ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್,ವರದಿಯಲ್ಲೇನಿದೆ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದ್ದು, ಈ ವರದಿಯಲ್ಲೂ ಸಹ ಸಿಎಂ ಸಿದ್ದರಾಮಯ್ಯನವರ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಹಾಗಾದ್ರೆ, ವರದಿಯಲ್ಲೇನಿದೆ ಎನ್ನುವುದನ್ನು ತಿಳಿಯಿರಿ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್,ವರದಿಯಲ್ಲೇನಿದೆ?
Muda Scam
Edited By:

Updated on: Jul 31, 2025 | 7:06 PM

ಬೆಂಗಳೂರು.ಮೈಸೂರು, (ಜುಲೈ 31): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ (MUDA Scam Case) ಸಿಎಂ ಸಿದ್ದರಾಮಯ್ಯ (Siddaramaiah) ಕುಟುಂಬಕ್ಕೆ ಮಹತ್ವದ ರಿಲೀಫ್ ಸಿಕ್ಕಿದೆ. ನಿವೃತ್ತ ನ್ಯಾಯಾಧೀಶ ದೇಸಾಯಿ (judge P. N. Desai) ಕಮಿಟಿ ನೀಡಿದ ವರದಿಯಲ್ಲಿ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದ್ದು, ಸುಪ್ರೀಂಕೋರ್ಟ್ ಬಳಿಕ ಈಗ ದೇಸಾಯಿ ಕಮಿಟಿಯಿಂದಲೂ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಮುಡಾ ಕೇಸ್‌ನಲ್ಲಿ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಇದರ ಬೆನ್ನಲ್ಲೇ ಈಗ ನ್ಯಾ. ದೇಸಾಯಿ ಕಮಿಟಿ ಕೂಡ ಕ್ಲೀನ್ ಚಿಟ್ ನೀಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಇಂದು (ಜುಲೈ 31) ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರದಿ ನೀಡಿದ್ದಾರೆ. ಇನ್ನು ಸಲ್ಲಿಸಿರುವ ವರದಿಯಲ್ಲಿ 14 ಮುಡಾ ಸೈಟ್ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್

ಸಿದ್ದರಾಮಯ್ಯ ತಮ್ಮ ಅಧಿಕಾರ ಬಳಸಿರುವುದು ಕಂಡು ಬಂದಿಲ್ಲ. ತಮ್ಮ ಅಧಿಕಾರ ಬಳಸಿರುವುದಕ್ಕೆ ಸೂಕ್ತ ಪುರಾವೆ ಇಲ್ಲ ಎಂದೂ ನ್ಯಾ. ದೇಸಾಯಿ ಕಮಿಟಿ ವರದಿಯಲ್ಲಿ ಸ್ಪಷ್ಟಪಡಿಸಿದೆ. ಸಿಎಂ ಪತ್ನಿ ಪಾರ್ವತಿ ಸಲ್ಲಿಸಿದ್ದ, ‘ಇಂತಹದ್ದೇ ಜಾಗದಲ್ಲಿ ಪರ್ಯಾಯ ನಿವೇಶನ ಕೊಡಿ’ ಎಂಬ ಅರ್ಜಿ ಪ್ರಸ್ತಾಪ ಮಾಡಿಲ್ಲ. ಆದರೆ, ಈ ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ನಿವೃತ್ತ ನ್ಯಾ. ದೇಸಾಯಿ ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದು, ಈ ವರದಿಯಲ್ಲಿ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್ ಸಿಕ್ಕಿರುವುದು ಮಹತ್ವದ ಬೆಳವಣಿಗೆಯಾಗಿದೆ.

ಇದನ್ನೂ ಓದಿ
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮುಡಾ ಹರಗಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಕೋರ್ಟ್ ಮಹತ್ವದ ಸೂಚನೆ
ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಕೋರ್ಟ್, ಸಿಎಂಗೆ ಟೆನ್ಷನ್​ ಟೆನ್ಷನ್​
ಮುಡಾ ಹಗರಣ: ಕೋರ್ಟ್ ಮೆಟ್ಟಿಲೇರಿದ​ ಇಡಿ, ಸಿದ್ದರಾಮಯ್ಯಗೆ ಢವ ಢವ

ಅಕ್ರಮವಾಗಿ ನಿವೇಶನ ಪಡೆದಿದ್ದಾರೆಂದು ಮೊದಲು ಎಚ್. ವಿಶ್ವನಾಥ್ ಸಿಎಂ ವಿರುದ್ಧ ಆರೋಪ ಮಾಡಿದ್ದರು. ಬಳಿಕ ಸ್ನೇಹಮಯಿ ಕೃಷ್ಣ ಕಾನೂನು ಹೋರಾಟ ನಡೆಸಿದ್ದು, ನ್ಯಾಯಾಲಯದ ಮೊರೆ ಹೋಗಿದ್ದರು. ಇದನ್ನು ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳು ಅಸ್ತ್ರ ಮಾಡಿಕೊಂಡಿದ್ದವು. ವಿಪಕ್ಷಗಳ ಎಂಟ್ರಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ದೇಸಾಯಿ ಕಮಿಟಿ ರಚಿಸಿದ್ದರು. ಅಲ್ಲದೇ 14 ನಿವೇಶನ ವಾಪಸು ಮಾಡಿ, ಕ್ಲೀನ್ ಚಿಟ್ ಸಿಕ್ಕರೆ ವಾಪಸು ಕೊಡಲಿ ಎಂದಿದ್ದರು.

ಕಳೆದ ವಾರ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಈಗ ದೇಸಾಯಿ ಕಮಿಟಿಯಿಂದಲೂ ಕ್ಲೀನ್ ಚಿಟ್ ಸಿಕ್ಕಂತಾಗಿದೆ ಇದರಿಂದ ಸಿಎಂ ಮತ್ತಷ್ಟು ಬಲ ಬಂದಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us