ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾ.ಎನ್.ವೆಂಕಟಾಚಲ(90) ಅವರು ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ಮೂಲದವರಾದ ಎನ್. ವೆಂಕಟಾಚಲ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವೆಂಕಟಾಚಲ ಅವರ ಮಗ ಅರ್ಜುನ್ ವಿದೇಶದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಅಂತ್ಯಸಂಸ್ಕಾರದ ಕುರಿತು ನಿರ್ಧರಿಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
Published On - 11:07 am, Wed, 30 October 19