AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಗಳಾಯ್ತು ಈಗ ಮಾಜಿ ಕ್ರಿಕೆಟರ್​ ಸರದಿ: ಟ್ರಾಫಿಕ್​ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ ಸುನೀಲ್​ ಜೋಶಿ

ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿಗಳು ಧ್ವನಿ ಎತ್ತಿರುವ ಬೆನ್ನಲ್ಲೇ ನಗರದ ಟ್ರಾಫಿಕ್​ ಸಮಸ್ಯೆ ಬಗ್ಗೆ ಮಾಜಿ ಕ್ರಿಕೆಟರ್​ ಸುನೀಲ್​ ಜೋಶಿ ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ.  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯಲ್ಲಿ ಪ್ರತಿನಿತ್ಯ ಉಂಟಾಗುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸುವಂತೆ ಅವರು ಆಗ್ರಹಿಸಿದ್ದಾರೆ.

ಉದ್ಯಮಿಗಳಾಯ್ತು ಈಗ ಮಾಜಿ ಕ್ರಿಕೆಟರ್​ ಸರದಿ: ಟ್ರಾಫಿಕ್​ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ ಸುನೀಲ್​ ಜೋಶಿ
Sunil Joshi
ಪ್ರಸನ್ನ ಹೆಗಡೆ
|

Updated on: Oct 17, 2025 | 10:19 AM

Share

ಬೆಂಗಳೂರು, ಅಕ್ಟೋಬರ್​ 17: ಮೂಲ ಸೌಲರ್ಯಗಳ ಕೊರತೆ, ಟ್ರಾಫಿಕ್ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳಿಂದಾಗಿ ರಾಜಧಾನಿ ಬೆಂಗಳೂರು (Bengaluru) ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದೆ. ನಗರದಲ್ಲಿನ ರಸ್ತೆ ಗುಂಡಿಗಳು ಮತ್ತು ಕಸದ ಬಗ್ಗೆ ಚೀನಾ ಉದ್ಯಮಿಯೊಬ್ಬರು ತಮ್ಮನ್ನು ಪ್ರಶ್ನಿಸಿದ್ದಾರೆಂದು ಬಯೋಕಾನ್ಮುಖ್ಯಸ್ಥೆ ಕಿರಣ್ಮಜುಂದಾರ್ಶಾ ಇತ್ತೀಚೆಗಷ್ಟೇ ಪೋಸ್ಟ್ಮಾಡಿದ್ದರು. ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬೆನ್ನಲ್ಲೇ ಬೆಂಗಳೂರಿನ ಟ್ರಾಫಿಕ್ಸಮಸ್ಯೆ ಬಗ್ಗೆ ಮಾಜಿ ಕ್ರಿಕೆಟರ್ಒಬ್ಬರು ಧ್ವನಿ ಎತ್ತಿದ್ದಾರೆ.

ಬೆಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಟ್ರಾಫಿಕ್ಬಗ್ಗೆ ಮಾಜಿ ಕ್ರಿಕೆಟರ್ಸುನೀಲ್ಜೋಶಿ ಅಸಮಾಧಾನ ಹೊರ ಹಾಕಿದ್ದಾರೆ. ಸರಕು ಸಾಗಣೆ ವಾಹನಗಳಿಂದ ಆಗುತ್ತಿರೋ ತೊಂದರೆ ಬಗ್ಗೆ ಗಮನ ಸೆಳೆದಿದ್ದಾರೆ. ಬಗ್ಗೆ ತಮ್ಮ ಎಕ್ಸ್ಖಾತೆಯಲ್ಲಿ ಬರೆದುಕೊಂಡಿರುವ ಅವರು, ವಿಮಾನ ನಿಲ್ದಾಣ ಮಾರ್ಗದಲ್ಲಿ ಹಗಲಿನ ವೇಳೆಯೂ ಸರಕು ಸಾಗಣೆ ಮಾಡುವ ವಾಹನಗಳು ಸಂಚಾರ ನಡೆಸುತ್ತಿವೆ. ಇವುಗಳಿಗೆ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುವಾಗ ಇದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಸುನೀಲ್​ ಜೋಶಿ ಪೋಸ್ಟ್ನಲ್ಲಿ ಏನಿದೆ?

ಸರಕು ಸಾಗಣೆ ಮಾಡುವ ವಾಹನಗಳು ಫಾಸ್ಟ್ ಲೇನ್‌ಗಳನ್ನು ಬಂದ್ ಮಾಡುತ್ತಿರುವ ಕಾರಣ ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ ಬರುವ ಪ್ರಯಾಣಿಕರು ಭಾರಿ ಟ್ರಾಫಿಕ್ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಸಾಮಾನ್ಯ ಜನರು ಪ್ರಯಾಣಿಸಲು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಬಗ್ಗೆ ದಯವಿಟ್ಟು ಕ್ರಮ ಕೈಗೊಳ್ಳಿ ಎಂದು ಸುನೀಲ್​ ಜೋಶಿ ಆಗ್ರಹಿಸಿದ್ದಾರೆ. ಜೊತೆಗೆ ಪೋಸ್ಟ್ಅನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ಅವರಿಗೆ ಟ್ಯಾಗ್ಮಾಡಿದ್ದಾರೆ.|

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ