ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಯವರಿಗೆ ಬಲಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿತ್ತು: ವೈದ್ಯ ಡಾ ಸತೀಶ್
ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಬಲಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದು ಅವರಿಗೆ ಮಧ್ಯರಾತ್ರಿ ಗೊತ್ತಾಗಿದೆ. ಎಡಭಾಗದಲ್ಲಿ ರಕ್ತನಾಳ ಸಮಸ್ಯೆಯಾಗಿತ್ತು ಎಂದು ಜಯನಗರದ ಅಪೋಲೊ ಆಸ್ಪತ್ರೆಯ ವೈದ್ಯ ಡಾ. ಸತೀಶ್ ಚಂದ್ರ ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಆಗಸ್ಟ್ 30: ಮಾಜಿ ಮುಖ್ಯಂತ್ರಿ ಹೆಚ್‌ಡಿ ,ಕುಮಾರಸ್ವಾಮಿ (HD Kumaraswamy) ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇದೀಗ ಜಯನಗರದ ಅಪೋಲೊ ಆಸ್ಪತ್ರೆಯ ವೈದ್ಯ ಡಾ. ಸತೀಶ್ ಚಂದ್ರ ಪ್ರತಿಕ್ರಿಯೆ ನೀಡಿದ್ದು, ಬಲಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದು ಅವರಿಗೆ ಮಧ್ಯರಾತ್ರಿ ಗೊತ್ತಾಗಿದೆ. ಎಡಭಾಗದಲ್ಲಿ ರಕ್ತನಾಳ ಸಮಸ್ಯೆಯಾಗಿತ್ತು. ಸ್ಟ್ರೋಕ್ ಆದ ಮೂರು ಗಂಟೆ ಒಳಗಡೆ ನಮ್ಮಂತ ದೊಡ್ಡ ಆಸ್ಪತ್ರೆಗೆ ಬಂದರೆ ಗುಣಮುಖ ಮಾಡಬಹುದು. ಕುಮಾರಸ್ವಾಮಿ ಅವರು ತಕ್ಷಣ ಆಸ್ಪತ್ರೆಗೆ ಬಂದಿದ್ದರಿಂದ ಅವರಿಗೆ ಚಿಕಿತ್ಸೆ ನೀಡಿದ್ದೇವೆ. ಈ ರೀತಿ ಖಾಯಿಲೆಯಿಂದ ರಕ್ಷಣೆ ಮಾಡೋದು ಬಹಳ ಮುಖ್ಯ ಎಂದು ಹೇಳಿದ್ದಾರೆ.
ಬೆಳಗ್ಗೆ 3 ಗಂಟೆ ಸುಮಾರಿಗೆ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಬಂದಿದ್ದರು. ಆಗ ಮಾತಿನಲ್ಲಿ ತೊದಲು ಇತ್ತು, ಕೈನಲ್ಲಿ ವೀಕ್ನೆಸ್ ಇತ್ತು. ಹೆಚ್‌ಡಿ ಕುಮಾರಸ್ವಾಮಿ ಅವರನ್ನು ವಿಂಡೋ ಪಿರಿಯಡ್ ಅವಧಿಯಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಕೂಡಲೇ ಎಂಆರ್‌ಐ ಸ್ಕ್ಯಾನ್ ಮಾಡಿ ಸೂಕ್ತ ಚಿಕಿತ್ಸೆ ನೀಡಿದ್ದೇವೆ. ತಕ್ಷಣವೇ ಚಿಕಿತ್ಸೆ ನೀಡಿದ್ದರಿಂದ ಅವರು ಗುಣಮುಖರಾಗಿದ್ದಾರೆ. ಒಂದು ಗಂಟೆಯಲ್ಲಿ ಚೇತರಿಸಿಕೊಂಡಿದ್ದಾರೆ. ಮಾತು ಎಲ್ಲಾ ಸರಿಯಾಗಿದೆ, ಎಲ್ಲರ ಜೊತೆ ಮಾತನಾಡುತ್ತಿದ್ದಾರೆ ಎಂದರು.
ಇದನ್ನೂ ಓದಿ: ಕುಮಾರಸ್ವಾಮಿ ಆರೋಗ್ಯ ಈಗ ಹೇಗಿದೆ? ಅವರಿಗೆ ಏನಾಗಿದೆ? ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಇಲ್ಲಿದೆ
ಹಾರ್ಟ್ ಸೇರಿದಂತೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ರಕ್ತ ಚಲನೆ ಕಡಿಮೆ ಆಗಿ ವೀಕ್ನೆಸ್ ಆಗಿತ್ತು. ಇವತ್ತು ನೋಡಿ ನಾಳೆ ಅವರನ್ನು ವಾರ್ಡ್‌ಗೆ ಶಿಫ್ಟ್ ಮಾಡುತ್ತೇವೆ. ಮುಂದೆ ಯಾವುದೇ ತೊಂದರೆ ಇಲ್ಲ, ರೆಸ್ಟ್ ಏನೂ ಬೇಕಾಗಿಲ್ಲ. ಎರಡು, ಮೂರು ದಿನಗಳ ಬಳಿಕ ಅವರು ಕೆಲಸ ಮಾಡಬಹುದು ಎಂದು ಡಾ.ಸತೀಶ್ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಹೆಚ್‌ಡಿ ಕುಮಾರಸ್ವಾಮಿ ನಿಮ್ಮ ಮುಂದೆ ಇರುತ್ತಾರೆ: ಅನಿತಾ ಕುಮಾರಸ್ವಾಮಿ
ಅಪೋಲೋ ಆಸ್ಪತ್ರೆ ಬಳಿ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇತ್ತೀಚೆಗೆ ಐಸ್ ಲ್ಯಾಂಡ್ಗೆ ಹೋಗಿದ್ದೆವು. ಅಲ್ಲಿಂದ ಬಂದ ಮೇಲೆ ಅವರಿಗೆ ಕಫಾ ಇತ್ತು. ಮೈ ಕೈ ನೋವು ಜ್ವರ ತುಂಬಾ ಇತ್ತು. ಹಾಗಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇವೆ. ಶುಕ್ರವಾರ ಬೆಳಗ್ಗೆ ನಿಮ್ಮ ಮುಂದೆ ಇರುತ್ತಾರೆ. ಸುಳ್ಳಿ ಸುದ್ದಿ ಹಬ್ಬಿಸುವುದು ಬೇಡ. ಯಾರು ಊಹಾಪೋಹ ಬೇಡ. ಶುಕ್ರವಾರ ಬೆಳಗ್ಗೆ ಮನೆಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯ ಹಿನ್ನೆಲೆ ಕುಮಾರಸ್ವಾಮಿ ಕುಟುಂಬಸ್ಥರು ಮತ್ತು ಆಪ್ತರಿಗೆ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಕರೆ ಮಾಡಿ, ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.