ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಇಡಿ ವಶಕ್ಕೆ

Updated on: Aug 18, 2026 | 12:58 PM

Shivashankarappa Sahukar: ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಇಡಿ ವಶಕ್ಕೆ ಪಡೆದಿದೆ. ವಿಚಾರಣೆಗೆ ಸಹಕರಿಸದ ಕಾರಣ ಅವರನ್ನು ವಶಕ್ಕೆ ಪಡೆದು, ಮೊಬೈಲ್ ಕೂಡ ಜಪ್ತಿ ಮಾಡಲಾಗಿದೆ. ರಾಜ್ಯಾದ್ಯಂತ 21 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದ್ದು, 400 ಕೋಟಿ ರೂಪಾಯಿ ಹಗರಣದ ತನಿಖೆ ತೀವ್ರಗೊಂಡಿದೆ.

ಬೆಂಗಳೂರು, ಆಗಸ್ಟ್​​ 18: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಹೊಯ್ಸಳ ಡ್ರೀಮ್ಸ್ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಮೊಬೈಲ್ ಅನ್ನು ಕೂಡ ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ಬೆಳಿಗ್ಗೆ 6 ಗಂಟೆಗೆ ಇಡಿ ಅಧಿಕಾರಿಗಳು ಮನೆ ಮೇಲೆ ದಾಳಿ ಮಾಡಿದ್ದು, ಆ ವೇಳೆ ಶಿವಶಂಕರಪ್ಪ ಪತ್ನಿ ದೇವಸ್ಥಾನಕ್ಕೆ ತೆರಳಿದ್ದರು. ಹೀಗಾಗಿ ಅವರನ್ನು ‌ಹುಡುಕಿಕೊಂಡು ದೇವಸ್ಥಾನ ಬಳಿ ತೆರಳಿದ್ದ ಇಡಿ ಅಧಿಕಾರಿಗಳು ತೆರಳಿದ್ದರೆ, ಮತ್ತೊಂದು ಕಡೆಯಿಂದ ಶಿವಶಂಕರಪ್ಪ ಪತ್ನಿ ಮನೆಗೆ ಬಂದಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More