ಕಾಂಗ್ರೆಸ್ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಕಾಂಗ್ರೆಸ್ನ ಮಾಜಿ ಶಾಸಕ ದಿ.ಹುಟ್ಟುರ್ಕೆ ಗೋಪಾಲ್ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಈ ಘಟನೆ ನಡೆದಿದ್ದು, ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರ ಸಾವಿಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ.

ಕಾಂಗ್ರೆಸ್ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಕಾಂಗ್ರೆಸ್ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
Updated By: ಪ್ರಸನ್ನ ಹೆಗಡೆ

Updated on: Oct 14, 2025 | 7:33 PM

ಉಡುಪಿ, ಅಕ್ಟೋಬರ್ 14: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್​ನ ಮಾಜಿ ಶಾಸಕ (Congress MLA) ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ನ ಮಾಜಿ ಶಾಸಕ ದಿ.ಹುಟ್ಟುರ್ಕೆ ಗೋಪಾಲ್ ಭಂಡಾರಿ ಅವರು 1999-2004 ಮತ್ತು 2008-2013 ರಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು . ಇದೀಗ ಅವರ ಪುತ್ರ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸುತ್ತಿದ್ದರು. ಮೃತರಿಗೆ ತಾಯಿ, ಒಬ್ಬ ಸಹೋದರ ಮತ್ತು ಒಬ್ಬ ಸಹೋದರಿ, ಪತ್ನಿ, ಇಬ್ಬರು ಮಕ್ಕಳಿದ್ದರು ಎಂದು ಹೇಳಲಾಗುತ್ತಿದೆ.

ಸಾವಿಗೆ ಆರ್ಥಿಕ ಸಮಸ್ಯೆ ಕಾರಣವಿರಬಹುದೆಂಬ ಶಂಕೆ

ಅವರ ಸಾವಿಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಘಟನೆ ಹಿನ್ನೆಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:59 am, Tue, 14 October 25