ಬೆಂಗಳೂರು: ಗೂಗಲ್ನ ವೆಬ್ಸೈಟ್ ಒಂದರಲ್ಲಿ ಕನ್ನಡವನ್ನು ಕೀಳಾಗಿ ಬಿಂಬಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ @Google ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ( Ugliest Language in India) ವೆಬ್ಪುಟ ಡಿಲೀಟ್ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ? ಎಂದು ಅವರು ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
ಭಾಷೆ ವಿಚಾರದಲ್ಲಿ @GoogleIndia @Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ‘ ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ? ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಕನ್ನಡವನ್ನು ಕೀಳಾಗಿ ಪ್ರತಿಬಿಂಬಿಸಿದ ಕ್ರಮವನ್ನು ಟೀಕಿಸಿದ್ದಾರೆ.
ಇದು ನಿನ್ನ ಭಾಷೆ, ಇದು ದೇಶಭಾಷೆ,
ಇದು ಸಾವಿರಾರು ವರ್ಷಗಳ ಸುಪುಷ್ಟ ಸಾಹಿತ್ಯಭಾಷೆ,
ಇದು ಮಹಾಕವಿಗಳನ್ನೂ ಶಿಲ್ಪಿಗಳನ್ನೂ ರಾಜಾಧಿರಾಜರನ್ನೂ ವೀರಾಧಿವೀರರನ್ನೂ ರಸಋಷಿದಾರ್ಶನಿಕರನ್ನೂ ಹಡೆದಿರುವ ಭಾಷೆ.
–ಕುವೆಂಪು
4/4— H D Kumaraswamy (@hd_kumaraswamy) June 3, 2021
ಭಾಷೆ ವಿಚಾರದಲ್ಲಿ @GoogleIndia @Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘Ugliest language in India’ ಎಂಬ ಹುಡುಕಾಟಕ್ಕೆ #Kannada ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ?
1/4— H D Kumaraswamy (@hd_kumaraswamy) June 3, 2021
#ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ,ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ.
3/4— H D Kumaraswamy (@hd_kumaraswamy) June 3, 2021
ಇದನ್ನೂ ಓದಿ: ಕನ್ನಡವನ್ನು ಕೀಳಾಗಿ ಬಿಂಬಿಸಿದ ಗೂಗಲ್ ವಿರುದ್ಧ ಕಾನೂನು ಕ್ರಮ: ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ
Queen of all Languages ಎಂದು ಗೂಗಲ್ ಸರ್ಚ್ ಮಾಡಿದರೆ ಉತ್ತರವೇನು ಗೊತ್ತಾ?
(Former CM Kumaraswamy reacts on Ugliest Language in India is Kannada used by Google)
Published On - 5:51 pm, Thu, 3 June 21