AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಬ್ಬೊಬ್ಬರು 50 ಸಾವಿರದಿಂದ 1 ಲಕ್ಷದವರೆಗೆ ಫೀಸ್ ತಗೊಂಡಿದ್ದಾರೆ.. ಮೊದಲು ಖಾಸಗಿ ಶಾಲೆ, ಕಾಲೇಜುಗಳನ್ನು ಮಟ್ಟ ಹಾಕಿ’

ಶಾಲಾ ಕಾಲೇಜು ಓಪನ್‌ ಮಾಡೋ ಮೊದಲು ಖಾಸಗಿ ಶಾಲೆ ಮತ್ತು ಕಾಲೇಜುಗಳನ್ನು ಮಟ್ಟ ಹಾಕಿ. ಒಂದೊಂದು ಶಾಲೆ ಹಾಗೂ ಕಾಲೇಜು 50 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಫೀಸ್ ತಗೊಂಡಿದ್ದಾರೆ ಎಂದು ಮಾಜಿ ಸಚಿವ H.D.ರೇವಣ್ಣ ಹೇಳಿದ್ದಾರೆ.

‘ಒಬ್ಬೊಬ್ಬರು 50 ಸಾವಿರದಿಂದ 1 ಲಕ್ಷದವರೆಗೆ ಫೀಸ್ ತಗೊಂಡಿದ್ದಾರೆ.. ಮೊದಲು ಖಾಸಗಿ ಶಾಲೆ, ಕಾಲೇಜುಗಳನ್ನು ಮಟ್ಟ ಹಾಕಿ’
ಮಾಜಿ ಸಚಿವ H.D.ರೇವಣ್ಣ
KUSHAL V
|

Updated on: Dec 24, 2020 | 6:11 PM

Share

ಹಾಸನ: ಶಾಲಾ ಕಾಲೇಜು ಓಪನ್‌ ಮಾಡೋ ಮೊದಲು ಖಾಸಗಿ ಶಾಲೆ ಮತ್ತು ಕಾಲೇಜುಗಳನ್ನು ಮಟ್ಟ ಹಾಕಿ. ಒಂದೊಂದು ಶಾಲೆ ಹಾಗೂ ಕಾಲೇಜು 50 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಫೀಸ್ ತಗೊಂಡಿದ್ದಾರೆ ಎಂದು ಮಾಜಿ ಸಚಿವ H.D.ರೇವಣ್ಣ ಹೇಳಿದ್ದಾರೆ.

ಖಾಸಗಿ ಶಾಲೆಗಳ ಗೊಡ್ಡು ಬೆದರಿಕೆಗೆ ಹೆದರ ಬೇಡಿ ಎಂದು ಜಿಲ್ಲೆಯಲ್ಲಿ ಭಾರಿ ಶುಲ್ಕ ವಸೂಲಿಗೆ ಇಳಿದ ಶಾಲೆಗಳ ವಿರುದ್ಧ ರೇವಣ್ಣ ಕಿಡಿಕಾರಿದ್ದಾರೆ. ಶಾಲಾ‌, ಕಾಲೇಜು ಮತ್ತು ಅರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ಕೊಡಿ ಎಂದು ಈ ಮೂಲಕ, ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿಯದೆ ಸರ್ಕಾರಿ ಶಾಲೆ ಸ್ಥಾಪಿಸಿ ಎಂದು ರೇವಣ್ಣ ಸಲಹೆ ಕೊಟ್ಟಿದ್ದಾರೆ.

‘ಬ್ರಿಟಿಷರ ಕಾಲದ ಕಾಮಗಾರಿಗೂ ತಡೆ ನೀಡಲಾಗಿದೆ’ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಮೈತ್ರಿ ಸರ್ಕಾರ ಮಂಜೂರು ಮಾಡಿದ್ದ ಎಲ್ಲಾ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ. ಜಿಲ್ಲೆಯಲ್ಲಿ 6 ಜನ JDS ಶಾಸಕರಿರೋ ಕಾರಣಕ್ಕೆ ಎಲ್ಲಾ ಕಾಮಗಾರಿ ತಡೆಹಿಡಿಯಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ರೇವಣ್ಣ ವಾಗ್ದಾಳಿ ನಡೆಸಿದರು.

ಬ್ರಿಟಿಷರ ಕಾಲದಲ್ಲಿ ಭೂಸ್ವಾಧೀನ ಆದ ವಿಮಾನ ನಿಲ್ದಾಣದ ಕಾಮಗಾರಿಗೂ ತಡೆ ನೀಡಲಾಗಿದೆ. ಇದಲ್ಲದೆ, ಹಾಸನದ ಆಲೂರು, ಚಿಕ್ಕಮಗಳೂರಿನ ಬೇಲೂರು ಹಾಸನ ರೈಲ್ವೇ ಮಾರ್ಗದ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಕುಮಾರಸ್ವಾಮಿ ಸಿಎಂ ಆಗಿದ್ದ ಕಾಲದಲ್ಲಿ 462 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು ಎಂದು ಮಾಜಿ ಸಚಿವ ರೇವಣ್ಣ ತೀವ್ರ ಆಕ್ರೋಶ ವ್ಯಕಪಡಿಸಿದರು.

ಹಾಸನದ ಚನ್ನಪಟ್ಟಣದಲ್ಲಿ ಕೆರೆ ಅಭಿವೃದ್ಧಿಗೆ ಸ್ಥಳೀಯ ಶಾಸಕ ಪತ್ರಕೊಟ್ಟು ತಡೆ ನೀಡಿದ್ದಾರೆ. ತೋಟಗಾರಿಕೆ ಕಾಲೇಜು ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ, ಹಾಸನ ಬಂಧಿಖಾನೆ ಯೋಜನೆ ಸ್ಥಗಿತಗೊಂಡಿದೆ. ಹಾಗಾಗಿ, ನಾವು ಸಿಎಂ ಮನೆ ಮುಂದೆ ಧರಣಿಮಾಡಲು ತೀರ್ಮಾನ ಮಾಡಿದ್ದೇವೆ. ಜಿಲ್ಲೆಯ 6 ಜನ ಶಾಸಕರು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ರೇವಣ್ಣ ಹೇಳಿದರು.

‘1 ರೂಪಾಯಿ ತಗೊಂಡಿಲ್ಲ, ಆದ್ರೂ ಟ್ರಾನ್ಸ್​ಫರ್​ ಮಾಡಿಕೊಟ್ಟೆ.. ಈಗ ಕೋಟಿ‌ ಲೆಕ್ಕದಲ್ಲಿ ಕೊಟ್ಟು ಬರ್ತಿದಾರೆ’

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್