AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಬೆಳಗಾದ್ರೆ ವರ್ಗಾವಣೆ ದಂಧೆ; ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ರೇವಣ್ಣ

ಹಾಸನ: ಪ್ರಧಾನಿ ಮೋದಿ ಅವ್ರು ನಮ್ಮ ಸರ್ಕಾರವನ್ನು 20 ಪರ್ಸೆಂಟ್ ಸರ್ಕಾರ ಎಂದು ಹೇಳುತ್ತಿದ್ರು. ಆದ್ರೆ ಇದೀಗ ದಿನ ಬೆಳಗಾದ್ರೆ ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬಹುಶಃ ಈ ದಂಧೆಯಿಂದ ಬರುವ ಹಣವನ್ನೇ ನೆರೆ ಪರಿಹಾರಕ್ಕೆ ಕೊಡೋಕೆ ಕಾಯ್ತಿದ್ದಾರೆ ಎಂದು ಹೆಚ್​.ಡಿ.ರೇವಣ್ಣ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಒಂದು ಸಮಾಜದ ಅಧಿಕಾರಿಗಳನ್ನ ಗುರಿಯಾಗಿಸಿ ವರ್ಗಾವಣೆ ದಂಧೆ ನಡೆಯುತ್ತಿದೆ. ಹುದ್ದೆಗೆ ಬಂದ ಆರೇ ತಿಂಗಳಿಗೆ ಮಹಿಳಾ‌ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲೇ ಹೀಗೆ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ […]

ದಿನಬೆಳಗಾದ್ರೆ ವರ್ಗಾವಣೆ ದಂಧೆ; ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ರೇವಣ್ಣ
ಸಾಧು ಶ್ರೀನಾಥ್​
|

Updated on:Sep 16, 2019 | 5:11 PM

Share

ಹಾಸನ: ಪ್ರಧಾನಿ ಮೋದಿ ಅವ್ರು ನಮ್ಮ ಸರ್ಕಾರವನ್ನು 20 ಪರ್ಸೆಂಟ್ ಸರ್ಕಾರ ಎಂದು ಹೇಳುತ್ತಿದ್ರು. ಆದ್ರೆ ಇದೀಗ ದಿನ ಬೆಳಗಾದ್ರೆ ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬಹುಶಃ ಈ ದಂಧೆಯಿಂದ ಬರುವ ಹಣವನ್ನೇ ನೆರೆ ಪರಿಹಾರಕ್ಕೆ ಕೊಡೋಕೆ ಕಾಯ್ತಿದ್ದಾರೆ ಎಂದು ಹೆಚ್​.ಡಿ.ರೇವಣ್ಣ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಒಂದು ಸಮಾಜದ ಅಧಿಕಾರಿಗಳನ್ನ ಗುರಿಯಾಗಿಸಿ ವರ್ಗಾವಣೆ ದಂಧೆ ನಡೆಯುತ್ತಿದೆ. ಹುದ್ದೆಗೆ ಬಂದ ಆರೇ ತಿಂಗಳಿಗೆ ಮಹಿಳಾ‌ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲೇ ಹೀಗೆ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ಹೆಚ್​ಡಿ ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಏನಾದ್ರು ಪಾಪರ್ ಚೀಟಿ ತಗೊಂಡಿದ್ಯಾ? ಅಥವಾ ಸರ್ಕಾರ ದಿವಾಳಿ ಆಗಿದ್ಯಾ ಅಂತ ಘೋಷಣೆ ಮಾಡಲಿ. ಬಿಜೆಪಿ ಸರ್ಕಾರ ನೆರೆ‌ಹಾನಿಗೆ ಪರಿಹಾರ ನೀಡುತ್ತಿಲ್ಲ. ವರ್ಗಾವಣೆ ದಂಧೆಯಾದ್ರೂ ಮಾಡ್ಲಿ, ಏನಾದ್ರು ಮಾಡ್ಲಿ ಮೊದಲು ನೆರೆ ಹಾನಿಗೆ ಪರಿಹಾರ ನೀಡ್ಲಿ.  ಈ ಕುರಿತು ಕೂಡಲೆ ವಿಧಾನಸಭೆ ಅಧಿವೇಶನ ಕರೆದು, ನೆರೆ ಹಾನಿ ಬಗ್ಗೆ ಸಮಗ್ರ ಚರ್ಚೆ ಮಾಡಿ ಎಂದು ಹೆಚ್.​ಡಿ.ರೇವಣ್ಣ ಆಗ್ರಹಿಸಿದ್ದಾರೆ.

ದೋಸ್ತಿ ಸರ್ಕಾರ ಅಧಿಕಾರದಲ್ಲಿದ್ದಾಗ ಹೆಚ್​.ಡಿ.ರೇವಣ್ಣ ವಿರುದ್ಧವೇ ವರ್ಗಾವಣೆ ದಂಧೆ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದವು. ಆದ್ರೆ ಇದೀಗ ಮಾಜಿ ಸಚಿವ ಹೆಚ್.​ಡಿ.ರೇವಣ್ಣ ಅವರೇ ಬಿಜೆಪಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡ್ತಿದ್ದಾರೆ.

Published On - 4:37 pm, Mon, 16 September 19

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!