SM Krishna: ಮಾಜಿ ಸಿಎಂ ಎಸ್​ಎಂ ಕೃಷ್ಣಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ: ಆರೋಗ್ಯ ಸ್ಥಿರ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 11, 2024 | 10:02 PM

ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ(SM Krishna) ಅವರ ಆರೋಗ್ಯದ ಸ್ಥಿತಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

SM Krishna: ಮಾಜಿ ಸಿಎಂ ಎಸ್​ಎಂ ಕೃಷ್ಣಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ: ಆರೋಗ್ಯ ಸ್ಥಿರ
ಎಸ್​.ಎಂ.ಕೃಷ್ಣ
Follow us on

ಬೆಂಗಳೂರು, ಮೇ.11:ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ(SM Krishna) ಅವರ ಆರೋಗ್ಯದ ಸ್ಥಿತಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಇನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ಎಂ ಕೃಷ್ಣ ಅವರು ಏಪ್ರಿಲ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್​ ಆಗಿದ್ದರು. ಇದಾದ ಬಳಿಕ ಏಪ್ರಿಲ್ 29 ರಂದು ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ:SM Krishna: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ನಿರಂತರ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ. ಎಸ್​ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದು, ಪಪೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Sat, 11 May 24