AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದು-ಯಡಿಯೂರಪ್ಪ ಫೈಟ್‌ ನೋಡಿ ಹೆಚ್‌ ಡಿ ಕುಮಾರಸ್ವಾಮಿಗೆ ಸಿಟ್ಟೇಕೆ ಬಂತು ?

ಬೆಂಗಳೂರು: ರಾಜ್ಯ ಸರ್ಕಾರ ಭೃಷ್ಟಾಚಾರದಲ್ಲಿ ತೊಡಗಿದೆ ಎಂಬ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ರಾಜ್ಯ ಬಿಜೆಪಿ ಸರ್ಕಾರ ಕೆಂಡಾಮಂಡಲವಾಗಿದೆ. ಸಿದ್ದರಾಮಯ್ಯ ಅವರ ಆರೋಪದಲ್ಲಿ ಹುರುಳಿಲ್ಲ ಅಂತಾ ರಾಜ್ಯದ ಮುವರು ಪ್ರಮುಖ ಮಂತ್ರಿಗಳು ಮುಖ್ಯಮಂತ್ರಿಗಳ ಪರವಾಗಿ  ತಿರುಗೇಟು ನೀಡಿದ್ದಾರೆ. ಆದ್ರೆ ಸರ್ಕಾರ ಮತ್ತು ವಿಪಕ್ಷ ನಾಯಕರ ಈ ವಾಕ್ಸಮರವನ್ನ ಜೆಡಿಎಸ್‌ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಕೋವಿಡ್‌-19 ಪರಿಕರಗಳ ಖರೀದಿ ಅಕ್ರಮದ […]

ಸಿದ್ದು-ಯಡಿಯೂರಪ್ಪ ಫೈಟ್‌ ನೋಡಿ ಹೆಚ್‌ ಡಿ ಕುಮಾರಸ್ವಾಮಿಗೆ ಸಿಟ್ಟೇಕೆ ಬಂತು ?
Guru
|

Updated on:Jul 24, 2020 | 1:01 PM

Share

ಬೆಂಗಳೂರು: ರಾಜ್ಯ ಸರ್ಕಾರ ಭೃಷ್ಟಾಚಾರದಲ್ಲಿ ತೊಡಗಿದೆ ಎಂಬ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ರಾಜ್ಯ ಬಿಜೆಪಿ ಸರ್ಕಾರ ಕೆಂಡಾಮಂಡಲವಾಗಿದೆ. ಸಿದ್ದರಾಮಯ್ಯ ಅವರ ಆರೋಪದಲ್ಲಿ ಹುರುಳಿಲ್ಲ ಅಂತಾ ರಾಜ್ಯದ ಮುವರು ಪ್ರಮುಖ ಮಂತ್ರಿಗಳು ಮುಖ್ಯಮಂತ್ರಿಗಳ ಪರವಾಗಿ  ತಿರುಗೇಟು ನೀಡಿದ್ದಾರೆ. ಆದ್ರೆ ಸರ್ಕಾರ ಮತ್ತು ವಿಪಕ್ಷ ನಾಯಕರ ಈ ವಾಕ್ಸಮರವನ್ನ ಜೆಡಿಎಸ್‌ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಕೋವಿಡ್‌-19 ಪರಿಕರಗಳ ಖರೀದಿ ಅಕ್ರಮದ ಬಗೆಗಿನ ಅತ್ಯಂತ ಹಳೇ ರಾಷ್ಟ್ರೀಯ ಪಕ್ಷವೊಂದರ ಆರೋಪ, ಅದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಪ್ರತ್ಯಾರೋಪ, ಕಸರೆರಚಾಟವನ್ನು ಗಮನಿಸಿದೆ. ಕೋವಿಡ್‌ ಈ ರಾಜ್ಯದ ಪ್ರತಿಯೊಬ್ಬನ ಜೀವ, ಜೀವನಕ್ಕೆ ಬೆದರಿಕೆಯೊಡ್ಡಿರುವಾಗ, ಬದುಕನ್ನೇ ಕಸಿಯುತ್ತಿರುವಾಗ ಎರಡೂ ಪಕ್ಷಗಳ ಬೇಜವಾಬ್ದಾರಿ ವರ್ತನೆ ಕಂಡು ಬೇಸರವಾಗಿದೆ ಎಂದು ಕಿಡಿಕಾರಿದ್ದಾರೆ.

ಇಷ್ಟೇ ಅಲ್ಲ ಕೋವಿಡ್‌-19 ಪರಿಕರಗಳ ಖರೀದಿಯಲ್ಲಿ ಅಕ್ರಮವೆಸಗಿರುವುದು ನಿಜವೇ ಆಗಿದ್ದರೆ, ಅದು ಆಡಳಿತ ಪಕ್ಷದ ನೈತಿಕತೆಯೇ ಇಲ್ಲದ, ಮನುಷ್ಯತ್ವ ಹೀನ ಕೃತ್ಯವೇ ಸರಿ. ಹಾಗೇನೇ ಕೇವಲ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹಳೇ ರಾಷ್ಟ್ರೀಯ ಪಕ್ಷ ಮತ್ತು ಅದರ ನಾಯಕರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರೆ ಅದು ಆ ನಾಯಕರ ರಾಜಕೀಯ ದಾಹದ ಪ್ರತೀಕ. ಹಳೇ ಪಕ್ಷ ಮತ್ತು ಆಡಳಿತಾರೂಢ ಪಕ್ಷಗಳು ಮೊದಲು ಈ ಕೆಸರೆರಚಾಟವನ್ನ ನಿಲ್ಲಿಸಬೇಕು ಎಂದು ಟೀಕಿಸಿದ್ದಾರೆ.

ನಮ್ಮ ಮೊದಲ ಆದ್ಯತೆ ಜನರ ಜೀವ ಮತ್ತು ಜೀವನವಾಗಬೇಕು. ಮುಖ್ಯಮಂತ್ರಿ ಈ ಬಗ್ಗೆ ಸೂಕ್ತ ಸ್ಪಷ್ಟನೆ ನೀಡಿ, ಪರಿಣಾಮಕಾರಿಯಾಗಿ ಕೋವಿಡ್‌ ಅನ್ನು ನಿಗ್ರಹಿಸುವತ್ತ ಗಮನಹರಿಸಬೇಕು. ಕೋವಿಡ್‌ ನಿಗ್ರಹಿಸುವುದಕ್ಕೆ ಮಾತ್ರ ನಮ್ಮ ಬೆಂಬಲವಿದೆಯೇ ಹೊರತು ನಿಮ್ಮ ಕ್ಷುಲ್ಲಕ ನಡವಳಿಕೆಗಳಿಗಲ್ಲ ಎಂದು ರಾಜ್ಯ ಸರ್ಕಾರವನ್ನ ತಮ್ಮ ಟ್ವೀಟ್‌ನಲ್ಲಿ ತೀವ್ರವಾಗಿ ತರಾಟೆಗೆ ತೆೆಗೆದುಕೊಂಡಿದ್ದಾರೆ.

Published On - 7:54 pm, Thu, 23 July 20