
ಬೆಂಗಳೂರು: KPCC ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ಗೆ ಕೊರೊನಾ ದೃಢವಾಗಿದೆ. ಈ ಬಗ್ಗೆ ದಿನೇಶ್ ಗುಂಡೂರಾವ್ ಖುದ್ದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೊವಿಡ್ ಟೆಸ್ಟ್ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಅಂತಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ.
ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ.
ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 27, 2020
Published On - 11:59 am, Sun, 27 September 20