AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಡಿಸ್ಚಾರ್ಜ್: ಪುನರ್ಜನ್ಮ ಸಿಕ್ಕಿದೆ, ಪಾರ್ಶ್ವವಾಯು ಬಗ್ಗೆ ನಿರ್ಲಕ್ಷ್ಯ ಮಾಡ್ಬೇಡಿ ಎಂದು ಕುಮಾರಸ್ವಾಮಿ ಮನವಿ

ಅನಾರೋಗ್ಯದಿಂದ ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯ ವೈದ್ಯರು ಕುಮಾರಸ್ವಾಮಿ ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ತಮ್ಮ ಆರೋಗ್ಯದ ಬಗ್ಗೆ ವಿವರಿಸಿದ್ದು, ಅದು ಈ ಕೆಳಗಿನಂತಿದೆ.

ಮಾಜಿ ಸಿಎಂ ಡಿಸ್ಚಾರ್ಜ್: ಪುನರ್ಜನ್ಮ ಸಿಕ್ಕಿದೆ, ಪಾರ್ಶ್ವವಾಯು ಬಗ್ಗೆ ನಿರ್ಲಕ್ಷ್ಯ ಮಾಡ್ಬೇಡಿ ಎಂದು ಕುಮಾರಸ್ವಾಮಿ ಮನವಿ
ಹೆಚ್​ಡಿ ಕುಮಾರಸ್ವಾಮಿ
Follow us
Anil Kalkere
| Updated By: ರಮೇಶ್ ಬಿ. ಜವಳಗೇರಾ

Updated on:Sep 03, 2023 | 11:53 AM

ಬೆಂಗಳೂರು, (ಸೆಪ್ಟೆಂಬರ್ 03): ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಚೇತರಿಸಿಕೊಂಡಿದ್ದು, ಇದೀಗ ಅವರನ್ನು ಇಂದು (ಸೆಪ್ಟೆಂಬರ್ 03) ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ತೀವ್ರ ಜ್ವರ ಹಾಗೂ ಮೈಲ್ಡ್ ಸ್ಟ್ರೋಕ್ ಆಟ್ಯಾಕ್ ಆಗಿದ್ದರಿಂದ ಆಗಸ್ಟ್ 30 ನಸುಕಿನ ಜಾವ ಬೆಂಗಳೂರಿನ ಜನಯನಗರದಲ್ಲಿ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಎರಡು ದಿನಗಳ ಕಾಲ ಕುಮಾರಸ್ವಾಮಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಅವರನ್ನು ಶುಕ್ರವಾರ ಐಸಿಯುನಿಂದ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು. ಇದೀಗ ಕುಮಾರಸ್ವಾಮಿ ಗುಣಮುಖರಾಗಿದ್ದರಿಂದ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನು  ಡಿಸ್ಚಾರ್ಜ್​ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಭಗವಂತನ ದಯೆ ಹಾಗೂ ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ 5 ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು. ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ‌ ಆಶೀರ್ವಾದದಿಂದ ಪುನರ್​ಜನ್ಮ ಸಿಕ್ಕಿದೆ ಎಂದು ಅಪೋಲೋ‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗೆ ಧನ್ಯವಾದ ತಿಳಿಸಿದರು.

ರಾಜಕೀಯ ಹೊರತುಪಡಿಸಿ ಎರಡು ಮೂರು ವಿಚಾರ ಮಾತನಾಡುತ್ತೇನೆ ಎಂದು ತಮ್ಮ ಆರೋಗ್ಯದ ಬಗ್ಗೆ ವಿವರಿಸಿದ ಕುಮಾರಸ್ವಾಮಿ, ಆಸ್ಪತ್ರೆಗೆ ದಾಖಲಾಗುವ ಮೊದಲು ಫ್ಯಾಮಿಲಿ ವೈದ್ಯ ಮಂಜುನಾಥಗೆ ಫೋನ್ ಮಾಡಿದ್ದೆ. ನಂತರ ಅಫೋಲೋ ಆಸ್ಪತ್ರೆ ತಜ್ಞ ವೈದ್ಯ ಯತೀಂದ್ರ, ಸತೀಶ್ ಸಲಹೆಯಂತೆ ಬುಧವಾರ ಬೆಳಗ್ಗೆ 3:30ರ ಸುಮಾರಿಗೆ ಆಸ್ಪತ್ರೆಗೆ ದಾಖಲಾದೆ. ನನ್ನ ಅದೃಷ್ಟ ನುರಿತ ತಜ್ಞ ವೈದ್ಯರು ಬೆಂಗಳೂರಿನಲ್ಲೇ ಇದ್ರು ತಿಂಗಳಿನಲ್ಲಿ 15 ದಿನ ಅವರು ಹೊರ ದೇಶದಲ್ಲೇ ಇರುತ್ತಿದ್ದರು. ನಿರ್ಲಕ್ಷ್ಯ ಮಾಡದೆ ಕ್ಷಣಕ್ಷಣಕ್ಕೂ ನನ್ನ ಆರೋಗ್ಯ ಸ್ಥಿತಿ ಚೆನ್ನಾಗಿ ನೋಡಿಕೊಂಡರು. ಕೇವಲ 1 ಗಂಟೆಯಲ್ಲೇ ನನ್ನನ್ನ ಮೊದಲ ಸ್ಥಿತಿಗೆ ತಂದ್ರು ಎಂದು ವೈದ್ಯರ ಚಿಕಿತ್ಸೆ ಬಗ್ಗೆ ವಿವರಿಸಿದರು.

ಇದನ್ನೂ ಓದಿ: ಮೈಲ್ಡ್ ಸ್ಟ್ರೋಕ್ ಆದ ಕೂಡಲೇ ಕುಮಾರಸ್ವಾಮಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ಹೆಚ್ಚಿನ ಅಪಾಯ ಸಂಭವಿಸಿಲ್ಲ: ಜಿ ಪರಮೇಶ್ವರ, ಗೃಹ ಸಚಿವ

ಮೂರು ಬಾರಿ ಮರುಜನ್ಮ ಪಡೆದಿದ್ದೇನೆ

ಪಾರ್ಶ್ವವಾಯು ಆದಾಗ ಯಾವಾಗ ರೀತಿ ಸ್ಪಂದಿಸಬೇಕು ಎಂದು ಈಗಷ್ಟೇ ವೈದ್ಯರು ಹೇಳಿದ್ದಾರೆ. ಇದನ್ನ ನಿರ್ಲಕ್ಷ್ಯ ಮಾಡಬೇಡಿ. ಇದು ಗೋಲ್ಡನ್ ಟೈಂ. ಜೀವನ ಪರ್ಯಂತ ಕಾಡುವಂತೆ ಮಾಡಿಕೊಳ್ಳುವುದು ಬೇಡ. ಇದು ಮೂರನೇ ಜನ್ಮವನ್ನ ನನಗೆ ಭಗವಂತ ಕೊಟ್ಟಿದ್ದಾನೆ. 64 ವರ್ಷದಲ್ಲಿ ಮೂರು ಬಾರಿ ಮರುಜನ್ಮ ಪಡೆದಿದ್ದೇನೆ. ವೈದ್ಯಕೀಯ ಹಾಗೂ ಭಗವಂತನ ದಯೆಯಿಂದ ಇಳಿದಿದ್ದೇನೆ. ನಾನು ನಿರ್ಲಕ್ಷ್ಯ ಮಾಡಿದಿದ್ದರೆ ನಿಮ್ಮೊಂದಿಗೆ ಈಗ ಸಹಜವಾಗಿ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಈ ಹಿಂದೆಯೂ  ಎಡಭಾಗ ಸ್ವಾಧೀನ ಕಳೆದುಕೊಂಡಿದ್ದೆ

ಎರಡನೇ ಬಾರಿ ನನಗೆ ಪಾರ್ಶ್ವವಾಯು ಆಗಿದೆ. ಎರಡನೇ ಬಾರಿ ಸಿಎಂ ಆದಾಗ ವಾಲ್ಮೀಕಿ‌ ಜಯಂತಿಯಂದು ಟಿವಿ ವಾಹಿನಿಯೊಂದರಲ್ಲಿ ಕತ್ತಲತ್ತ ತೆರಳಿದ ಕರ್ನಾಟಕ ಎಂದು ಒಂದು ಕಾರ್ಯಕ್ರಮದ ಪ್ರೋಮೊ ಬಂದಿತ್ತು. ಅದನ್ನು ನೋಡಿ ಆಗ ಆಘಾತಕ್ಕೆ ಒಳಗಾಗಿ ಎಡಭಾಗ ಸ್ವಾಧೀನ ಕಳೆದುಕೊಂಡಿದ್ದೆ. ಅವತ್ತು ವೈದ್ಯರು ನೋಡಿದಾಗ ಪಾರಾದೆ. ಆದ್ರೆ, ಈ ಬಾರಿ ಹೆಚ್ಚಾಗಿ ಡ್ಯಾಮೇಜ್ ಆಗಿದೆ. ಭಗವಂತನ ದಯೆಯಿಂದ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಪಾರ್ಶ್ವವಾಯುವನ್ನ ಒಂದು ಕ್ಷಣವನ್ನೂ ವ್ಯರ್ಥ ಮಾಡಬೇಡಿ. ಕುಟುಂಬದಲ್ಲಿ ಯಾರಿಗಾದ್ರೂ ಬಂದಾಗ ಕೂಡಲೇ ಚಿಕಿತ್ಸೆ ಕೊಡಿಸಿ. ಹಣದ ಬಗ್ಗೆ ಯೋಚಿಸಬೇಡಿ, ಜೀವ ಉಳಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ನಾನು ನಿರ್ಲಕ್ಷ್ಯ ಮಾಡಿದ್ರೆ ಶಾಶ್ವತವಾಗಿ ಬೆಡ್ ಮೇಲೆಯೇ ಇರಬೇಕಾಗಿತ್ತು. ನಾಲ್ಕು ಜನಕ್ಕೆ ಸಹಾಯ ಮಾಡಿದ್ದಕ್ಕೆ ಭಗವಂತ ಉಳಿಸಿದ್ದಾರೆ. ಯಾರೂ ಸಹ ಪಾರ್ಶ್ವವಾಯುವನ್ನ ನಿರ್ಲಕ್ಷಿಸಬೇಡಿ. ಗೋಲ್ಡನ್ ಪೀರಿಯಡ್ ಅವಧಿಯನ್ನ ಬಳಕೆ ಮಾಡಿಕೊಳ್ಳಿ ಹೇಳಿದರು.

Published On - 11:47 am, Sun, 3 September 23

ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು