
ಬೆಂಗಳೂರು: ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತಕ್ಕೆ ಈಡಾಗಿರುವುದು ಬೆಳಕಿಗೆ ಬಂದಿದೆ. ಸಂಜಯ್‌ನಗರ ಮುಖ್ಯರಸ್ತೆ ಸಿಗ್ನಲ್‌ನಲ್ಲಿ ನಿನ್ನೆ ಅಪಘಾತ ಸಂಭವಿಸಿದೆ. ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಅಪಘಾತ ನಡೆದಿದೆ.
ಅದೃಷ್ಟವಶಾತ್ ಅನಿಲ್ ಲಾಡ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಂದ ಹಾಗೆ, ಅನಿಲ್ ಲಾಡ್ ದಂಪತಿ ಗೆಳೆಯನ ಮನೆಗೆ ಹೋಗಿ ಬರುತ್ತಿದ್ದರು. ತಮ್ಮ ರೇಂಜ್ ರೋವರ್ ಕಾರಿನಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಅನಿಲ್ ಪತ್ನಿ ಆರತಿ ಕಾರು ಚಾಲನೆ ಮಾಡುತ್ತಿದ್ದರು ಎಂದು ಹೇಳಲಾಗಿದೆ.
ಈ ವೇಳೆ, ಸಿಗ್ನಲ್‌ನಲ್ಲಿ ತಿರುವು ತೆಗೆದುಕೊಳ್ಳುವಾಗ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ನಿದ್ರೆಯ ಮಂಪರಿನಲ್ಲಿ ಲಾಡ್ ಪತ್ನಿ ಆರತಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ.
ಸದ್ಯ, ಅನಿಲ್ ಲಾಡ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಹನದ ಏರ್‌ಬ್ಯಾಗ್ ಓಪನ್ ಆಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಗೆಳೆತನದ ಸೋಗಿನಲ್ಲಿ.. ಮಾವನ ಮನೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ
Published On - 10:53 pm, Mon, 18 January 21