BK Bhattacharya: ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿಕೆ ಭಟ್ಟಾಚಾರ್ಯ ನಿಧನ

BK Bhattacharya Passes Away: ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ (83) ನಿಧನರಾಗಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಅವರೊಂದಿಗೆ ಕಾರ್ಯದರ್ಶಿಯಾಗಿ ಭಟ್ಟಾಚಾರ್ಯ ಅವರು ಸೇವೆ ಸಲ್ಲಿಸಿದ್ದು, ಇದೀಗ ಅವರ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

BK Bhattacharya: ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿಕೆ ಭಟ್ಟಾಚಾರ್ಯ ನಿಧನ
ಬಿ.ಕೆ. ಭಟ್ಟಾಚಾರ್ಯ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 19, 2023 | 4:57 PM

ಬೆಂಗಳೂರು, (ನವೆಂಬರ್ 19): ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ (83)(B.K. Bhattacharya) ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ (Siddaramaiah) ಅವರು ಹಣಕಾಸು ಸಚಿವರಾಗಿದ್ದಾಗ ಅವರೊಂದಿಗೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇನ್ನು ಭಟ್ಟಾಚಾರ್ಯ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.‌

ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಅವರಿಗೆ ಎರಡು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಪತ್ನಿ ತೆರೆಸಾ ಭಟ್ಟಾಚಾರ್ಯ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಇನ್ನು ಐಎಎಸ್ ಅಧಿಕಾರಿಗಳ ಸಂಘದ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬಿ.ಕೆ. ಭಟ್ಟಾಚಾರ್ಯ ಅವರು ಈ ಹಿಂದೆ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಅವರೊಂದಿಗೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 1940 ಡಿಸೆಂಬರ್ 5 ರಂದು ಜನಿಸಿದ್ದ ಬಿ.ಕೆ. ಭಟ್ಟಾಚಾರ್ಯ ಅವರು 2000ನೇ ಇಸ್ವಿಯ ಡಿಸೆಂಬರ್ 30ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾಗಿದ್ದರು.

Published On - 4:56 pm, Sun, 19 November 23

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ