ಅಡಿಗಲ್ಲು ಫಲಕದಲ್ಲಿ ಕನ್ನಡ ನಿರ್ಲಕ್ಷ್ಯ; ಗೃಹ ಸಚಿವರ ಬಳಿ ಸ್ಪಷ್ಟನೆ ಕೇಳಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

|

Updated on: Jan 17, 2021 | 2:08 PM

ಕನ್ನಡ ನೆಲದಲ್ಲಿ ಸ್ಥಾಪನೆಯಾದ ಆರ್‌ಎಎಫ್ ಘಟಕದಲ್ಲಿ ಕನ್ನಡ ಫಲಕ ಇಲ್ಲದಿರುವುದು ಅಕ್ಷಮ್ಯ ಅಪರಾಧವಾಗಿದೆ. ಕೇಂದ್ರ ಸಚಿವ ಅಮಿತ್ ಶಾ ತ್ರಿಭಾಷಾ ಸೂತ್ರ ಉಲ್ಲಂಘಿಸಿದ್ದಾರೆ. ಇದಕ್ಕೆ ಅಮಿತ್ ಷಾ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಡಿಗಲ್ಲು ಫಲಕದಲ್ಲಿ ಕನ್ನಡ ನಿರ್ಲಕ್ಷ್ಯ; ಗೃಹ ಸಚಿವರ ಬಳಿ  ಸ್ಪಷ್ಟನೆ ಕೇಳಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
Follow us on

ಬೆಂಗಳೂರು: ಕ್ಷಿಪ್ರ ಕಾರ್ಯಾಚರಣೆ ಪಡೆ (RAF) ಘಟಕ ಶಂಕುಸ್ಥಾಪನೆಯಲ್ಲಿ ಕನ್ನಡ ನಿರ್ಲಕ್ಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ RAF ಘಟಕ ಶಂಕುಸ್ಥಾಪನೆಯ ನಂತರ ಅನಾವರಣಗೊಳಿಸಿದ ಅಡಿಗಲ್ಲು ಫಲಕದಲ್ಲಿ ಹಿಂದಿ, ಆಂಗ್ಲಭಾಷೆಯ ಫಲಕ ಮಾತ್ರ ಅಳವಡಿಸಲಾಗಿದೆ. ಕನ್ನಡದಲ್ಲಿ ಬರೆಯದೇ ಕನ್ನಡ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ನೆಲದಲ್ಲಿ ಸ್ಥಾಪನೆಯಾದ ಆರ್‌ಎಎಫ್ ಘಟಕದಲ್ಲಿ ಕನ್ನಡ ಫಲಕ ಇಲ್ಲದಿರುವುದು ಅಕ್ಷಮ್ಯ ಅಪರಾಧವಾಗಿದೆ. ಕೇಂದ್ರ ಸಚಿವ ಅಮಿತ್ ಶಾ ತ್ರಿಭಾಷಾ ಸೂತ್ರ ಉಲ್ಲಂಘಿಸಿದ್ದಾರೆ. ಇದಕ್ಕೆ ಅಮಿತ್ ಷಾ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾಡು-ನುಡಿ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಉಪ ಮುಖ್ಯಮಂತ್ರಿಗಳು ಕನ್ನಡಕ್ಕೆ ದ್ರೋಹ ಬಗೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮಿತ್ ಶಾ ಕರ್ನಾಟಕ ಪ್ರವಾಸ: ಭದ್ರಾವತಿಯ RAF ಘಟಕ ಸ್ಥಾಪನೆಗೆ ಭೂಮಿ ಪೂಜೆ

Published On - 12:15 pm, Sun, 17 January 21