ಡಿಕೆಶಿ ಸಿಬಿಐ ತನಿಖೆ ವಾಪಸ್: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದ ಅಶ್ವತ್ಥ್‌ ನಾರಾಯಣ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುವ ಪ್ರಸ್ತಾವನೆಗೆ ಸಿದ್ದರಾಮಯ್ಯ ಸಂಪುಟ ಅನುಮೋದನೆ ನೀಡಿದೆ. ಈ ಬಗ್ಗೆ ವಿಪಕ್ಷ ಬಿಜೆಪಿ, ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕುತ್ತಿದೆ. ಸಂಪುಟದ ನಿರ್ಧಾರವನ್ನು ಟೀಕಿಸಿದ ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ, ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದಿದ್ದಾರೆ.

ಡಿಕೆಶಿ ಸಿಬಿಐ ತನಿಖೆ ವಾಪಸ್: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದ ಅಶ್ವತ್ಥ್‌ ನಾರಾಯಣ
ಬೆಂಗಳೂರು ಕಂಬಳದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi

Updated on:Nov 25, 2023 | 7:23 PM

ಬೆಂಗಳೂರು, ನ.25: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಸಿಎನ್ ಅಶ್ವತ್ಥ ನಾರಾಯಣ (CN Ashwath Narayan) ಹೇಳಿದರು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುವ ಪ್ರಸ್ತಾವನೆಗೆ ಸಿದ್ದರಾಮಯ್ಯ ಸಂಪುಟ ಅನುಮೋದನೆ ನೀಡಿದ್ದನ್ನು ಅಶ್ವತ್ಥನಾರಾಯಣ ಟೀಕಿಸುತ್ತಾ ಈ ಹೇಳಿಕೆ ನೀಡಿದರು.

ಕಲಬುರಗಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡುವಾಗ ನಿಯಮ ಉಲ್ಲಂಘಿಸಿಲ್ಲ. ಬಿಜೆಪಿ ಸರ್ಕಾರದಿಂದ ಯಾವುದೇ ರೀತಿ ಕಾನೂನು ಉಲ್ಲಂಘನೆ ಆಗಿಲ್ಲ. ಆ ರೀತಿ ಏನಾದರು ಆಗಿದ್ದರೆ ಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಬೇಕಿತ್ತು. ಏಕೆ ನ್ಯಾಯಾಲಯಕ್ಕೆ ಹೋಗಿಲ್ಲ? ಈ ವಿಚಾರದಲ್ಲಿ ಕಾಂಗ್ರೆಸ್ ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ವರ್ತಿಸುತ್ತಿದೆ ಎಂದರು.

ಇದನ್ನೂ ಓದಿ: ಸಿಬಿಐ ತನಿಖೆಯಿಂದ ಪಾರಾಗಲು ಡಿಕೆ ಶಿವಕುಮಾರ್​ಗಿದೆ ಸವಾಲು, ಸಿಬಿಐ ಮುಂದಿನ ದಾರಿ ಏನು?

ನಾವು ಅಧಿಕಾರದಲ್ಲಿದ್ದಾಗ ಎಲ್ಲವೂ ಕಾನೂನು ಪ್ರಕಾರ ಮಾಡಿದ್ದೇವೆ. ನಿಯಮ ಉಲ್ಲಂಘಿಸಿದ್ದರೆ ಕೋರ್ಟ್‌ ಐದೇ ನಿಮಿಷದಲ್ಲಿ ತಿರಸ್ಕರಿಸುತ್ತಿತ್ತು. ಈ ಹಿಂದೆಯೂ ಬೇರೆಬೇರೆ ಸರ್ಕಾರಗಳು ಹಿಂಪಡೆಯಲು ಯತ್ನಿಸಿ ವಿಫಲವಾಗಿವೆ. ಹಾಗಾಗಿ ಈ ವಿಚಾರದಲ್ಲೂ ಸಿಬಿಐ ತನಿಖೆಯೇ ಮುಂದುವರಿಯುತ್ತದೆ. ಸತ್ಯಕ್ಕೆ, ನ್ಯಾಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದರು.

ಆದಾಯಕ್ಕಿಂತ ಹೆಚ್ಚು ಆಸ್ತಿ ಎಲ್ಲಿಂದ ಗಳಿಕೆಯಾಗಿದೆ? ಎಲ್ಲಿಂದ ಬಂತು? ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಇದಕ್ಕೆ ಉತ್ತರ ಕೊಡಬೇಕು. ಏಕೆ ಹೆದರಿಕೊಳ್ಳುತ್ತಿದ್ದೀರಿ? ಏಕೆ ಓಡಿ ಹೋಗುತ್ತಿದ್ದೀರೆಂದು ಡಿಕೆ ಶಿವಕುಮಾರ್ ಅವರನ್ನು ಕೇಳಿದ ಅಶ್ವತ್ಥ ನಾರಾಯಣ, ಬೀಸೋ ದೊಣ್ಣೆ ತಪ್ಪಿಸಿಕೊಂಡರೆ ನೂರು ವರ್ಷ ಆಯಸ್ಸು ಅನ್ನೋ ರೀತಿಯಲ್ಲಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೀರಿ, ಇದು ಸರಿಯಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರೀ ಭ್ರಷ್ಟಾಚಾರದಲ್ಲೇ ತೊಡಗಿದೆ. ಹಾಗಾಗಿ ಈ ಕೇಸನ್ನೂ ಸಿಬಿಐ ತನಿಖೆಯಿಂದ ಹಿಂಪಡೆಯಲು ಮುಂದಾಗಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Sat, 25 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್