AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ; ಡಿ. 2ಕ್ಕೆ ಕೋರ್ಟ್​ಗೆ ಖುದ್ದು ಹಾಜರಾಗಲು ಸಮನ್ಸ್ ಜಾರಿ

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡುಯೂರಪ್ಪನವರಿಗೆ ಹೊಸ ಸಂಕಷ್ಟ ಎದುರಾಗಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಹೈಕೋರ್ಟ್​​ನ ತಡೆಯಾಜ್ಞೆ ತೆರವಾದ ಹಿನ್ನೆಲೆಯಲ್ಲಿ ಎಸ್​ಪಿಪಿ ಅಶೋಕ್ ನಾಯ್ಕ್ ಅವರು ಅರ್ಜಿ ಸಲ್ಲಿಸಿದ್ದರು. ಅದರಂತೆ ಬಿಎಸ್ ಯಡಿಯೂರಪ್ಪನವರ ಜೊತೆಗೆ ಇತರೆ ಮೂವರು ಆರೋಪಿಗಳಾದ ವೈ.ಎಂ. ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ. ಮರಿಸ್ವಾಮಿ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ.

ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ; ಡಿ. 2ಕ್ಕೆ ಕೋರ್ಟ್​ಗೆ ಖುದ್ದು ಹಾಜರಾಗಲು ಸಮನ್ಸ್ ಜಾರಿ
Bs Yeddyurappa
ಸುಷ್ಮಾ ಚಕ್ರೆ
|

Updated on: Nov 18, 2025 | 7:04 PM

Share

ಬೆಂಗಳೂರು, ನವೆಂಬರ್ 18: ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa) ಸೇರಿ ನಾಲ್ವರು ಆರೋಪಿಗಳಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 2ರಂದು ಖುದ್ದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಪೋಕ್ಸೋ ಕೇಸ್‌ನ ವಿಚಾರಣೆ ಶುರು ಮಾಡಿರುವ ಟ್ರಯಲ್‌ ಕೋರ್ಟ್‌ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ. ಯಡಿಯೂರಪ್ಪನವರ ಜೊತೆ ಇತರೆ ಮೂವರು ಆರೋಪಿಗಳಾದ ಅರುಣ್, ಮರಿಸ್ವಾಮಿ ಹಾಗೂ ರುದ್ರೇಶ್‌ಗೂ ಸಮನ್ಸ್‌ ಜಾರಿ ಮಾಡಲಾಗಿದೆ. ಟ್ರಯಲ್ ಆರಂಭವಾಗಿರುವ ಕಾರಣದಿಂದ ಆರೋಪಿಗಳು ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ತಿಳಿಸಲಾಗಿದೆ.

ಈ ಪ್ರಕರಣದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲು ಎಸ್‌ಪಿಪಿ ಅಶೋಕ್‌ ನಾಯ್ಕ್‌ ಮನವಿ ಮಾಡಿದ್ದರು. ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್​​ನಲ್ಲಿ ಕಳೆದ ವಾರ ಹಿನ್ನಡೆಯಾಗಿತ್ತು. ಕೆಳಹಂತದ ನ್ಯಾಯಾಲಯ ತಮಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಯಡುಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಯಡಿಯೂರಪ್ಪನವರ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿತ್ತು.

ಇದನ್ನೂ ಓದಿ: ಪೋಕ್ಸೋ ಕೇಸ್​ನಲ್ಲಿ ಬಿಎಸ್ ಯಡಿಯೂರಪ್ಪಗೆ ಟೆನ್ಷನ್: ಆದೇಶ ಕಾಯ್ದಿರಿಸಿದ ಹೈಕೋರ್ಟ್, ವಾದ-ಪ್ರತಿವಾದ ವಿವರ ಇಲ್ಲಿದೆ

ವಿಚಾರಣಾಧೀನ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿರುವುದನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಏಕಸದಸ್ಯ ಪೀಠ ಎತ್ತಿಹಿಡಿದಿತ್ತು. ಇದರ ಪರಿಣಾಮವಾಗಿ, ಯಡಿಯೂರಪ್ಪ ಅವರು ಸಿಐಡಿ (CID) ವಿಚಾರಣೆಯನ್ನು ಎದುರಿಸಲೇಬೇಕಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಇತರ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅವರ ವಿರುದ್ಧದ ಸಿಐಡಿ ತನಿಖೆ ಮುಂದುವರೆಯಲಿದೆ.

ಏನಿದು ಘಟನೆ?:

2024ರಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವನ್ನು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಎದುರಿಸುತ್ತಿದ್ದಾರೆ. ಅವರ ಬಳಿ ಸಹಾಯ ಕೇಳಿ ಹೋದಾಗ ಯಡಿಯೂರಪ್ಪನವರು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಆ ಬಾಲಕಿಯ ತಾಯಿ ದೂರು ನೀಡಿದ್ದರು. ಹೀಗಾಗಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಪೋಕ್ಸೋ ಕೇಸ್​: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪಗೆ ಹೈಕೋರ್ಟ್ ಶಾಕ್​

ಬಳಿಕ, ಇದು ಹೈಪ್ರೊಫೈಲ್ ಕೇಸ್ ಆದ್ದರಿಂದ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಾಕ್ಷ್ಯ ನಾಶಪಡಿಸಿದ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪಗಳ ಮೇಲೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಜೂನ್ 2024ರಲ್ಲಿ ಸಿಐಡಿ 750 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು