AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Justice Rama Jois: ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ಬೆಂಗಳೂರಿನಲ್ಲಿ ನಿಧನ

Rama Jois No More | ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ಹೃದಯಾಘಾತದಿಂದ ಬೆಳಗ್ಗೆ 7.30ರ ಸುಮಾರಿಗೆ ವಿಧಿವಶರಾಗಿದ್ದಾರೆ.

Justice Rama Jois: ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ಬೆಂಗಳೂರಿನಲ್ಲಿ ನಿಧನ
ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್
ಆಯೇಷಾ ಬಾನು
|

Updated on:Feb 16, 2021 | 11:14 AM

Share

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ಹೃದಯಾಘಾತದಿಂದ ಬೆಳಗ್ಗೆ 7.30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಬಿಹಾರ, ಛತ್ತೀಸ್‌ಗಢದಲ್ಲಿ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು.

ಸಂತಾಪ ಸೂಚಿಸಿದ ಸಿಎಂ ಬಿ.ಎಸ್​ವೈ ನಿವೃತ್ತ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯವರೇ ಆದ ರಾಮಾ ಜೋಯಿಸ್ ಅವರು ಜಾರ್ಖಂಡ್ ಹಾಗೂ ಬಿಹಾರದ ರಾಜ್ಯಪಾಲರಾಗಿ, ರಾಜ್ಯಸಭಾ ಸದಸ್ಯರಾಗಿ, ಪಂಜಾಬ್ ಮತ್ತು ಹರಿಯಾಣ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಸಲ್ಲಿಸಿರುವ ಸೇವೆ ಅನನ್ಯವಾದುದು. ಕಾನೂನು ತಜ್ಞರಾಗಿದ್ದ ಅವರು ರಚಿಸಿದ ಕೃತಿಗಳೂ ದೇಶದ ಕಾನೂನು ವ್ಯವಸ್ಥೆ, ಸಂವಿಧಾನದ ಕುರಿತು ಬೆಳಕು ಚೆಲ್ಲುವ ಪ್ರಯತ್ನವಾಗಿತ್ತು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆ ವಾಸ ಅನುಭವಿಸಿದ್ದ ನ್ಯಾಯಮೂರ್ತಿ ಜೋಯಿಸ್ ಅವರು ರಾಜ್ಯಸಭಾ ಸದಸ್ಯರಾಗಿ ಗಮನ ಸೆಳೆದಿದ್ದಾರೆ. ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ಚಿಂತಕರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಬಂಧು ವರ್ಗ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸಂತಾಪ ಸೂಚಿಸಿದ ಸುರೇಶ್ ಕುಮಾರ್ ಇನ್ನು ಸಚಿವ ಸುರೇಶ್ ಕುಮಾರ್ ಸಹ ಟ್ವೀಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ವಿಧಿವಶ

Published On - 9:35 am, Tue, 16 February 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ