AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು, ಕನ್ನಡಿಗರಿಗಾದ ನೋವಿಗೇನು ಪರಿಹಾರ?: ಮಾಜಿ ಸಿಎಂ ಕುಮಾರಸ್ವಾಮಿ

Ugliest Language in India: ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಕನ್ನಡವನ್ನು ಕೀಳಾಗಿ ಪ್ರತಿಬಿಂಬಿಸಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು, ಕನ್ನಡಿಗರಿಗಾದ ನೋವಿಗೇನು ಪರಿಹಾರ?: ಮಾಜಿ ಸಿಎಂ ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ
TV9 Web
| Updated By: guruganesh bhat|

Updated on:Jun 03, 2021 | 5:51 PM

Share

ಬೆಂಗಳೂರು: ಗೂಗಲ್​ನ ವೆಬ್​ಸೈಟ್ ಒಂದರಲ್ಲಿ ಕನ್ನಡವನ್ನು ಕೀಳಾಗಿ ಬಿಂಬಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ @Google ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ( Ugliest Language in India) ವೆಬ್‌ಪುಟ ಡಿಲೀಟ್‌ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ? ಎಂದು ಅವರು ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.

ಭಾಷೆ ವಿಚಾರದಲ್ಲಿ @GoogleIndia @Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ‘ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ? ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಕನ್ನಡವನ್ನು ಕೀಳಾಗಿ ಪ್ರತಿಬಿಂಬಿಸಿದ ಕ್ರಮವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಕನ್ನಡವನ್ನು ಕೀಳಾಗಿ ಬಿಂಬಿಸಿದ ಗೂಗಲ್ ವಿರುದ್ಧ ಕಾನೂನು ಕ್ರಮ: ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ

Queen of all Languages ಎಂದು ಗೂಗಲ್​ ಸರ್ಚ್​ ಮಾಡಿದರೆ ಉತ್ತರವೇನು ಗೊತ್ತಾ?

(Former CM Kumaraswamy reacts on Ugliest Language in India is Kannada used by Google)

Published On - 5:51 pm, Thu, 3 June 21

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ