Justice Rama Jois: ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ಬೆಂಗಳೂರಿನಲ್ಲಿ ನಿಧನ

|

Updated on: Feb 16, 2021 | 11:14 AM

Rama Jois No More | ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ಹೃದಯಾಘಾತದಿಂದ ಬೆಳಗ್ಗೆ 7.30ರ ಸುಮಾರಿಗೆ ವಿಧಿವಶರಾಗಿದ್ದಾರೆ.

Justice Rama Jois: ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ಬೆಂಗಳೂರಿನಲ್ಲಿ ನಿಧನ
ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್
Follow us on

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ಹೃದಯಾಘಾತದಿಂದ ಬೆಳಗ್ಗೆ 7.30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಬಿಹಾರ, ಛತ್ತೀಸ್‌ಗಢದಲ್ಲಿ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು.

ಸಂತಾಪ ಸೂಚಿಸಿದ ಸಿಎಂ ಬಿ.ಎಸ್​ವೈ
ನಿವೃತ್ತ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯವರೇ ಆದ ರಾಮಾ ಜೋಯಿಸ್ ಅವರು ಜಾರ್ಖಂಡ್ ಹಾಗೂ ಬಿಹಾರದ ರಾಜ್ಯಪಾಲರಾಗಿ, ರಾಜ್ಯಸಭಾ ಸದಸ್ಯರಾಗಿ, ಪಂಜಾಬ್ ಮತ್ತು ಹರಿಯಾಣ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಸಲ್ಲಿಸಿರುವ ಸೇವೆ ಅನನ್ಯವಾದುದು. ಕಾನೂನು ತಜ್ಞರಾಗಿದ್ದ ಅವರು ರಚಿಸಿದ ಕೃತಿಗಳೂ ದೇಶದ ಕಾನೂನು ವ್ಯವಸ್ಥೆ, ಸಂವಿಧಾನದ ಕುರಿತು ಬೆಳಕು ಚೆಲ್ಲುವ ಪ್ರಯತ್ನವಾಗಿತ್ತು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆ ವಾಸ ಅನುಭವಿಸಿದ್ದ ನ್ಯಾಯಮೂರ್ತಿ ಜೋಯಿಸ್ ಅವರು ರಾಜ್ಯಸಭಾ ಸದಸ್ಯರಾಗಿ ಗಮನ ಸೆಳೆದಿದ್ದಾರೆ. ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ಚಿಂತಕರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಬಂಧು ವರ್ಗ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸಂತಾಪ ಸೂಚಿಸಿದ ಸುರೇಶ್ ಕುಮಾರ್
ಇನ್ನು ಸಚಿವ ಸುರೇಶ್ ಕುಮಾರ್ ಸಹ ಟ್ವೀಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ವಿಧಿವಶ

Published On - 9:35 am, Tue, 16 February 21