ಡಿನೋಟೆಫಿಕೇಶನ್ ಪ್ರಕರಣ: ಮಾಜಿ ಸಿಎಂ ಕುಮಾರಸ್ವಾಮಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಬಂಧನದ ಭೀತಿ!

ಈ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಏಪ್ರಿಲ್ 17ರ ಒಳಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಲ್ಲಿ ಬಂಧನದ ಭೀತಿ ಎದುರಿಸುವಂತಾಗಿದೆ.

ಡಿನೋಟೆಫಿಕೇಶನ್ ಪ್ರಕರಣ: ಮಾಜಿ ಸಿಎಂ ಕುಮಾರಸ್ವಾಮಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಬಂಧನದ ಭೀತಿ!
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Apr 01, 2021 | 6:19 PM

ಬೆಂಗಳೂರು: ಹಲಗೇವಡೇರಹಳ್ಳಿ ಡಿ‌ನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಗರಂ ಆಗಿದೆ. ಜೆಡಿಎಸ್​ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಈ ಪ್ರಕರಣದ ವಿಚಾರಣೆಗೆ ಪದೇ ಪದೇ ಗೈರು ಹಾಜರಾಗುತ್ತಿದ್ದರು. ಈ ಬಾರಿಯ ವಿಚಾರಣೆಗೆ ಕೊರೊನಾ ಕ್ವಾರಂಟೈನ್​ನಲ್ಲಿರುವ ಕಾರಣದಿಂದ ವಿನಾಯಿತಿ ನೀಡಲು ಅವರು ಮನವಿ ಮಾಡಿದ್ದರು. ಆದರೆ ಕುಮಾರಸ್ವಾಮಿ ಅವರ ಅರ್ಜಿಯ ವಿರುದ್ಧ ಮುನಿಸಿಕೊಂಡಿರುವ ಕೋರ್ಟ್, ‘ನೀವು ಕ್ವಾರಂಟೈನ್ ಆಗಿದ್ದರೆ ಸಾರ್ವಜನಿಕವಾಗಿ ಹೊರಗೆ ಕಾಣಿಸಬಾರದು. ಹಾಗೇನಾದರೂ ಕಾಣಿಸಿಕೊಂಡರೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗುವುದು ಎಂದು ತಾಕೀತು ಮಾಡಿದೆ. ಈ ಮೂಲಕ ಒಂದುವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಅವಧಿಯೊಳಗೆ (ಏಪ್ರಿಲ್ 17) ಸಾರ್ವಜನಿಕವಾಗಿ ಕಾಣಿಸಿಕೊಂಡಲ್ಲಿ ಬಂಧನದ ಭೀತಿ ಎದುರಿಸುವಂತಾಗಿದೆ. ಅಲ್ಲದೇ ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಏಪ್ರಿಲ್ 17ರಂದು ಸಮನ್ಸ್ ಜಾರಿಗೊಳಿಸಲಾಗಿದೆ.

ಏಪ್ರಿಲ್ 17ರವರೆಗೂ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಬಹಿರಂಗವಾಗಿ ಕಾಣಿಸಿಕೊಳ್ಳುವಂತಿಲ್ಲ; ಕಾಣಿಸಿಕೊಂಡರೆ ಅರೆಸ್ಟ್ ವಾರಂಟ್​ ಜಾರಿ: ಕೋರ್ಟ್ ಆದೇಶ

ಈ ಮೊದಲು ಹಲಗೇವಡೇರಹಳ್ಳಿ ಡಿ‌ನೋಟಿಫಿಕೇಷನ್ ಪ್ರಕರಣದ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು. ಪ್ರಕರಣದ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿತ್ತು. ನ್ಯಾ. ಅಶೋಕ್ ಭೂಷಣ್​ ‌ನೇತೃತ್ವದ ಪೀಠದಲ್ಲಿ ನಡೆದ ವಿಚಾರಣೆ ವೇಳೆ ಈ ತೀರ್ಮಾನ ಹೊರಬಿದ್ದಿತ್ತು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿತ್ತು. ಚಾಮರಾಜನಗರದ ಎಂ.ಎಸ್.ಮಹದೇವಸ್ವಾಮಿ ಎಂಬುವವರು ಈ ಈ ದೂರು ಸಲ್ಲಿಸಿದ್ದರು.

ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನ ಆದೇಶ ಪ್ರಶ್ನಿಸಿ, ಎಚ್.ಡಿ ಕುಮಾರಸ್ವಾಮಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಎಚ್.ಡಿ. ಕುಮಾರಸ್ವಾಮಿ ಅರ್ಜಿ ವಜಾಗೊಳಿಸಿತ್ತು.

ಹೈಕೋರ್ಟ್​ನ ತೀರ್ಪನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಸಹ ಪ್ರಕರಣದ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ಪ್ರಕರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಹಿನ್ನಡೆಯುಂಟಾಗಿತ್ತು. ಇದೀಗ ವಿಚಾರಣೆಗೆ ಗೈರುಹಾಜರಾಗುತ್ತಿದ್ದ ಅವರ ಕುರಿತು ಕೋರ್ಟ್​ ಗರಂ ಆಗಿದೆ.

ಇದನ್ನೂ ಓದಿ: ಏರ್​ಪೋರ್ಟ್ ಚಾಲಕ ಆತ್ಮಹತ್ಯೆ; ಪ್ರತಾಪ್ ಕುಟುಂಬಕ್ಕೆ ಧೈರ್ಯ ತುಂಬಿದ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮೊದಲ ದಿನದ 5 ಕೋಟಿ ಹೇಳಿಕೆ ನೆನಪಿಸಿಕೊಂಡ ಎಚ್​.ಡಿ.ಕುಮಾರಸ್ವಾಮಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ