ಅನ್ನೋದಾ? ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಮಾತಿಗೆ ಕುಮಾರಸ್ವಾಮಿ ವ್ಯಂಗ್ಯ: ರಾಜ್ಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಿರಿ ಎಂದು ಭಾಷಣದಲ್ಲಿ ಸಿದ್ದರಾಮಯ್ಯ ಹೇಳಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯ ತಮ್ಮ ಮನಸ್ಸಿನ ಮಾತನ್ನು ನೇರವಾಗಿ ಹೇಳಿದ್ದಾರೆ. ಅದು ಅವರ ಬಾಯಿ ತಪ್ಪಿನಿಂದ ಬಂದ ಮಾತಲ್ಲ. ಅದು ಅವರ ಮನಸ್ಸಿನ ಮಾತು ಎಂದು ವ್ಯಂಗ್ಯವಾಡಿದ್ದಾರೆ.

ಸಿಎಂಗೆ ತಿರುಗೇಟು: ನನ್ನ ಮಾತಲ್ಲ ನನ್ನ ಕೆಲಸ ಮುಖ್ಯ ಎಂದಿದ್ದ ಸಿಎಂಗೆ ಹೆಚ್​ಡಿಕೆ ತಿರುಗೇಟು ನೀಡಿದ್ದಾರೆ. ನಿಮ್ಮ ಯಾವ ಕೆಲಸ ಮಾತನಾಡುತ್ತಿದೆ? ರಾಯಚೂರಿನಲ್ಲಿ ಯಾವ ಕಾರಣಕ್ಕೆ ತಲವಾರ್ ಹಂಚಿದ್ದಾರೆ. ಅವರ‌ನ್ನು ನೀವು ಅರೆಸ್ಟ್ ಮಾಡಿದ್ದೀರಾ ಮೌನಿ‌ ಸಿಎಂ ಅವರೇ? ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ, ಈಶ್ವರಪ್ಪ ಭೇಟಿ: ಇನ್ನು ಚಾಮುಂಡಿ ಬೆಟ್ಟದಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಚಿವ ಕೆಎಸ್ ಈಶ್ವರಪ್ಪ ಭೇಟಿ ಮಾಡಿದ್ದಾರೆ. ಜನತಾ ಜಲಧಾರೆ ರಥಕ್ಕೆ ಪೂಜೆ ಸಲ್ಲಿಸಲು ಕುಮಾರಸ್ವಾಮಿ ಆಗಮಿಸಿದ್ದರು. ಇದೇ ವೇಳೆ ಈಶ್ವರಪ್ಪ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು.

ಇದನ್ನೂ ಓದಿ

Horoscope Today- ದಿನ ಭವಿಷ್ಯ; ಕನ್ಯಾ ರಾಶಿಯವರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಘರ್ಷಣೆ, ಭಿನ್ನಾಭಿಪ್ರಾಯಗಳಾಗಲಿವೆ

Chanakya Niti: ಈ 5 ಘಟನೆಗಳು ಹಣದ ಸಮಸ್ಯೆ ಉಂಟಾಗಲಿರುವ ಸೂಚನೆ ಆಗಿರಬಹುದು; ಜಾಗರೂಕರಾಗಿರಿ- ಚಾಣಕ್ಯ ನೀತಿ

Published On - 8:59 am, Tue, 12 April 22

ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್