ಮಾಜಿ ಸಿಎಂ ಸಿದ್ದರಾಮಯ್ಯ ಜೀವಾನಾಧಾರಿತ ಚಿತ್ರ: ಸಿನಿಮಾದ ಮೊದಲ ಪೋಸ್ಟರ್ ರಿಲೀಸ್​

ವಿಧಾನಸಭೆ ಚುನಾವಣೆ ಕಾವೇರಿದ್ದು, ನಿನ್ನೆ(ಮಾ.29) ತಾನೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೆ ಇದೀಗ ‘ಲೀಡರ್ ರಾಮಯ್ಯ' ಹೆಸರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವಾನಾಧಾರಿತ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಜೀವಾನಾಧಾರಿತ ಚಿತ್ರ: ಸಿನಿಮಾದ ಮೊದಲ ಪೋಸ್ಟರ್ ರಿಲೀಸ್​
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Mar 30, 2023 | 1:54 PM

ಬೆಂಗಳೂರು: ವಿಧಾನಸಭೆ ಚುನಾವಣೆ ಕಾವೇರಿದ್ದು, ನಿನ್ನೆ(ಮಾ.29) ತಾನೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೆ ಇದೀಗ ‘ಲೀಡರ್ ರಾಮಯ್ಯ’ ಹೆಸರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಅವರ ಜೀವಾನಾಧಾರಿತ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಹೌದು ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್​ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಕೂಡ ಮಾಡಲಾಗಿದೆ. ವಿಜಯ ಸೇತುಪತಿ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರವನ್ನ ಸತ್ಯರತ್ನ ಅವರು ನಿರ್ದೇಶಿಸಲಿದ್ದಾರೆ. ಜೊತೆಗೆ ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನು ಲೀಡರ್ ರಾಮಯ್ಯ ಸಿನಿಮಾವು ಆಗಸ್ಟ್​​ ತಿಂಗಳಲ್ಲಿ ತೆರೆ ಮೇಲೆ ಬರಲಿದೆ.

20 ಕೋಟಿ ಬಜೆಟ್​ ವೆಚ್ಚದಲ್ಲಿ ಸಿನಿಮಾ ನಿರ್ಮಾಣ

ಸಿದ್ದರಾಮಯ್ಯ ಹುಂಡಿಯಲ್ಲಿ ಜನಿಸಿದ ಸಿದ್ದರಾಮಯ್ಯನವರ ಜೀವನ ತುಂಬಾ ಸ್ವಾರಸ್ಯಕರವಾಗಿದೆ. ಹೌದು ಸಿದ್ದರಾಮಯ್ಯನವರು ಮೊದಲು ಜೆಡಿಎಸ್​ ಪಕ್ಷದಿಂದ ಮೇಲೆದ್ದು, ಬಳಿಕ ಹಣಕಾಸು ಮಂತ್ರಿಯಾಗಿ, ಅತೀ ಹೆಚ್ಚು ಬಜೆಟ್​ ಮಂಡನೆ ಮಾಡಿದ ಮುಖ್ಯಮಂತ್ರಿಯಾಗಿ ಇನ್ನು ಅನೇಕ ವಿಶೇಷತೆಗಳನ್ನ ಸಿದ್ದರಾಮಯ್ಯನವರು ಬದುಕಿನಲ್ಲಿ ನಡೆದಿದೆ. ಇದೀಗ ಇದನ್ನೇ ಇಟ್ಟುಕೊಂಡು ಬರೊಬ್ಬರಿ 20 ಕೋಟಿ ವೆಚ್ಚದಲ್ಲಿ ಸಿನಿಮಾ ಮಾಡಲು ಹೊರಟ್ಟಿದ್ದಾರೆ.

ಇದನ್ನೂ ಓದಿ:Siddaramaiah: ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘಿಸಿದರೇ ಸಿದ್ದರಾಮಯ್ಯ?

ಸಿನಿಮಾ ಕುರಿತು ಸಿದ್ದರಾಮಯ್ಯ ಮಾತು

ಸಿನಿಮಾ ಕುರಿತು ಸಿದ್ದರಾಮಯ್ಯನವರ ನಿವಾಸದಲ್ಲಿ ಮಾತುಕತೆ ನಡೆದಿತ್ತು. ಈ ವೇಳೆ ಸಿದ್ದರಾಮಯ್ಯನವರು ಚುನಾವಣಾ ಸಮಯದಲ್ಲಿ ಇವೆಲ್ಲಾ ಬೇಕಾ ಎಂದು ಪ್ರಶ್ನೇ ಮಾಡಿದ್ದರು. ಸುಮ್ಮನೆ 20 ಕೋಟಿಯನ್ನ ಯಾಕೆ ಹಾಳು ಮಾಡುತ್ತೀರಿ? ಸಿನಿಮಾ ಬೇಡವೆಂದು ಹೇಳಿದ್ದರಂತೆ. ಆದರೆ ಸಿದ್ದರಾಮಯ್ಯ ಬೆಂಬಲಿಗರು ನಿಮ್ಮ ಜೀವನವನ್ನ ತೆರೆಯ ಮೇಲೆ ತೋರಿಸುವುದರಿಂದ ಪಕ್ಷಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ, ಒಪ್ಪಿಕೊಳ್ಳಿ ಎಂದು ಮನವಿ ಮಾಡಿದ್ದರಂತೆ. ಬಳಿಕ ಈ ಕುರಿತು ಯೋಚನೆ ಮಾಡುತ್ತೇನೆ ಎಂದಿದ್ದು, ಇದೀಗ ಸ್ಕ್ರೀಪ್ಟ್​ ರೆಡಿ ಮಾಡಿಕೊಂಡು ಸಿದ್ದರಾಮಯ್ಯನವರಿಗೆ ತೋರಿಸಲು ರೆಡಿಯಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ