AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಲಸಿಕೆ ಕೊಡಿ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹ

HD Kumaraswamy on Covid Vaccine: ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಲಸಿಕೆ ಕೊಡಿ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹ
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
guruganesh bhat
|

Updated on: May 29, 2021 | 5:38 PM

Share

ಬೆಂಗಳೂರು: ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಕೊವಿಡ್ ಲಸಿಕೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕುರಿತು ಟ್ವೀಟ್ ಮಾಡಿರುವ ಅವರು, ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಕೆಲ ದೇಶಗಳು, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಬರುವ ಮುನ್ನ ಲಸಿಕೆ ಪಡೆದಿರಬೇಕೆಂಬ ಷರತ್ತು ವಿಧಿಸಿವೆ.

ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕ್ರಮ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ಆದ್ಯತೆ ಮೇರೆಗೆ ಲಸಿಕೆ ನೀಡುವ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿಯೂ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ಲಸಿಕೆ ನೀಡುವ ಮೂಕ ಓದುವ ಮಕ್ಕಳಿಗೆ ನೆರವಾಗಬೇಕೆಂದು ಟ್ವಿಟರ್​​ನಲ್ಲಿ ಸರ್ಕಾರಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ ಕಡಿಮೆ ಆಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ; ಸಿಎಂ ಯಡಿಯೂರಪ್ಪ ಖಡಕ್ ಸೂಚನೆ

ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣದ ಬಂಧಿತರಿಗೆ ಆಧಾರ್ ಕಾರ್ಡ್ ಸಿಕ್ಕಿದ್ದೇಗೆ?

(Former CM HD Kumaraswamy urges distribute Covid Vaccine to students on preference)